ಯೋಗ್ಯರ ಆಯ್ಕೆಗೆ ಮತದಾನ ಮಾಡಿ


Team Udayavani, Apr 15, 2018, 2:35 PM IST

vij-1.jpg

ವಿಜಯಪುರ: ಸ್ವಯಂ ಪ್ರೇರಣೆಯಿಂದ ಹಾಗೂ ಅಭಿವೃದ್ಧಿಯ ಪೂರಕವಾಗಿ ಮುಂದಾಲೋಚನೆಯೊಂದಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡುವಂತೆ ಜಿಪಂ ಸಿಇಒ ಎಂ.ಸುಂದರೇಶಬಾಬು ಕರೆ ನೀಡಿದರು. ನಗರದ ರೂಪಂ ಗಾರ್ಮೆಂಟ್ಸ್‌ ಕಾರ್ಖಾನೆಯ ಕಾರ್ಮಿಕರಿಗೆ ಮತದಾನದ ಮಹತ್ವ ಕುರಿತಂತೆ ಜಿಲ್ಲಾ ಸ್ವೀಪ್‌ ಸಮಿತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ವಿಧಾನಸಭೆ ಚುನವಣೆಗಾಗಿ ಮೇ 12ರಂದು ನಡೆಯುವ ಮತದಾನ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಮತದಾರರೂ ತಪ್ಪದೇ ಮತದಾನ ಮಾಡಬೇಕು. ಆ ಮೂಲಕ ವಿಜಯಪುರ ಜಿಲ್ಲೆಯನ್ನು ಮತದಾನದಲ್ಲಿ ಪ್ರತಿಶತ ಸಾಧನೆ ಜಿಲ್ಲೆಯ ಸ್ಥಾನಕ್ಕೆ ತರಬೇಕು. ಇದಕ್ಕಾಗಿ ನೀವು ಮತದಾನ ಮಾಡುವ ಜೊತೆಗೆ ಇತರರನ್ನು ಮತದಾನಕ್ಕೆ ಪ್ರೇರೇಪಿಸಬೇಕು ಎಂದರು. ಅಸಂಘಟಿತ ಕಾರ್ಮಿಕರ ಸಂಖ್ಯಾಬಲ ಹೆಚ್ಚಾಗಿದೆ. ವಿಶೇಷವಾಗಿ ವಿವಿಧ ಕಟ್ಟಡಗಳ ನಿರ್ಮಾಣ ಸೇರಿದಂತೆ ಅನೇಕ ರೀತಿಯ ಕಾರ್ಖಾಣೆಗಳಲ್ಲಿ
ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ತಪ್ಪದೇ ಮತದಾನ ಮಾಡಬೇಕು. ಈ ಬಾರಿಯ ಚುನಾವಣೆ ಅನೇಕ ವಿಶೇಷತೆ ಹೊಂದಿದ್ದು, ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲಾಗಿದೆ. ಇದೇ ಪ್ರಥಮ ಬಾರಿಗೆ ಮತ ಖಾತ್ರಿಯಂತ್ರ ಸಹ ಬಳಸಲಾಗುತ್ತಿದೆ. ಕಾರ್ಮಿಕರು ಈ ಕುರಿತು ಮಾಹಿತಿ ಪಡೆದು ಮತ ಚಲಾಯಿಸುವಂತೆ ಕರೆ ನೀಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಶೇ. 66ರಷ್ಟು ಮತದಾನವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಶೇ. 100ರಷ್ಟು ಮತದಾನ ಮಾಡಬೇಕು. ಇದಕ್ಕಾಗಿ ಚುನಾವಣಾ ಆಯೋಗ ನಿರ್ದೇಶನದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಡಿಮೆ ಮತದಾನದಿಂದ ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹಾಗೂ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಲಿದೆ. ಕಾರಣ 18 ವರ್ಷ ಪೂರೈಸಿದವರೆಲ್ಲರೂ ತಪ್ಪದೇ ಮತದಾನ ಮಾಡಿ ಸುಭದ್ರ ಸಮಾಜ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೆರವಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರೂಪಂ ಗಾರ್ಮೆಂಟ್ಸ ಮಾಲೀಕ ನಿತಿನ ರುಣವಾಲ ಅವರು ಬರುವ ಮೇ 12ರಂದು ಕಾರ್ಮಿಕರು ತಮ್ಮ ಮತದಾನ ಹಕ್ಕು ಚಲಾಯಿಸಲು ಕಾರ್ಖಾನೆಗೆ ರಜೆ ನೀಡಲಾಗುವುದು. ಮತದಾನ ಪವಿತ್ರ ಕೆಲಸ. ಅತ್ಯಂತ ಅಮೂಲ್ಯ ಕರ್ತವ್ಯ. ಹೀಗಾಗಿ ಯೋಗ್ಯ ಅಭ್ಯರ್ಥಿ ಆಯ್ಕೆಗೆ ತಪ್ಪದೇ ಮತದಾನ ಮಾಡಲು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯಯೋಜನಾಧಿಕಾರಿ ಜಿ.ವಿ. ದಶವಂತ, ಯೋಜನಾ ನಿರ್ದೇಶಕ ಸಿ.ಬಿ. ಕುಂಬಾರ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಡಿ. ನದಾಫ್‌ ಇದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಅಶೋಕ ಭಾವಿಕಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.