![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Apr 15, 2018, 4:08 PM IST
ಪುಣೆ: ಪುಣೆ ಬಂಟರ ಸಂಘದ ವತಿಯಿಂದ ಎ. 14ರಂದು ನೂತನ ವಾಗಿ ನಿರ್ಮಾಣಗೊಂಡು ಇತ್ತೀಚೆಗೆ ಲೋಕಾರ್ಪಣೆ ಗೊಂಡ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದಲ್ಲಿ ಬಿಸುಪರ್ಬ ಹಾಗೂ ಬಂಟ ದಿನಾಚರಣೆಯನ್ನು ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಪಿಂಪ್ರಿ ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿಯವರು ಮೊದಲಿಗೆ ಭವನದ ಅಂಗಳದಲ್ಲಿ ಬಂಟ ಧ್ವಜಾರೋಹಣಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯಿತ್ತರು. ಅನಂತರ ಬಂಟಗೀತೆಯನ್ನು ಹಾಡಲಾಯಿತು.
ಈ ಸಂದರ್ಭ ಕಲಾಜಗತ್ತು ಮುಂಬಯಿಯ ವಿಜಯಕುಮಾರ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ರಾಮಕೃಷ್ಣ ಶೆಟ್ಟಿ, ಮಾಧವ ಆರ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಸಂಘದ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ನಿಟ್ಟೆ, ಶಶೀಂದ್ರ ಶೆಟ್ಟಿ, ವಿಶ್ವನಾಥ ಶೆಟ್ಟಿ, ಸುಧಾಕರ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ತಾರಾನಾಥ ಕೆ. ರೈ ಮೇಗಿನಗುತ್ತು, ಮಿಯಾರು ರಾಜ್‌ಕುಮಾರ್ ಶೆಟ್ಟಿ, ಗಣೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಪ್ರಶಾಂತ್ ಶೆಟ್ಟಿ, ಗಣೇಶ್ ಹೆಗ್ಡೆ, ವಿವೇಕಾನಂದ ಶೆಟ್ಟಿ ಆವರ್ಸೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ ಶೆಟ್ಟಿ ಕಳತ್ತೂರು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್ ಶೆಟ್ಟಿ ಮತ್ತು ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿ ಸದಸ್ಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
You seem to have an Ad Blocker on.
To continue reading, please turn it off or whitelist Udayavani.