ಬಿಜೆಪಿ ಟಿಕೆಟ್‌ಗಾಗಿ ಅಭಿಮಾನಿಗಳಿಂದ ದೇವರ ಮೊರೆ


Team Udayavani, Apr 14, 2018, 1:01 PM IST

bid-2.jpg

ಹುಮನಾಬಾದ: ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಇತರ ಪಕ್ಷಗಳು ವಿಧಾನಸಭಾ ಚುನಾವಣೆ ಪ್ರಚಾರ ಪ್ರಾರಂಭಿಸಿ ವಾರಗಳು ಕಳೆದರೂ ಕೂಡ ಬಿಜೆಪಿ ಮುಖಂಡರು ಮಾತ್ರ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೇ ಟಿಕೆಟ್‌ಗಾಗಿ ದೇವರ ಮೊರೆಗೆ ಹೋದ ಪ್ರಸಂಗ ಕೂಡ ನಡೆದಿದೆ.

ಬೀದರ ಜಿಲ್ಲೆಯಲ್ಲಿ ಸದ್ಯ ಹುಮನಾಬಾದ ಮತ ಕ್ಷೇತ್ರದ ಅಭ್ಯರ್ಥಿಗಳ ಕುತೂಹಲ ಹೆಚ್ಚಾಗಿದೆ. ಹಾಲಿ ಶಾಸಕ ರಾಜೇಖರ ಪಾಟೀಲ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಕ್ಷೇತ್ರದಲ್ಲಿ ವದಂತಿ ಹಬ್ಬಿತ್ತು. ಶಾಸಕ ಪಾಟೀಲ ಬಿಜೆಪಿ ಸೇರಿದರೆ, ಬೀದರ್‌ ಜಿಲ್ಲೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆಯನ್ನು ಬಿಜೆಪಿ ಹೆಣೆದಿತ್ತು ಎಂಬ ಮಾತುಗಳು ಕೂಡ ಕ್ಷೇತ್ರದಲ್ಲಿ ಹಬ್ಬಿದ್ದವು. ಆದರೆ ಇವುಗಳಿಗೆ ಯಾರೂ ಕಿವಿಗೊಡದಂತೆ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿಯೇ ಉಳಿದು ಕಾಂಗ್ರೆಸ್‌ ನಿಂದಲೇ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದು, ಸಧ್ಯ ಬಿಜೆಪಿ ಆಕಾಂಕ್ಷಿಗಳ ಮನದಲ್ಲಿ ತಳಮಳ ಶುರುವಾಗಿದೆ.

ರಾಜ್ಯಕ್ಕೆ ಅಮಿತ್‌ ಶಾ ಆಗಮಿಸಿದ್ದಾರೆ. ಯಾದೇ ಸಮಯದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ
ಎಂಬುದನ್ನು ಅರಿತ ಮುಖಂಡರು ಕೆಲವರು ಬೆಂಗಳೂರು ಕಡೆ ಮುಖ ಮಾಡಿದ್ದಾರೆ. ಕೆಲವರು ಯಡಿಯೂರಪ್ಪ ಬೆಂಗಲಿಗರಾದರೆ, ಇನ್ನೂ ಕೆಲವರು ಈಶ್ವರಪ್ಪ, ಸದನಾಂದ ಗೌಡ, ಜಗದೀಶ ಶಟ್ಟರ್‌ ಅವರನ್ನು ಸಂರ್ಪಕಿಸಿ ಟಿಕೆಟ್‌ ಕೊಡಿಸುವ ನಿಟ್ಟಿನಲ್ಲಿ ಸಹಾಯ ಕೋರುತ್ತಿದ್ದಾರೆ. ಈಗಾಗಲೇ ಕೆಲ ಮುಖಂಡರು ತಮ್ಮ ಟಿಕೆಟ್‌ ಖಚಿತವಾಗಿದೆ ಎಂದು ಹೇಳಿಕೊಳ್ಳುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಮಾತ್ರ ಮುಂದಾಗಿಲ್ಲ ಯಾಕೆ ಎಂಬ ಪ್ರಶ್ನೆ ಎದರುರಾಗಿದೆ.

ಬಿಜೆಪಿಯಲ್ಲಿ “ಮನೆ ಒಂದು ಮೂರು ಬಾಗಿಲು’ ಎಂಬತಾಗಿದೆ. ಮುಂಖಡರ ಮಧ್ಯೆ ಭಿನ್ನಮತ ಎದ್ದು ಕಾಣುತ್ತಿದೆ. ಟಿಕೆಟ್‌ಗಾಗಿ
ಹರಸಾಹಸ ನಡೆಸುತ್ತಿರುವ ಆಕಾಂಕ್ಷಿಗಳು ಇದೀಗ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳ ಮೊರೆ ಹೊಗುತ್ತಿದ್ದಾರೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಎಂದೇ ಗುರುತಿಸಿಕೊಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಮಂಠಾಳಕರ್‌ ಅವರಿಗೆ ಪಕ್ಷದ ಮುಖಂಡರು ಟಿಕೆಟ್‌ ನೀಡಲಿ ಎಂದು ಅವರ ಅಭಿಮಾನಿ ಬಳಗ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಅಭೀಷೆಕ ಹಾಗೂ ಪೂಜೆ ಸಲ್ಲಿಸಿದರು.

ರಾಘವೇಂದ್ರ ಜಾಜಿ, ಡಿ.ಸಿ. ಬಿರಾದಾರ, ರಾಜೇಶ ಮಂಠಾಳಕರ್‌, ರಾಜು ಭಂಡಾರಿ, ವಿಠ್ಠಲ ಮಕೈ, ಪಂಡಿತ ಹಿಪ್ಪರಗಾಂವ, ಸುರೇಶ ರೆಡ್ಡಿ, ಬಸವರಾಜ ತಡೋಳಾ, ರಾಜು ಧನ್ನೂರ, ಚಂದ್ರಶೇಖರ ತಾಳಮಡಗಿ, ಸಚೀನ, ಗೋವಿಂದ ಚವ್ಹಾಣ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.