ಇಂದು ಪುತ್ತೂರು ಸೀಮೆಯ ಒಡೆಯನ ಬ್ರಹ್ಮರಥೋತ್ಸವ


Team Udayavani, Apr 17, 2018, 7:35 AM IST

Puttur-Jathre-16-4.jpg

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಎ. 17 ರಂದು ರಾತ್ರಿ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥವೆಂದರೆ ಅದು ನಡೆ ದೇಗುಲ. ಪತಾಕೆ, ಅಷ್ಟ ದಿಕ್ಪಾಲಕರು, ಶಿಖರ ಕಲಶ, ಶ್ವೇತ ಛತ್ರ ಮತ್ತು ಸತ್ತಿಗೆ ಅಳವಡಿಸಿದ 70 ಅಡಿ ಎತ್ತರದ ಬ್ರಹ್ಮರಥದಲ್ಲಿ ವರ್ಷದಲ್ಲಿ ಒಂದು ದಿನ ದೇವರು ವಿರಾಜಮಾನರಾಗುತ್ತಾರೆ. ರಾತ್ರಿ 8ರ ಬಳಿಕ ಬ್ರಹ್ಮ ರಥೋತ್ಸವ ನಡೆಯುತ್ತದೆ. ಮುಂಭಾಗದ ರಥ ಬೀದಿಯಲ್ಲಿ 400 ಮೀ. ಉದ್ದಕ್ಕೆ ಬ್ರಹ್ಮರಥ ಸಂಚರಿಸಿ, ಸ್ವಸ್ಥಾನಕ್ಕೆ ಮರಳಿ ಬರುತ್ತದೆ.

ಅಪೂರ್ವ ಕ್ಷಣ
ಬ್ರಹ್ಮವಾಹಕರು ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ಮೂರ್ತಿಯನ್ನು ತಲೆಯ ಮೇಲೆ ಹೊತ್ತು ಬ್ರಹ್ಮರಥವನ್ನು ಏರುವ ಸಮಯ ಪುತ್ತೂರು ಸೀಮೆಯ ಜನರಿಗೆ ಅಪೂರ್ವ ಧಾರ್ಮಿಕ ಕ್ಷಣವಾಗಿದೆ. ಚೆಂಡೆ ಮೇಳ, ಮಂಗಳವಾದ್ಯ, ಬ್ಯಾಂಡ್‌ ವಾಲಗ, ಶಂಖ ಜಾಗಟೆ, ಮಂಗಳಕರ ನಿನಾದದ ಹಿನ್ನೆಲೆಯಲ್ಲಿ ಶ್ರೀ ದೇವರು ಬ್ರಹ್ಮರಥಾರೂಢರಾಗುತ್ತಾರೆ. ದೇವಾಲಯದ ಮುಂಭಾಗದ ಗದ್ದೆಯಲ್ಲಿ ಸೇರಿದ ಸಹಸ್ರಾರು ಭಕ್ತರು ಏಕ ಕಂಠದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪಾದಾರವಿಂದಗಳಿಗೆ ಗೋವಿಂದ ಎನ್ನಿ ಗೋವಿಂದ ಎಂದು ಜಯಘೋಷ ಹಾಕುತ್ತಾರೆ.


ಮಹಾಲಿಂಗೇಶ್ವರ ಜಾತ್ರೆಗೆ ಸಿದ್ಧಗೊಳ್ಳುತ್ತಿರುವ ಬ್ರಹ್ಮರಥ.

ಜಾತ್ರೆ ಗದ್ದೆಯಲ್ಲಿ ಜನಸಾಗರ
ದೇವಾಲಯದ ಎದುರುಗದ್ದೆಯಲ್ಲಿ ಬ್ರಹ್ಮರಥೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನೋಡಲು ಲಕ್ಷಕ್ಕೂ ಮಿಕ್ಕಿ ಭಕ್ತರು ಸೇರುತ್ತಾರೆ. ರಥಬೀದಿಯ ಇಕ್ಕೆಲಗಳಲ್ಲೂ ಸಾವಿರಾರು ಭಕ್ತರು ನಿಂತಿರುತ್ತಾರೆ. ಬೆಳಗ್ಗೆ ದೇವಾಲಯದಲ್ಲಿ ದೇವರ ಉತ್ಸವ ಬಲಿ ಮತ್ತು ದರ್ಶನ ಬಲಿ ಇರುತ್ತದೆ. ಹೀಗೆ ಸೇರತೊಡಗಿದ ಜನಜಂಗುಳಿ ಕರಗುವುದು ದೇವರು ಬ್ರಹ್ಮರಥದಿಂದ ಇಳಿದು ಪೇಟೆ ಸವಾರಿಗೆ ತೆರಳಿದ ಬಳಿಕವೇ.

ವಾಹನ ನಿಲುಗಡೆಗೆ ವ್ಯವಸ್ಥೆ
ಪುತ್ತೂರು ನಗರದ ತೆಂಕಿಲ, ಕೊಂಬೆಟ್ಟು, ಕಿಲ್ಲೆ ಮೈದಾನ, ಎಪಿಎಂಸಿ ರಸ್ತೆ ಬಳಿಯ ಗದ್ದೆಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಯಿಂದ ರಾತ್ರಿ ಬ್ರಹ್ಮರಥೋತ್ಸವ ಮುಗಿಯುವ ತನಕ ಮುಖ್ಯ ರಸ್ತೆಯಲ್ಲಿ ಕೊಂಬೆಟ್ಟು ಕ್ರಾಸ್‌ನಿಂದ ಬಸ್ಸು ನಿಲ್ದಾಣದ ತನಕ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಸುರಕ್ಷಾ ಕ್ರಮವಾಗಿ ಗದ್ದೆಯಲ್ಲಿ ಅಗ್ನಿಶಾಮಕದಳದ ವಾಹನ, ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್‌ ಮತ್ತು ವೈದ್ಯರು ಇರುತ್ತಾರೆ.

ಬಸ್ಸಿನ ವ್ಯವಸ್ಥೆ
ಬ್ರಹ್ಮರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಸಾರಿಗೆ ಸಂಸ್ಥೆ ತಾಲೂಕಿನ ವಿವಿಧ ಕಡೆಗಳಿಗೆ ಬಸ್ಸಿನ ವ್ಯವಸ್ಥೆ ಮಾಡಿದೆ. ಸಂಜೆ ಕೊನೆಯ ಟ್ರಿಪ್‌ ತೆರಳಿದ ಬಸ್ಸುಗಳು ರಾತ್ರಿ ಮರಳಿ ಪುತ್ತೂರಿಗೆ ಬರಲಿವೆ. ರಥೋತ್ಸವ ಮುಗಿದ ಕೂಡಲೇ ಭಕ್ತರನ್ನು ಕರೆದೊಯ್ಯುತ್ತವೆ.

ಜಾತ್ರೆಯಲ್ಲಿ ಇಂದು
ಬೆಳಗ್ಗೆ ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ರಾತ್ರಿ ಉತ್ಸವ, ಸಿಡಿಮದ್ದು ಪ್ರದರ್ಶನ, ಬ್ರಹ್ಮರಥೋತ್ಸವ, ಬಂಗಾರ್‌ ಕಾಯರ್‌ ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಬೀಳ್ಕೊಡುಗೆ, ಶ್ರೀಭೂತಬಲಿ, ಶಯನ ನಡೆಯಲಿದೆ.

ಚಿತ್ರ : ಪ್ರಸನ್ನ ರೈ ಎಸ್‌.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.