ದಲಿತರಿಗೆ ಮೀಸಲಿಟ್ಟ ಹಣ ಇತರೆ ಯೋಜನೆಗೆ ಬಳಕೆ

Team Udayavani, Apr 17, 2018, 12:49 PM IST

m6-dalita.jpg

ಹುಣಸೂರು: ಕಳೆದ 5 ವರ್ಷಗಳಿಂದ ದಲಿತರ ಉದ್ಧಾರಕ್ಕಾಗಿ 84 ಸಾವಿರ ಕೋಟಿ ರೂ. ಮೀಸಲಿಟ್ಟು, ಯೋಜನೆ ಜಾರಿಗೊಳಿಸದ ಅಧಿಕಾರಿಗಳನ್ನು ಜೈಲಿಗಟ್ಟುತ್ತೇನೆಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆ ಹಣವನ್ನು ಇತರೆ ಯೋಜನೆಗೆ ಬಳಸಿದ್ದಾರೆ ಎಂದು ಜೆಡಿಎಸ್‌ ಅಭ್ಯರ್ಥಿ, ಮಾಜಿ ಸಂಸದ ಎಚ್‌.ವಿಶ್ವನಾಥ್‌ ಆರೋಪಿಸಿದರು.

ನಗರದ ಆದಿಚುಂಚನಗಿರಿ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಜೆಡಿಎಸ್‌ನಿಂದ ನಡೆದ ದಲಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಅಂಬೇಡ್ಕರ್‌ ಜಗತ್ತಿನ ಮೇಧಾವಿ. ದೇಶಕ್ಕೆ ಸಾರ್ವಕಾಲಿಕ ಸಂವಿಧಾನ ನೀಡಿದ ಮೇರುಪ್ರತಿಭೆ. ಈ ಸಂವಿಧಾನವೇ ಭಾರತೀಯರ ಹೃದಯವಾಗಿದೆ ಎಂದು ಹೇಳಿದರು.

ಬಾಬು ಜಗಜೀವನರಾಂ ಗರೀಬಿ ಹಟಾವೋ ಮೂಲಕ ಬಡವರ ಕಲ್ಯಾಣ ಯೋಜನೆ ಜಾರಿಗೊಳಿಸಿದ್ದರು. ಅದೇರೀತಿ ಸಂವಿಧಾನದ ಆಶಯದಂತೆ ದೇಶ ಮೆಚ್ಚುವ ಕೆಲಸ ಮಾಡಿದ್ದ ಅರಸರ ಆದರ್ಶದಂತೆ ಆಡಳಿತ ನಡೆಸುತ್ತೇನೆ ಎಂದಿದ್ದ ಸಿದ್ದರಾಮಯ್ಯ ಮಾಡಿದ್ದು ಕೇವಲ ಲೂಟಿ ಮತ್ತು ಭ್ರಷ್ಟಾಚಾರದ ಆಡಳಿತ ಎಂದು ಆರೋಪಿಸಿದರು. 

ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ಖರ್ಚು ಮಾಡದ ಅಧಿಕಾರಿಗಳನ್ನು ಜೈಲಿಗಟ್ಟುತ್ತೇನೆಂದು ಹೇಳಿ ಇದೀಗ ಅದೇ ಹಣವನ್ನು ನೀರಾವರಿ,ರಸ್ತೆ, ಗ್ರಾಮೀಣಾಭಿವೃದ್ಧಿಗೆ ಖರ್ಚು ಮಾಡಿದ್ದಾರೆ. ಇನ್ನು ಈ ಹಣದಿಂದ 2 ಸಾವಿರ ಕೋಟಿ ರೂ. ತೆಗೆದು ರೈತರ ಸಾಲಮನ್ನಾ ವಿನಿಯೋಗಿಸಿರುವುದು ಅವರ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನು ತಾಲೂಕಿನಲ್ಲಿ ಅಭಿವೃದ್ಧಿ ಮಾಡಿದ್ದೇನೆನ್ನುವ ಶಾಸಕ ಎಚ್‌.ಪಿ.ಮಂಜುನಾಥ್‌ ತಾಲೂಕಿನಲ್ಲಿ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಲೂಟಿ ಮಾಡಿರುವ ಹಣ ಜನರದ್ದದಾಗಿದೆ. ಜನರ ಹಣ ತಿಂದವರು ಉದ್ಧಾರವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ಚಿಂತಕ ಗೋವಿಂದಯ್ಯ ಮಾತನಾಡಿದರು. ನಗರಸಭಾಧ್ಯಕ್ಷ ಎಂ.ಶಿವಕುಮಾರ್‌, ಶಿವಶೇಖರ್‌, ಬಿಳಿಕೆರೆ ರಾಜು, ಹರಿಹರಾನಂದಸ್ವಾಮಿ, ನಿಂಗರಾಜಮಲ್ಲಾಡಿ, ಮುಖಂಡರಾದ ಗಣೇಶ್‌ಕುಮಾರಸ್ವಾಮಿ, ಶಂಕರ್‌, ಲ್ಯಾಂಪ್ಸ್‌ ಕೃಷ್ಣಯ್ಯ ಮಾತನಾಡಿದರು.

ಜಿಪಂ ಸದಸ್ಯ ಎಂ.ಬಿ.ಸುರೇಂದ್ರ, ಮುಖಂಡರಾದ ಡಿ.ಕೆ.ಕುನ್ನೇಗೌಡ, ಜೆಡಿಎಸ್‌ ತಾಲೂಕು ಅಧ್ಯಕ್ಷ ಹರಳಹಳ್ಳಿ ಮಾದೇಗೌಡ, ಶಿವಣ್ಣ, ತಿಮ್ಮನಾಯ್ಕ, ಅಣ್ಣಯ್ಯನಾಯ್ಕ, ಯುವ ಅಧ್ಯಕ್ಷ ಲೋಕೇಶ್‌, ಪುಟ್ಟರಾಜು ಇದ್ದರು. 

ಟಾಪ್ ನ್ಯೂಸ್

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.