ದಿನೇಶ್ ಬಹಿರಂಗ ಕ್ಷಮೆಯಾಚಿಸಲಿ
Team Udayavani, Apr 16, 2018, 6:25 AM IST
ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಬಗ್ಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತೀರ ಅವಹೇಳನ ಕಾರಿ ಮತ್ತು ಅಸಭ್ಯವಾಗಿ ಮಾತನಾಡಿರುವುದು ಖಂಡನೀಯ. ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬುದ್ಧಿ ಸ್ಥಿಮಿತದಲ್ಲಿರುವ ಯಾವ ವ್ಯಕ್ತಿಯೂ, ಸಾರ್ವಜನಿಕ ಜೀವನದಲ್ಲಿ ಹೀಗೆ ಮಾತನಾಡುವುದಿಲ್ಲ. ಕುಡಿತದ ಅಮಲಿನಲ್ಲಿ ಬಾಯಿಗೆ ಬಂದಂತೆ ಅನಾಗರಿಕರಂತೆ ದಿನೇಶ್ ಮಾತನಾಡಿ, ತಮ್ಮ ಯೋಗ್ಯತೆ ಸಾಬೀತುಪಡಿಸಿಕೊಂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಥಪಂಥಕ್ಕೆ ದಿನೇಶ್ ಅಪಮಾನ ಮಾಡಿದ್ದಾರೆ. ನಾಥಪಂಥವನ್ನು ಕರ್ನಾಟಕದ ಒಕ್ಕಲಿ ಗರೂ ಅತ್ಯಂತ ಗೌರವದಿಂದ
ಪಾಲಿಸುತ್ತಾರೆ. ಕಾಂಗ್ರೆಸ್ ಕೂಡಲೇ ಸಮಸ್ತ ಒಕ್ಕಲಿಗರಿಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು.
ಚುನಾವಣಾ ಆಯೋಗವು ದಿನೇಶ್ ಗುಂಡೂರಾವ್ ಅವರ ಪ್ರಚೋದನಕಾರಿ ಹೇಳಿಕೆ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಯಡಿಯೂರಪ್ಪ ಆಗ್ರಹಿಸಿದರು.
ಸುಸಂಸ್ಕೃತ ಮನೆತನದಿಂದ ಬಂದಿರುವ ದಿನೇಶ್ ಗುಂಡೂರಾವ್, ದೇಶದ ಸಾಧುಸಂತರ ಪ್ರಮುಖ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಕುರಿತಾಗಿ ಬಳಸಿರುವ ಪದ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಗುಂಡೂರಾವ್ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು.
– ಕೆ.ಎಸ್. ಈಶ್ವರಪ್ಪ,
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ
ಕಾಂಗ್ರೆಸ್ ಮುಖಂಡರ ದರ್ಪ, ದೌರ್ಜನ್ಯ ಮಿತಿ ಮೀರಿದೆ. ದೇಶದಲ್ಲೇ ಕರ್ನಾಟಕದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಲಪಾಡ್ ವರ್ತನೆ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ಶಾಸಕರ ಬೆಂಬಲಿಗ ಬಿಬಿಎಂಪಿಕಚೇರಿಗೆ ಪೆಟ್ರೋಲ್ ಸುರಿದಿದ್ದಾರೆ. ಇಂತಹ ಹತ್ತಾರು ಘಟನೆ ನಡೆದಿದೆ.
– ಶೋಭಾ ಕರಂದ್ಲಾಜೆ,
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.