ಮತ್ತೊಮ್ಮೆ ಮದವೇರಿ ಬಂದ “ಟಗರು’ ಶಿವಣ್ಣ
Team Udayavani, Apr 18, 2018, 4:18 PM IST
ಇತ್ತೀಚೆಗೆ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ “ಟಗರು’ ಚಿತ್ರ ಭರ್ಜರಿ ಪ್ರದರ್ಶನವಾಗುತ್ತಿದ್ದು, ಈಗಾಗಲೇ ಚಿತ್ರ ಹಾಗೂ ಚಿತ್ರದ ಹಾಡುಗಳು ಪ್ರೇಕ್ಷಕರಿಂದ ಬೊಂಬಾಟ್ ಮೆಚ್ಚುಗೆ ಗಳಿಸಿದ್ದು, ಈಗ “ಟಗರು 2′ ಚಿತ್ರದ ಪ್ರಮೋಷನಲ್ ಸಾಂಗ್ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೇನಪ್ಪಾ “ಟಗರು’ ಚಿತ್ರವೇ ಈಗಷ್ಟೇ ಬಿಡುಗಡೆಯಾಗಿದೆ.
ಅಷ್ಟರಲ್ಲೇ “ಟಗರು 2′ ಚಿತ್ರ ಸೆಟ್ಟೇರುತ್ತಿದೆಯಾ ಎಂದು ಯೋಚಿಸುತ್ತಿದ್ದೀರಾ? ಹೌದು! ಶಿವರಾಜಕುಮಾರ್ ಅವರ ಅಭಿಮಾನಿಯಾದ ಗದಗ ಜಿಲ್ಲೆಯ ಶಿರಹಟ್ಟಿಯ ಮಾಚೇನಹಳ್ಳಿ ಗ್ರಾಮದ ಸತೀಶ ಕಮ್ಮಾರ ಎಂಬುವವರು “ಟಗರು 2′ ಚಿತ್ರಕ್ಕೆ ಪ್ರಮೋಷನಲ್ ಸಾಂಗ್ ಎಂಬ ಟೈಟಲ್‍ನಡಿ ಯೂಟ್ಯೂಬ್‌ನಲ್ಲಿ “ಬಂತು ಬಂತು ಬಂತೂ… ಮದವೇರಿದ ಟಗರು’ ಎಂಬ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದಾರೆ.
ಈ ಹಾಡಿಗೆ ಮಂಗಳೂರಿನ ಲಾಯ್ ವ್ಯಾಲೈಟೈನ್ ಸಲ್ಧಾನಾ ಸಂಗೀತವನ್ನು ನೀಡಿದ್ದು, ಹಾಡಿಗೆ ದನಿಯಾಗಿದ್ದಾರೆ. ಇನ್ನು ಸತೀಶ್ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಲಾಯ್ ವ್ಯಾಲೈಟೈನ್ ಅವರು ಜೋಶ್‍ನಲ್ಲಿ ಹಾಡುತ್ತಿರುವ ದೃಶ್ಯಗಳು ಹಾಗೂ “ಟಗರು’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಅವರ ಆ್ಯಕ್ಷನ್ ದೃಶ್ಯಗಳು ಮತ್ತು ಹೊಡೆದಾಟವನ್ನು ಬಳಸಿಕೊಳ್ಳಲಾಗಿದೆ.
ಅಲ್ಲದೇ ಶಿವಣ್ಣ ಈ ಹಾಡನ್ನು ಕೇಳುತ್ತಿರುವ ದೃಶ್ಯಗಳು ಸಹ ಇವೆ. ವಿಶೇಷ ಅಂದರೆ ಈ ಹಾಡನ್ನು “ಟಗರು’ ಸಿನಿಮಾ ಬಿಡುಗಡೆಯಾದ ಮರುದಿನವೇ ಸತೀಶ್ ಹಾಗೂ ಲಾಯ್ ಈ ಹಾಡನ್ನು ಯುಟ್ಯೂಬ್‌ನಲ್ಲಿ ಹರಿಬಿಟ್ಟಿದ್ದು, ಇಲ್ಲಿಯವರೆಗೂ ಈ ಹಾಡನ್ನು ಒಂದು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.