ಜನರ ಸಮಸ್ಯೆಗಳಿಗೆ ಸ್ಪಂದನ ನಮ್ಮ ಮೂಲ ಉದ್ದೇಶ

Team Udayavani, Apr 16, 2018, 9:40 AM IST

Ismail-15-4.jpg

ಕಳೆದ ಚುನಾವಣೆಯಲ್ಲಿ ಹಿನ್ನಡೆ ಏಕಾಯಿತು ?
ಕಳೆದ ಚುನಾವಣೆಯಲ್ಲಿ ನಮಗೆ ಮೊದಲ ಸ್ಪರ್ಧೆಯ ಅನುಭವವಾಗಿದ್ದರಿಂದ ಎಲ್ಲ ಮತದಾರರನ್ನು ತಲುಪುವುದು ಕಷ್ಟವಾಗಿತ್ತು. 2009ರಲ್ಲಿ ಪಕ್ಷ ಅಸ್ತಿತ್ವಕ್ಕೆ ಬಂದು, ಮೊದಲ ಬಾರಿ ಸ್ಪರ್ಧಿಸಿದ್ದೆವು. ಕೆಲವೊಂದು ಯೋಜನೆ -ಯೋಚನೆಗಳಲ್ಲೂ ಕೊರತೆಯಾಗಿತ್ತು. ಆದರೆ ಈ ಬಾರಿ ಪಕ್ಷ ಉತ್ತಮ ಸ್ಥಿತಿಯಲ್ಲಿದ್ದು, ಜನರು ಬೆಂಬಲಿಸುವ ಭರವಸೆ ಇದೆ. 

ಈ ಬಾರಿ ನೀವು ಆಕಾಂಕ್ಷಿಯೇ?
ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಎಂಬ ಪದವೇ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ಕಾರ್ಯಕರ್ತರೇ ಆರಿಸುತ್ತಾರೆ. ಕಾರ್ಯಕರ್ತರು ಒಮ್ಮತದ ತೀರ್ಮಾನ ಮಾಡಿ, ಜಿಲ್ಲೆ, ರಾಜ್ಯಕ್ಕೆ ಕಳುಹಿಸುತ್ತಾರೆ. ಪ್ರಸ್ತುತ ಮೂಡಬಿದಿರೆ ಕ್ಷೇತ್ರಕ್ಕೆ ನನ್ನ ಹಾಗೂ ಎ.ಕೆ. ಅಶ್ರಫ್‌ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯ ಸಮಿತಿಗೆ ಕಳುಹಿಸಲಾಗಿದೆ. ಒಂದೆರಡು ದಿನಗಳಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯುತ್ತದೆ. ಎ.ಕೆ. ಅಶ್ರಫ್‌ ಉತ್ತಮ ಸಾಮಾಜಿಕ ಕಳಕಳಿಯ ವ್ಯಕ್ತಿಯಾಗಿದ್ದು, ಅವರು ಅಭ್ಯರ್ಥಿಯಾದರೂ ಅವರ ಗೆಲುವಿಗಾಗಿ ದುಡಿಯಲಿದ್ದೇನೆ.

ಜನರಿಗೆ ಏನು ಭರವಸೆ ನೀಡುತ್ತೀರಿ?
ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸುವುದು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಮೊದಲ ಆದ್ಯತೆ. ಜೈನಕಾಶಿ ಎಂದು ಹೆಸರು ಪಡೆದಿರುವ ಮೂಡಬಿದಿರೆ ಪ್ರವಾಸಿ ತಾಣವಾದರೂ ಇಲ್ಲಿನ ರಸ್ತೆಗಳು ಇನ್ನೂ ಅಭಿವೃದ್ಧಿಗೊಂಡಿಲ್ಲ. ಮಂಗಳೂರು – ಕಾರ್ಕಳ ರಸ್ತೆಯು ತೀರಾ ಹದಗೆಟ್ಟಿದ್ದು, ಅದರ ಅಭಿವೃದ್ಧಿಯೂ ನಮ್ಮ ಆದ್ಯತೆ. ಮೂಡಬಿದಿರೆಗೆ ಆಗಮಿಸುವ ಪ್ರವಾಸಿಗರಿಗೆ ಪ್ರವಾಸಿಮಂದಿರದ ಅನಿವಾರ್ಯವೂ ಇದೆ.

ಹಿಂದಿನ ಶಾಸಕರ ಕುರಿತು ನಿಮ್ಮ ಅಭಿಪ್ರಾಯ?
ಅವರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿಲ್ಲ. ಕಳೆದ ಹಲವು ಅವಧಿಗಳಿಂದ ಅವರು ಆಯ್ಕೆಯಾಗಿದ್ದು, ಆಗಬೇಕಿರುವ ಸಾಕಷ್ಟು ಕಾಮಗಾರಿಗಳ ಕುರಿತು ಗಮನಹರಿಸಿಲ್ಲ. ಸರಕಾರಿ ಎಂಜಿನಿಯರಿಂಗ್‌, ವೈದ್ಯಕೀಯ ಕಾಲೇಜು ಮೂಡಬಿದಿರೆಗೆ ಅಗತ್ಯ; ಈ ಕುರಿತು ಶಾಸಕರು ಪ್ರಯತ್ನ ಮಾಡಬೇಕಿತ್ತು.

ಕಾಂಗ್ರೆಸ್‌ – ಬಿಜೆಪಿ ಕುರಿತು ಏನು ಹೇಳುತ್ತೀರಿ?
ಮೂಡಬಿದಿರೆಯ ಸ್ಥಿತಿಯನ್ನು ನೋಡುವಾಗ ಕಾಂಗ್ರೆಸ್‌ – ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಂತೆ ಕಂಡುಬರುತ್ತಿವೆ. ಈ ಕ್ಷೇತ್ರದಲ್ಲಿ ಏನು ಮಾಡದಿದ್ದರೂ ನಾವೇ ಗೆಲ್ಲುತ್ತೇವೆ ಎಂಬ ಅಭಿಪ್ರಾಯ ಕಾಂಗ್ರೆಸ್‌ನಲ್ಲಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲದಿದ್ದರೂ ಅದು ಸಮರ್ಥ ವಿಪಕ್ಷವಾಗಿಯೂ ಕಾರ್ಯ ನಿರ್ವಹಿಸುತ್ತಿಲ್ಲ. ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೂ ಅವರು ಹೋರಾಟ ಮಾಡಿಲ್ಲ.

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.