ಕವಿವಿ ಕನ್ನಡ ಅಧ್ಯಯನ ಪೀಠಕ್ಕೆ ಗ್ರಂಥದಾನ
Team Udayavani, Apr 14, 2018, 4:44 PM IST
ಧಾರವಾಡ: ವಚನ ವಾಙ್ಮಯದ ಸುಲಭ ಅಧ್ಯಯನಕ್ಕೆ ಪೂರಕವಾಗಿ ಹಿರಿಯ ಸಂಶೋಧಕ, ಭಾಷಾ ವಿಜ್ಞಾನಿ ಡಾ| ಸಂಗಮೇಶ ಸವದತ್ತಿಮಠ ಅವರು ಬರೆದಿರುವ ವರ್ಣನಾತ್ಮಕ ವಚನ ಪದಕೋಶ ಒಂದು ಉತ್ಕೃಷ್ಟ ಕೃತಿಯಾಗಿದೆ ಎಂದು ಹಿರಿಯ ವಿದ್ವಾಂಸ ಡಾ| ಬಿ.ವಿ. ಮಲ್ಲಾಪುರ ಹೇಳಿದರು.
ಕವಿವಿಯ ಡಾ| ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠ ಮತ್ತು ಕರ್ನಾಟಕ ಸಂಘದ ಆಶ್ರಯದಲ್ಲಿ ಹಿರಿಯ ಸಾಹಿತಿ ಡಾ| ಸಂಗಮೇಶ ಸವದತ್ತಿಮಠ ಅವರು ತಮ್ಮ 75ನೇ ಜನ್ಮದಿನದ ಸ್ಮರಣೆಯಲ್ಲಿ ಕೊಡಮಾಡಿದ 52 ಸಾವಿರ ರೂ. ಮೌಲ್ಯದ ಗ್ರಂಥದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಹಿತ್ಯದ ವಿದ್ಯಾರ್ಥಿಗಳು ಹಳೆಗನ್ನಡ ಸಾಹಿತ್ಯದ ಮಹತ್ವ ಅರಿತುಕೊಳ್ಳುವಲ್ಲಿ ಆ ಸಾಹಿತ್ಯ ಕೃತಿಗಳ ಅಧ್ಯಯನಕ್ಕೆ ಮನಸ್ಸು ಮಾಡಬೇಕು.ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ತಮ್ಮ ಜನ್ಮದಿನೋತ್ಸವ ನೆನಪಿನಲ್ಲಿ ಡಾ| ಸಂಗಮೇಶ ಸವದತ್ತಿಮಠ ಅವರು ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ 52 ಸಾವಿರ ರೂ. ಮುಖಬೆಲೆಯ ಗ್ರಂಥಗಳನ್ನು ಕನ್ನಡ ಅಧ್ಯಯನ ಪೀಠದ ಗ್ರಂಥಾಲಯಕ್ಕೆ ಉಚಿತವಾಗಿ ಕೊಡಮಾಡಿರುವುದು ವಿನೂತನ ಉಪಕ್ರಮವಾಗಿದೆ. ಈ ಮೌಲಿಕ ಕೃತಿಗಳನ್ನು ಆಸಕ್ತಿಯಿಂದ ಅವಲೋಕಿಸಿ ತಮ್ಮ ವ್ಯಾಸಂಗಕ್ಕೆ ಬಳಕೆ ಮಾಡಿಕೊಳ್ಳಬೇಕು ಎಂದರು.
ಹಿರಿಯ ಸಂಶೋಧಕ ಡಾ| ಸಂಗಮೇಶ ಸವದತ್ತಿಮಠ ಮಾತನಾಡಿ, ತಮ್ಮ ಮಾತೃಸಂಸ್ಥೆಯಲ್ಲಿ ಇಂತಹ ಸಮಾರಂಭ ನಡೆದದ್ದು ಸ್ಮರಣೀಯ ಎಂದು ಹೇಳಿದರು. ನಂತರ ಅವರನ್ನು ಸನ್ಮಾನಿಸಲಾಯಿತು. ಡಾ| ಜೆ.ಎಂ. ನಾಗಯ್ಯ ಮತ್ತು ಕರ್ನಾಟಕ ಸಂಘದ ಅಧ್ಯಕ್ಷ ಡಾ| ರಾಜೇಂದ್ರ ನಾಯಕ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾದ ಡಾ| ಟಿ.ಎಂ. ಭಾಸ್ಕರ, ಡಾ| ಧನವಂತ ಹಾಜವಗೋಳ, ಡಾ| ನಿಂಗಪ್ಪ ಮುದೇನೂರ, ಡಾ| ವಿ.ಎಲ್. ಪಾಟೀಲ, ಡಾ| ಅನಿತಾ ಗುಡಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಗಮೇಶ ಹತ್ತರಕಿ ಹಾಗೂ ಸರಸ್ವತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.