ಎತ್ತ ಸಾಗುತ್ತಿದೆ ಭಾರತ ಜನಾಂದೋಲನ
Team Udayavani, Apr 16, 2018, 1:01 PM IST
ನಂಜನಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡಬೇಕಿದೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್ ಕರೆ ನೀಡಿದರು.
ಪಟ್ಟಣದ ಅಂಬೇಡ್ಕರ್ ಸಮುದಾಯ ಭವದನಲ್ಲಿ ಆಯೋಜಿಸಿದ್ದ “ಎತ್ತ ಸಾಗುತ್ತಿದೆ ಭಾರತ’ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೊಟ್ಟಿರುವ ಸರ್ವಶ್ರೇಷ್ಠ ಸಂವಿಧಾನವನ್ನು ಬದಲಾಯಿಸಿ ಮನಸ್ಥಿತಿಯನ್ನು ಮತ್ತೆ ದೇಶದಲ್ಲಿ ಬಿತ್ತುವ ಹುನ್ನಾರ ನಡೆಸುತ್ತಿರುವ ಬಿಜೆಪಿ ದೇಶಕ್ಕೆ ಮಾರಕವಾಗಿದೆ.
ಸಂವಿಧಾನ ಬದಲಾಯಿಸುವ ಸಲುವಾಗಿಯೇ ನಾನು ಅಧಿಕಾರಕ್ಕೆ ಬಂದಿರುವುದಾಗಿ ಹೇಳುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಹಿಂದೆ ದೊಡ್ಡ ಶಕ್ತಿಯ ಕೈವಾಡದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಕಾಯ್ದೆ ದುರ್ಬಲಗೊಳಿಸಲು ಸಮ್ಮತಿಸಿರುವುದಾಗಿ ಸುಪ್ರೀಂಕೋರ್ಟ್ ನ್ಯಾಯಧೀಶರು ಹೇಳಿಕೆ ನೀಡಿರುವುದು ಬಿಜೆಪಿ ಒಳಮರ್ಮ ಬಯಲಿಗೆಳೆದಿದೆ.
ಇನ್ನು ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಸಂವಿಧಾನ ಬದಲಾಯಿಸುವುದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದೆ.
ಹೀಗಾಗಿ ಕರ್ನಾಟಕದಲ್ಲಿ ಇದಕ್ಕೆ ಅವಕಾಶ ನೀಡದಂತೆ ಮತದಾರರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಮತದಾರರು ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಮತದಾರರು ಮುಂದಾಗದಿದ್ದಲ್ಲಿ ನಮಗೆ ಉಳಿಗಾಲವಿಲ್ಲ ಎಂದು ಕಿಡಿಕಾರಿದರು.
ರಂಗಕರ್ಮಿ ಜನಾರ್ದನ್ ಜನ್ನಿ ಹೋರಾಟದ ಗೀತೆಗಳನ್ನು ಹಾಡಿದರು. ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರೆಗೋಡು, ರಾಜ್ಯ ಸಂಘಟನಾ ಸಂಚಾಲಕರಾದ ಹೆಬ್ಟಾಲೆ ಲಿಂಗರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ, ಜಿಲ್ಲಾ ಸಂಚಾಲಕರಾದ ಅಲಗೂಡು ಶಿವಕುಮಾರ್, ಸರ್ಕಾರಿ ಪ್ರಥಮರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಮಹದೇವ ಭರಣಿ,
ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ರೈತಸಂಘ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಟಿ.ಆರ್.ವಿದ್ಯಾಸಾಗರ್, ಜನಸಂಗ್ರಾಮ ಪರಿಷತ್ ವಿಭಾಗೀಯ ಕಾರ್ಯದರ್ಶಿ ನಗರ್ಲೆ ಎಂ.ವಿಜಯಕುಮಾರ್, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಅಭಿನಾಗಭೂಷಣ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.