ಶೆಟ್ಟರ ನಿವಾಸದೆದುರು ಪ್ರತಿಭಟನೆ


Team Udayavani, Apr 18, 2018, 12:47 PM IST

h2.jpg

ಹುಬ್ಬಳ್ಳಿ: ಬೆಂಬಲಿಗರ ಒತ್ತಡ ಹಾಗೂ ಕಲಘಟಗಿ ತಾಲೂಕಿನಲ್ಲಿನ ಬೆಳವಣಿಗೆ ಕುರಿತು ಪಕ್ಷದ ಹೈಕಮಾಂಡ್‌ ಗಮನಕ್ಕೆ ತರುವುದಾಗಿ ವಿಧಾನಸಭೆ ಪ್ರತಿಪಕ್ಷ  ನಾಯಕ ಜಗದೀಶ ಶೆಟ್ಟರ ಅವರು ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ವಂಚಿತ ಸಿ.ಎಂ. ನಿಂಬಣ್ಣವರ ಬೆಂಬಲಿಗರಿಗೆ ಭರವಸೆ ನೀಡಿದರು. 

ಮಂಗಳವಾರ ಸಂಜೆ ಕಲಘಟಗಿಯಿಂದ ಆಗಮಿಸಿದ್ದ ಸಿ.ಎಂ. ನಿಂಬಣ್ಣವರ ನೂರಾರು ಬೆಂಬಲಿಗರು ಶೆಟ್ಟರ ನಿವಾಸದ ಮುಂದೆ ಪ್ರತಿಭಟನೆ  ನಡೆಸಿದರು. ಕೆಲವರ ಒಳಒಪ್ಪಂದದ ಷಡ್ಯಂತ್ರದಿಂದ ನಿಂಬಣ್ಣವರಗೆ ಟಿಕೆಟ್‌ ತಪ್ಪಿದೆ. ಕ್ಷೇತ್ರಕ್ಕೆ ಪರಿಚಯವಿಲ್ಲದವರಿಗೆ ಟಿಕೆಟ್‌ ನೀಡಲಾಗಿದೆ  ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಲಿಗೆ ಬಿದ್ದರು: ನಿಂಬಣ್ಣವರ ಗೆಲುವಿಗಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಅನೇಕರು ಬಿಜೆಪಿ ಸೇರಿದ್ದು, ಇಂತಹ ಸಂದರ್ಭದಲ್ಲಿ ಅವರಿಗೆ ಟಿಕೆಟ್‌  ನೀಡದಿರುವುದು ಸರಿಯಲ್ಲ. ನಿಂಬಣ್ಣವರಗೇ ಟಿಕೆಟ್‌ ನೀಡಬೇಕೆಂದು ಕೆಲವರು ಶೆಟ್ಟರ ಕಾಲಿಗೆ ಬಿದ್ದು ಬೇಡಿಕೊಂಡರು. 

ಪ್ರತಿಭಟನಾ ನಿರತರನ್ನು  ಸಮಾಧಾನ  ಪಡಿಸುವ ಯತ್ನ ಕೈಗೂಡದ ಹಿನ್ನೆಲೆಯಲ್ಲಿ ಪ್ರಮುಖರನ್ನು ಮಾತ್ರ ಚರ್ಚೆಗೆ ಆಹ್ವಾನಿಸಿದ ಶೆಟ್ಟರ, ಎರಡು ದಿನ ಕಾಲಾವಕಾಶ ನೀಡಿ, ಪಕ್ಷದ  ವರಿಷ್ಠರ ಗಮನಕ್ಕೆ ತರುವುದಾಗಿ ಹೇಳಿದರು. 

ಇದಕ್ಕೆ ಒಪ್ಪದ ಬೆಂಬಲಿಗರು ಒಂದು ದಿನದೊಳಗಾಗಿ ನಿರ್ಧಾರ ಪ್ರಕಟಿಸಬೇಕೆಂದು ಪಟ್ಟು ಹಿಡಿದರು. ಇದಕ್ಕೆ  ಶೆಟ್ಟರ ಒಪ್ಪಿದ್ದರಿಂದ ಪ್ರತಿಭಟನೆ ಹಿಂಪಡೆದರು. ಇದಕ್ಕೂ ಮೊದಲು ಪ್ರತಿಭಟನಾಕಾರರು ಸಂಸದ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದರು.

ಜೋಶಿ ಬೇರೆ ಕಡೆ ಹೋಗಿದ್ದಾರೆಂದು ತಿಳಿದು ನಂತರ ಶೆಟ್ಟರ ನಿವಾಸಕ್ಕೆ ಆಗಮಿಸಿದ್ದರು. ಮುಖಂಡರಾದ ಕೃಷ್ಣ ಕೋಳಾನಟ್ಟಿ, ಎನ್‌.ಬಿ.  ಕುರಿಯವರ, ಮಹಾಂತೇಶ ತಹಶೀಲ್ದಾರ, ಪರಶುರಾಮ ದುಂಡಿ, ಬಿ.ಎಸ್‌. ಪಾಟೀಲ, ವೈ.ಕೆ. ಹುಲಗೂರ, ಧರ್ಮಣ್ಣ ಕಟ್ಟಿ, ಶಿವಾನಂದ ಅಂಗಡಿ, ಶಿವನಗೌಡ ಹಿರೇಮಠ ಇನ್ನಿತರರಿದ್ದರು. 

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.