ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಸುದರ್ಶನ
Team Udayavani, Apr 15, 2018, 4:04 PM IST
ರಾಯಚೂರು: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಅಂಥ ಸಂವಿಧಾನ ನೀಡಿದ ಡಾ| ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಮಾದರಿಯಾಗಿವೆ ಎಂದು ರಾಯಚೂರು ಆಕಾಶವಾಣಿ ಮುಖ್ಯಸ್ಥ ಎಂ.ಎ.ಸುದರ್ಶನ ಹೇಳಿದರು.
ಸ್ಥಳೀಯ ಜಿಲ್ಲಾ ಆಕಾಶವಾಣಿ ಕೇಂದ್ರದಲ್ಲಿ ಶನಿವಾರ ನಡೆದ ಡಾ| ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠೊರ ಸನ್ನಿವೇಶದಲ್ಲಿ ಜೀವನ ನಡೆಸಿದ ಅಂಬೇಡ್ಕರ್ ಬಾಲ್ಯದಲ್ಲಿ ಅನುಭವಿಸಿದ ಅಪಮಾನಗಳಿಗೆ ಕೊನೆಯಿಲ್ಲ. ಅದು ಕಲ್ಲು ಮುಳ್ಳುಗಳ ನೋವಿನ ಹಾದಿಯಾಗಿತ್ತು. ಅವರು ಅನುಭವಿಸಿದ ಕಷ್ಟ, ಯಾತನೆಗಳು ಬೇರೆ ಯಾವ ಮಹನೀಯರೂ ಅನುಭವಿಸಿಲ್ಲ ಎಂದರು.
ಅಂಬೇಡ್ಕರ್ ದೇಶದಲ್ಲಿ ಎಲ್ಲರೂ ಸಮಾನವಾಗಿ ಜೀವಿಸಲು ಸಂವಿಧಾನದ ಮೂಲಕ ಎಲ್ಲರಿಗೆ ಅನುಕೂಲ ಮಾಡಿ ಸರ್ವರಿಗೂ ಸಮಪಾಲು ಸಿಗುವಂತೆ ಶ್ರಮಿಸಿದರು. ದಲಿತರಿಗಾಗಿ ಹೋರಾಡದೇ ಎಲ್ಲ ಶೋಷಿತ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು ಎಂದರು.
ಕೇಂದ್ರದ ಕಾರ್ಯಕ್ರಮ ನಿರ್ವಾಹಕ ಡಾ| ವಿ.ಜಿ. ಬಾವಲತ್ತಿ ಮಾತನಾಡಿ, ಸಂವಿಧಾನ ಎಲ್ಲರಿಗೂ ಸಮನಾದ ಅವಕಾಶ ನೀಡಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆಯಿಂದ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ ಎಂದರು. ಕೇಂದ್ರದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.