ಮೋದಿಯಿಂದ ಬ್ಯಾಂಕಿಂಗ್ ವ್ಯವಸ್ಥೆ ನಾಶ: ಎಟಿಎಂ ಖಾಲಿ ಬಗ್ಗೆ ರಾಹುಲ್
Team Udayavani, Apr 17, 2018, 3:35 PM IST
ಹೊಸದಿಲ್ಲಿ : ನೋಟು ಅಮಾನ್ಯದ ದಿನಗಳನ್ನು ನೆನಪಿಸುವ ರೀತಿಯಲ್ಲಿ ಇಂದು ದೇಶದ ವಿವಿಧ ಭಾಗಗಳಲ್ಲಿ ತೀವ್ರ ನಗದು ಕೊರತೆ ಉಂಟಾಗಿ ಎಟಿಎಂ ಗಳು ಖಾಲಿಯಾಗಿರುವ ವರದಿಗಳು ಇಂದು ವ್ಯಾಪಕವಾಗಿ ಹರಡುತ್ತಿರುವಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ಹೊಸ ವಾಗ್ಧಾಳಿಯನ್ನು ಆರಂಭಿಸಿದ್ದಾರೆ. ಮೋದಿ ಜೀ ಅವರು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ನಾಶ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಕಿಡಿ ಕಾರಿದ್ದಾರೆ.
ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ ಅವರು ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 30,000 ಕೋಟಿ ರೂ. ವಂಚಿಸಿರುವ ಉದಾಹರಣೆಯನ್ನು ಎತ್ತಿಕೊಂಡ ರಾಹುಲ್ ಗಾಂಧಿ, ಇಷ್ಟೊಂದು ದೊಡ್ಡ ಮೊತ್ತದ ಬ್ಯಾಂಕ್ ವಂಚನೆ ನಡೆದರೂ ಪ್ರಧಾನಿ ಮೋದಿ ಮೌನವಹಿಸಿದ್ದಾರೆ ಎಂದು ಟೀಕಿಸಿದರು.
ನೋಟು ಅಮಾನ್ಯ ಕ್ರಮದ ಮೂಲಕ ಪ್ರಧಾನಿ ಮೋದಿ ಅವರು ಚಲಾವಣೆಯಲ್ಲಿದ್ದ 500 ರೂ. ಮತ್ತು 1,000 ರೂ. ನೋಟುಗಳನ್ನು ದೇಶದ ಹಣಕಾಸು ಮಾರುಕಟ್ಟೆಯಿಂದ ಹಿಂಪಡೆದುಕೊಂಡು ನೀರವ್ ಮೋದಿಗೆ ನೀಡಿದ್ದಾರೆ; ನಮ್ಮನ್ನೆಲ್ಲ ಬ್ಯಾಂಕ್ ಮುಂದೆ ಕ್ಯೂನಲ್ಲಿ ನಿಲ್ಲಿಸಿದ್ದಾರೆ ಎಂದು ರಾಹುಲ್ ಗಾಂಧಿ, ನೋಟು ಅಪನಗದೀಕರಣ ಕ್ರಮವನ್ನು ಖಂಡಿಸಿದರು.
“ಇಂತಹ ಅನೇಕ ಕಾರಣಗಳಿಗಾಗಿ ಪ್ರಧಾನಿ ಮೋದಿ ಅವರು ಸಂಸತ್ತನ್ನು ಎದುರಿಸಲು ಹೆದರುತ್ತಾರೆ. ಅದು ಬೇಕಿದ್ದರೆ ರಾಫೇಲ್ ವಿಷಯವೇ ಇರಲಿ ಅಥವಾ ನೀರವ್ ಮೋದಿ ವಿಷಯವೇ ಇರಲಿ; ಮೋದಿ ಅವರು ಸಂಸತ್ತಿನಲ್ಲಿ ನಿಂತು ಮಾತನಾಡುವುದಿಲ್ಲ; ಕೇವಲ 15 ನಿಮಿಷ ಮಾತನಾಡಿ ಎಂದು ನಾವು ಕೇಳಿಕೊಂಡರೂ ಅವರು ಮಾತನಾಡಲು ಎದ್ದು ನಿಲ್ಲುವುದಿಲ್ಲ’ ಎಂದು ರಾಹುಲ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.