ತಾಕತ್ತಿದ್ದರೆ ನನ್ನ ವಿರುದ್ಧ ಗೆದ್ದು ತೋರಿಸಲಿ: ಶ್ರೀರಾಮುಲು
Team Udayavani, Apr 15, 2018, 6:15 AM IST
ಬಳ್ಳಾರಿ: “ಹಿಂದಿನ ಚುನಾವಣೆಯಲ್ಲಿ ನನ್ನ ಸಹಾಯದಿಂದ ಗೆದ್ದಿಲ್ಲ ಎನ್ನುತ್ತಿರುವ ತಿಪ್ಪೇಸ್ವಾಮಿ, ತಾಕತ್ತಿದ್ದರೆ ಈ ಬಾರಿ ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಅಥವಾ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ’ ಎಂದು ಸಂಸದ ಬಿ.ಶ್ರೀರಾಮುಲು ಬಹಿರಂಗ ಸವಾಲು ಹಾಕಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಆರ್ ಪಕ್ಷದಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರನ್ನು ನಾನು ಕೈ ಹಿಡಿದು ಗೆಲ್ಲಿಸಿದೆ. ಆದರೆ, ತಿಪ್ಪೇಸ್ವಾಮಿ ಇದೀಗ ತಾನು ಯಾರ ಸಹಾಯದಿಂದಲೂ ಗೆದ್ದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಅಥವಾ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ. ಇದು ತಿಪ್ಪೇಸ್ವಾಮಿಯವರಿಗೆ ನಾನು ಒಡ್ಡುತ್ತಿರುವ ಬಹಿರಂಗ ಸವಾಲು. ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಕೇವಲ ನಾಮಪತ್ರ ಸಲ್ಲಿಸಿ, ಎರಡೂ¾ರು ದಿನ ರಾಜ್ಯ ಪ್ರವಾಸ ಮಾಡಿ, ನಂತರ ಕ್ಷೇತ್ರದಲ್ಲೇ ಪ್ರಚಾರ ಮಾಡಿ ಗೆದ್ದು ತೋರಿಸುತ್ತೇನೆ’ ಎಂದು ಸವಾಲು ಹಾಕಿದರು.
ಹಳೆಯ ಫೋಟೊ ಹರಿದಾಟ:
ನಾಯಕನಹಟ್ಟಿಯಲ್ಲಿ ಶುಕ್ರವಾರ ಹಲ್ಲೆ ಘಟನೆ ನಡೆಯುತ್ತಿದ್ದಂತೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೊವೊಂದನ್ನು ಅಪ್‌ಲೋಡ್ ಮಾಡಿ ಬಿ.ಶ್ರೀರಾಮುಲು ಅವರ ಮೇಲೆ ಹಲ್ಲೆಯಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ನಾಲ್ಕು ವರ್ಷಗಳ ಹಿಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಶ್ರೀರಾಮುಲು ಅವರ ಅಂಗಿ ಹರಿದಿತ್ತು. ಆ ಫೋಟೋವನ್ನು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.