ಉಗ್ರ ದಾಳಿ ಕಟ್ಟೆಚ್ಚರ ವಹಿಸದ ಗೋವಾ ಸರಕರ ವಜಾಕ್ಕೆ ಆಗ್ರಹ
Team Udayavani, Apr 14, 2018, 4:05 PM IST
ಪಣಜಿ : ಭಾರತೀಯ ಕರಾವಳಿ ರಕ್ಷಣಾ ಪಡೆ ಈಚೆಗೆ ಪಶ್ಚಿಮ ಕರಾವಳಿಯಲ್ಲಿ ಭಯೋತ್ಪಾದಕ ದಾಳಿ ನಡೆಯುವ ಬಗ್ಗೆ ಗುಪ್ತಚರ ಮಾಹಿತಿ ಲಭಿಸಿರುವುದರಿಂದ ಕರಾವಳಿ ರಾಜ್ಯ ಸರಕಾರಗಳು ಕಟ್ಟೆಚ್ಚರ ವಹಿಸಬೇಕೆಂದು ಹೊರಡಿಸಿದ ಸೂಚನೆಯನ್ನು ಕಡಗಣಿಸಿ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದಿದ್ದ ಬಿಜೆಪಿ ನೇತೃತ್ವದ ಗೋವಾ ಸರಕಾರವನ್ನು ರಾಜ್ಯಪಾಲೆ ಮೃದುಲಾ ಸಿನ್ಹಾ ಅವರು ವಜಾ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕೋಸ್ಟ್ ಗಾರ್ಡ್ ಎಚ್ಚರಿಕೆಗೆ ಅನುಗುಣವಾಗಿ ಮಹಾರಾಷ್ಟ್ರ, ಗುಜರಾತ್ ಮತ್ತು ಕೇರಳ ಸರಕಾರಗಳು ಕಟ್ಟೆಚ್ಚರ ವಹಿಸಿವೆ. ಆದರೆ ಗೋವಾ ಸರಕಾರ ಮುನ್ನೆಚ್ಚರಿಕೆಯನ್ನು ಕಡೆಗಣಿಸಿತು. ಗೋವೆಯ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೂ ಆಗಿರುವ ಮನೋಹರ್ ಪರ್ರೀಕರ್ ಅವರು ಅಮೆರಿಕೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಅನುಪಸ್ಥಿತಿಯಲ್ಲಿ ಯಾರೂ ಜವಾಬ್ದಾರಿ ವಹಿಸಿಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಗಿರೀಶ್ ಛೋಡಣ್ಕರ್ ಆರೋಪಿಸಿದರು.
ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ಗೋವಾ ಪೊಲೀಸರಿಗೆ ನೊಟೀಸ್ ಜಾರಿ ಮಾಡಿ ಕಟ್ಟೆಚ್ಚರದ ಮುನ್ಸೂಚನೆಯನ್ನು ಕಡೆಗಣಿಸಿದ್ದೇಕೆ ಎಂದು ಪ್ರಶ್ನಿಸಿ ಉತ್ತರ ಪಡೆಯಬೇಕು ಎಂದು ಛೋಡಣ್ಕರ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.