ಹೆಮ್ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು: ಮೇನಕಾ ಬೆಂಬಲಿಸಿದ ಹೇಮಾ ಮಾಲಿನಿ
Team Udayavani, Apr 14, 2018, 4:54 PM IST
ಮುಂಬಯಿ : 12 ವರ್ಷಕ್ಕಿಂತ ಕೆಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆ ಶಿಕ್ಷೆ ನೀಡಬೇಕು ಎಂಬ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರ ಅಭಿಪ್ರಾಯವನ್ನು ಹಿರಿಯ ನಟಿ ಮತ್ತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಬೆಂಬಲಿಸಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಪೋಕ್‌ಸೋ ಕಾಯಿದೆಯಲ್ಲಿ 12 ವರ್ಷಕ್ಕಿಂತ ಕಡಿಮೆ ಪ್ರಾಯದ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರದ ಅಪರಾಧಕ್ಕೆ ಮರಣ ದಂಡನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕಾಯಿದೆಗೆ ತಿದ್ದುಪಡಿ ತರಲು ತಾನು ಕ್ಯಾಬಿನೆಟ್ ಟಿಪ್ಪಣಿಯನ್ನು ಸಿದ್ಧಪಡಿಸಿ ಮಂಡಿಸುವುದಾಗಿ ಸಚಿವೆ ಮೇನಕಾ ಗಾಂಧಿ ನಿನ್ನೆ ಹೇಳಿದ್ದರು.
“ಶಿಶುಗಳನ್ನು ಕೂಡ ಬಿಡದ ಮೃಗಗಳ ವಿರುದ್ಧ ರಾಷ್ಟ್ರೀಯ ಆಂದೋಲನಕ್ಕೆ ಟ್ವಿಟರ್‌ನಲ್ಲಿ ಕರೆ ನೀಡಿದ ನಟಿ ಹೇಮಾ ಮಾಲಿನಿ, ಈ ಆಂದೋಲನವನ್ನು ಮಾಧ್ಯಮ ಬೆಂಬಲಿಸಬೇಕು ಎಂದು ಹೇಳಿದರು.
“ದಿನಂಪ್ರತಿ ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದ ಪ್ರಕರಣಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುತ್ತವೆ. ಈ ಉದ್ದನೆಯ ಪಟ್ಟಿಯಲ್ಲಿ ಕಥುವಾ ಮತ್ತು ಉನ್ನಾವೋ ಕೇವಲ ಎರಡು ಉದಾಹರಣೆಗಳು ಮಾತ್ರ. ಮನಸ್ಸು ಮತ್ತು ಹೃದಯವೇ ಇಲ್ಲ ಈ ಅತ್ಯಾಚಾರಿಗಳನ್ನು ಮನುಷ್ಯರೆಂದು ಕರೆಯಲು ಸಾಧ್ಯವೇ ? ಅವರು ನಿಜಕ್ಕೂ ಮೃಗಗಳು; ಅವರು ಎಸಗುವ ಹೀನ ಮತ್ತು ನೀಚ ಕೃತ್ಯಕ್ಕೆ ಅವರಿಗೆ ಗಲ್ಲು ಶಿಕ್ಷೆಯನ್ನೇ ನೀಡಬೇಕು’ ಎಂದು ಮಥುರಾ ಕ್ಷೇತ್ರದ ಸಂಸದೆಯಾಗಿರುವ ಹೇಮಾ ಮಾಲಿನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.