ಬಾಲಕಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ
Team Udayavani, Apr 17, 2018, 11:54 AM IST
ದಾವಣಗೆರೆ: ಜಮ್ಮುವಿನ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕೃತ್ಯ ಖಂಡಿಸಿ ಕೋಮು ಸೌಹಾರ್ದ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಪಾಲಿಕೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು
ಆಗ್ರಹಿಸಿದರು.
ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಅನೀಸ್ ಪಾಷಾ, ಮುಗ್ಧ ಬಾಲಕಿಯನ್ನು ದೇವಸ್ಥಾನದಲ್ಲಿ ಕೂಡಿಹಾಕಿ, ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಇಡೀ ಮಾನವ ಕುಲಕ್ಕೆ ಕಂಟಕಪ್ರಾಯರು. ಈ ಘಟನೆ ದೇಶದ ಮಕ್ಕಳು, ಪೋಷಕರ ಮೇಲೆ ಗಾಢ ಪರಿಣಾಮ ಬೀರಿದೆ. ಇಂತಹ ನೀಚ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಕುರಿ ಕಾಯುವ ಅಲೆಮಾರಿಗಳು ಊರಿಗೆ ಬಾರದಂತೆ ತಡೆಯುವ ಸಲುವಾಗಿ ಇಂತಹ ಕೃತ್ಯ ಎಸಗಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ, ದೇವಸ್ಥಾನದ ಕೋಣೆಯಲ್ಲಿ ಕೂಡಿಹಾಕಿ, ದುಷ್ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಸತ್ತ ಬಾಲಕಿ ಶವ ಹೂಳಲು ಊರಿನವರು ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಇದು ಅತ್ಯಂತ ಅಮಾನವೀಯ ಕೃತ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೆಲ ಹಿಂದು ಪರ ಸಂಘಟನೆಗಳು ಆರೋಪಿಗಳ ಪರ ನಿಂತಿವೆ. ನಮ್ಮ ದೇಶದ ಸ್ವಾಸ್ಥ್ಯ, ಸಂಸ್ಕೃತಿ ಹಾಳುಗೆಡುವುವ ದುಷ್ಕರ್ಮಿಗಳ ಪರ ನಿಂತಿರುವವರ ವಿರುದ್ಧ ಸಹ ಕ್ರಮ ವಹಿಸಬೇಕಿದೆ. ಕೇಂದ್ರ ಸರ್ಕಾರ ಬೇಟಿ ಬಚಾವೋ, ಬೇಟಿ ಪಢಾವೋ ಎಂಬ ಯೋಜನೆ ಜಾರಿ ಮಾಡಿದೆ. ಆದರೆ, ಇಂತಹ ದುಷ್ಕೃತ್ಯಗಳ ತಡೆಗೆ ಯಾವುದೇ ಕ್ರಮ ವಹಿಸಲ್ಲ ಎಂದು ಅವರು ಆರೋಪಿಸಿದರು.
ವೇದಿಕೆಯ ಅಧ್ಯಕ್ಷ ಇಸ್ಮಾಯಿಲ್ ದೊಡ್ಡಮನಿ, ಫಾಸ್ಟರ್ ರಾಜಶೇಖರ್, ಕತ್ತಲಗೆರೆ ಡಿ. ತಿಪ್ಪಣ್ಣ, ವಿಜಯಕುಮಾರ್, ಕತ್ತಲಗೆರೆ ಡಿ. ತಿಪ್ಪಣ್ಣ, ವಿಜಯಕುಮಾರ್, ಅಹಮದ್ ಷರೀಫ್, ರಾಘು ದೊಡ್ಡಮನಿ, ಬಿ.ಟಿ. ವಿಶ್ವನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ದುಷ್ಕೃತ್ಯ ಖಂಡಿಸಿ, ಆರೋಪಿಗಳಿಗೆ ಕಠಿಣಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.