ರೋಹಿಣಿ ಸಿಂಧೂರಿ ವಿರುದ್ಧ ಆಧಾರ ರಹಿತ ಆರೋಪ
Team Udayavani, Apr 15, 2018, 6:40 AM IST
ಹಾಸನ/ಮೈಸೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಶೀತಲ ಸಮರ ಮುಂದುವರಿದಿದ್ದು, ಮೈಸೂರು ಪ್ರಾದೇಶಿಕ ಆಯುಕ್ತರ ವಿಚಾರಣಾ ವರದಿಯಲ್ಲಿ ಮತ್ತೆ ಎ.ಮಂಜು ಅವರಿಗೆ ಮುಖಭಂಗವಾಗಿದೆ.
ವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ನಡೆದ ಐಎಎಸ್ ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿಗೆ, ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರಂದೀಪ್ ಡಿ.ಅವರನ್ನು ಹಾಸನಕ್ಕೆ ಸರ್ಕಾರ ವರ್ಗಾಯಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ತಂದು ಹಾಸನದಲ್ಲೇ ಉಳಿದುಕೊಂಡರು. ಚುನಾವಣೆ ಘೋಷಣೆ ನಂತರ ನೀತಿ ಸಂಹಿತೆ ಜಾರಿಯಲ್ಲಿರುವಾಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಿಯಮಬಾಹಿರವಾಗಿ ಕೆಲಸ ನಡೆಯುತ್ತಿದೆ ಎಂದು ಸ್ವತಃ ಜಿಲ್ಲಾಧಿಕಾರಿಯೇ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.ಅದಾದ ಬಳಿಕ ಎ.ಮಂಜು ಅವರು, ಜಿಲ್ಲಾಧಿಕಾರಿ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಜಿಲ್ಲಾಧಿಕಾರಿ ವರ್ಗ ಮಾಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಏ.7ರಂದು ದೂರು ಸಲ್ಲಿಸಿದ್ದರು. ಈ ಸಂಬಂಧ ಚುನಾವಣಾ ಆಯೋಗ ಮೈಸೂರು ಪ್ರಾದೇಶಿಕ ಆಯುಕ್ತರ ವರದಿ ಕೇಳಿತ್ತು.
ವಿಚಾರಣೆ ನಡೆಸಿದ ಮೈಸೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಎನ್.ಕಳಸದ್, ಸಚಿವರು ರೋಹಿಣಿ ಸಿಂಧೂರಿ ವಿರುದ್ಧ ನೀಡಿರುವ ದೂರಿನಲ್ಲಿ ಯಾವುದೇ ಹುರುಳಿಲ್ಲ. ಇದೊಂದು ಆಧಾರ ರಹಿತ ಆರೋಪ ಎಂದು ವರದಿಯಲ್ಲಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.