ಬಹುಕೋನ ಸ್ಪರ್ಧೆಗೆ ಅಣಿಯಾಗುತ್ತಿದೆ ಮಂಗಳೂರು ದಕ್ಷಿಣ 


Team Udayavani, Apr 16, 2018, 9:10 AM IST

Mlore-Dakshina-15-4.jpg

ಮಂಗಳೂರು: ಜಿಲ್ಲಾ ಕೇಂದ್ರವನ್ನು ಒಳಗೊಂಡಿರುವ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದು. ಬ್ರಿಟಿಷರ ಆಡಳಿತಾವಧಿಯಲ್ಲಿ ಮದ್ರಾಸ್‌ ಪ್ರಾಂತ್ಯದಲ್ಲಿದ್ದ ಮಂಗಳೂರು ಬಳಿಕ 1956ರಲ್ಲಿ ಮೈಸೂರು ರಾಜ್ಯದ ಅಧೀನಕ್ಕೆ ಬಂತು. 1957ರಲ್ಲಿ ಮಂಗಳೂರು ಒನ್‌, ಅನಂತರ ಮಂಗಳೂರು ಕ್ಷೇತ್ರವಾಗಿ ಚುನಾವಣೆ ಎದುರಿಸುತ್ತಾ ಬಂದಿದ್ದು, 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯ ಬಳಿಕ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿ ಪರಿವರ್ತನೆಯಾಯಿತು.

ಆರಂಭದಲ್ಲಿ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಬಳಿಕ ಬಿಜೆಪಿ ಪ್ರಾಬಲ್ಯ ಪಡೆದುಕೊಂಡಿತು. 1994ರಿಂದ ನಾಲ್ಕು ಅವಧಿಗಳಲ್ಲಿ ಸತತವಾಗಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಮರಳಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. 1957ರಿಂದ 2013ರ ವರೆಗೆ ನಡೆದಿರುವ ಒಟ್ಟು 13 ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ 8 ಬಾರಿ ಕಾಂಗ್ರೆಸ್‌ ಹಾಗೂ 5 ಬಾರಿ ಬಿಜೆಪಿ ಜಯ ಗಳಿಸಿವೆ. ಕುತೂಹಲಕಾರಿ ವಿಷಯವೆಂದರೆ, ಈ ಕ್ಷೇತ್ರದಲ್ಲಿ 12 ಬಾರಿ ಕೊಂಕಣಿ ಭಾಷಿಕರೇ ಶಾಸಕರಾಗಿದ್ದಾರೆ. ಒಂದು ಬಾರಿ ಮಾತ್ರ ಜೈನ ಸಮುದಾಯದವರು ಆಯ್ಕೆಯಾಗಿದ್ದರು. ಮಂಗಳೂರು ದಕ್ಷಿಣದಲ್ಲಿ ಬಿಲ್ಲವ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಅನಂತರದ ಸ್ಥಾನದಲ್ಲಿ  ಕ್ರೈಸ್ತರು ಹಾಗೂ ಮುಸ್ಲಿಂ ಮತದಾರರಿದ್ದಾರೆ. 


2013ರ ಚುನಾವಣೆಯಂತೆಯೇ ಈ ಬಾರಿಯೂ ಮಂಗಳೂರು ದಕ್ಷಿಣ ಕ್ಷೇತ್ರ ಬಹುಕೋನ ಸ್ಪರ್ಧೆಗೆ ಅಣಿಯಾಗುತ್ತಿದ್ದು, ಕುತೂಹಲದ ಕಣವಾಗಿ ಮಾರ್ಪಡುತ್ತಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಜೆ.ಆರ್‌. ಲೋಬೋ ಅವರೇ ಈ ಬಾರಿಯೂ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮ ಘಟ್ಟದಲ್ಲಿದ್ದು, ಶೀಘ್ರ ಘೋಷಣೆಯಾಗಲಿದೆ. ವೇದವ್ಯಾಸ ಕಾಮತ್‌, ಎಸ್‌. ಗಣೇಶ್‌ ರಾವ್‌, ಬದ್ರಿನಾಥ್‌ ಕಾಮತ್‌, ಕ್ಯಾ| ಬೃಜೇಶ್‌ ಚೌಟ, ಚಂದ್ರಶೇಖರ ಉಚ್ಚಿಲ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳು. ಜೆಡಿಎಸ್‌ನಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ  ವಸಂತ ಪೂಜಾರಿ, ಜಿಲ್ಲಾ ಯುವ ಜನತಾದಳ ಅಧ್ಯಕ್ಷ  ಅಕ್ಷಿತ್‌ ಸುವರ್ಣ ಅವರು ಆಕಾಂಕ್ಷಿಯಾಗಿದ್ದಾರೆ. ಜತೆಗೆ ಜೆಡಿಎಸ್‌ನತ್ತ ತೆರಳಿರುವ ಮಾಜಿ ಮೇಯರ್‌ ಕೆ. ಅಶ್ರಫ್‌ ಅವರ ಹೆಸರು ಕೇಳಿಬರುತ್ತಿದೆ.  ಸಿಪಿಎಂ ನಗರದ. ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌ ಅವರನ್ನು ಈಗಾಗಲೇ ಸಿಪಿಎಂ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ. ಎಸ್‌.ಡಿ.ಪಿ.ಐ. ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ. ಇವೆಲ್ಲದರ ನಡುವೆ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿಯುವ ಸೂಚನೆಯೂ ಲಭ್ಯವಾಗಿದೆ. ಶ್ರೀಕರ ಪ್ರಭು ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗಿನ ಚುನಾವಣಾ ಇತಿಹಾಸ ಅವಲೋಕಿಸಿದರೆ ಇಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ. ಇದು ಈ ಬಾರಿಯೂ ಪುನರಾವರ್ತನೆ ಆಗಬಹುದು ಎಂಬುದು ಲೆಕ್ಕಾಚಾರ. ಕ್ಷೇತ್ರದಲ್ಲಿ ಶಾಸಕರಾಗಿ ಜೆ.ಆರ್‌. ಲೋಬೋ ಕಳೆದ 5 ವರ್ಷಗಳಲ್ಲಿ  ಅತೀ ಹೆಚ್ಚು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ, ಆದುದರಿಂದ ಈ ಬಾರಿಯೂ ಕ್ಷೇತ್ರದ ಮತದಾರರು ಅವರನ್ನು ಬೆಂಬಲಿಸುತ್ತಾರೆ ಎಂಬುದು ಕಾಂಗ್ರೆಸ್‌ ಪಾಳೆಯದ ದೃಢ ವಿಶ್ವಾಸ. ಕಳೆದ 5 ವರ್ಷಗಳಲ್ಲಿ ಯಾವುದೇ ಹೊಸ ಕಾಮಗಾರಿಗಳು ಆಗಿಲ್ಲ. ಈ ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಜೂರಾಗಿದ್ದ  ಕಾಮಗಾರಿಗಳನ್ನು ಕಾಂಗ್ರೆಸ್‌ ತನ್ನದೆಂದು ಹೇಳಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದ್ದು, ಮಂಗಳೂರು ದಕ್ಷಿಣದಲ್ಲೂ ಇದು ಪ್ರತಿಧ್ವನಿಸಲಿದೆ ಎಂಬ ವಿಶ್ವಾಸವನ್ನು  ಬಿಜೆಪಿ ಪಾಳೆಯ ಹೊಂದಿದೆ.

ಮಹಿಳಾ ಮತದಾರರ ಪ್ರಾಬಲ್ಯ
ಮಂಗಳೂರು ನಗರ ದಕ್ಷಿಣ ಮಹಿಳಾ ಮತದಾರರ ಪ್ರಾಬಲ್ಯವನ್ನು ಹೊಂದಿದೆ. ಇದರ ಜತೆಗೆ ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಲ್ಲಿ 1,10,318 ಪುರುಷರು ಹಾಗೂ 1,20,033 ಮಹಿಳೆಯರು ಸಹಿತ ಒಟ್ಟು 2,30,351 ಮತದಾರರಿದ್ದಾರೆ.

ಕ್ಷೇತ್ರವನ್ನು ಪ್ರತಿನಿಧಿಸಿದ ಶಾಸಕರು 
1957-ಬಿ. ವೈಕುಂಠ ಬಾಳಿಗ (ಕಾಂಗ್ರೆಸ್‌), 1962- ಮಣೇಲ್‌ ಶ್ರೀನಿವಾಸ ನಾಯಕ್‌ (ಕಾಂಗ್ರೆಸ್‌), 1967- ಮಣೇಲ್‌ ಶ್ರೀನಿವಾಸ ನಾಯಕ್‌ (ಕಾಂಗ್ರೆಸ್‌), 1972- ಅಡ್ಡಿ ಸಲ್ದಾನಾ (ಕಾಂಗ್ರೆಸ್‌), 1978 -ಪಿ.ಎಫ್‌. ರೊಡ್ರಿಗಸ್‌ (ಕಾಂಗ್ರೆಸ್‌), 1983 – ವಿ. ಧನಂಜಯ ಕುಮಾರ್‌ (ಬಿಜೆಪಿ), 1985- ಬ್ಲೇಸಿಯಸ್‌ ಡಿ’ಸೋಜಾ (ಕಾಂಗ್ರೆಸ್‌), 1989-ಬ್ಲೇಸಿಯಸ್‌ ಡಿ’ಸೋಜಾ (ಕಾಂಗ್ರೆಸ್‌), 1994- ಎನ್‌. ಯೋಗೀಶ್‌ ಭಟ್‌ (ಬಿಜೆಪಿ), 1999-ಎನ್‌. ಯೋಗೀಶ್‌ ಭಟ್‌ (ಬಿಜೆಪಿ), 2004-ಎನ್‌. ಯೋಗೀಶ್‌ ಭಟ್‌ (ಬಿಜೆಪಿ), 2008-ಎನ್‌. ಯೋಗೀಶ್‌ ಭಟ್‌(ಬಿಜೆಪಿ), 2013-ಜೆ.ಆರ್‌. ಲೋಬೋ (ಕಾಂಗ್ರೆಸ್‌).

ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಆಯ್ಕೆಯಾದ ಶಾಸಕರಲ್ಲಿ ಅನೇಕ ಮಂದಿ ಉನ್ನತ ರಾಜಕೀಯ ಸ್ಥಾನಮಾನಗಳನ್ನು ಪಡೆದಿರುವುದು ಕ್ಷೇತ್ರದ ಹೆಗ್ಗಳಿಕೆಯಾಗಿದೆ. ಎಂ. ವೈಕುಂಠ ಬಾಳಿಗ ರಾಜ್ಯ ವಿಧಾನಸಭೆಯ ಸ್ಪೀಕರ್‌, ಸಚಿವರಾಗಿದ್ದರು. ಪಿ.ಎಫ್‌. ರೊಡ್ರಿಗಸ್‌, ಬ್ಲೇಸಿಯಸ್‌ ಎಂ. ಡಿ’ಸೋಜಾ ಸಚಿವರಾಗಿದ್ದರು. ಎನ್‌. ಯೋಗೀಶ್‌ ಭಟ್‌ ಅವರು ವಿಧಾನಸಭೆಯ ಉಪ ಸ್ಪೀಕರ್‌ ಆಗಿ ಆಯ್ಕೆಯಾಗಿದ್ದರು. 1983ರಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿ. ಧನಂಜಯ ಕುಮಾರ್‌ ಬಳಿಕ ಸಂಸದರಾಗಿ ಕೇಂದ್ರ ಸಚಿವರಾಗಿದ್ದರು.

— ಕೇಶವ ಕುಂದರ್‌

ಟಾಪ್ ನ್ಯೂಸ್

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

byndoor

Bantwal: ಅಪಘಾತ; ಗಾಯಾಳು ಸಾವು

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.