ಮನೆ-ದ್ವಿಚಕ್ರ ವಾಹನ ಕಳ್ಳನ ಬಂಧನ
Team Udayavani, Apr 18, 2018, 4:32 PM IST
ಹುಬ್ಬಳ್ಳಿ: ಮನೆ ಹಾಗೂ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದನ್ನೆ ದಂಧೆ ಮಾಡಿಕೊಂಡಿದ್ದ ಓರ್ವನನ್ನು ಗೋಕುಲ ರಸ್ತೆ ಪೊಲೀಸರು ಬಂಧಿಸಿ, ಆತನಿಂದ 36 ಗ್ರಾಂ ಚಿನ್ನಾಭರಣ, 170 ಗ್ರಾಂ ಬೆಳ್ಳಿ ಸಾಮಗ್ರಿ, ಟಿವಿ, ಬೈಕ್ ಸೇರಿದಂತೆ ಒಟ್ಟು 3.25ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಹಳೇಹುಬ್ಬಳ್ಳಿ ಆನಂದನಗರದ ರಫೀಕ್ ಊರ್ಫ್ ಗಬ್ಬರ ಐ. ಮುಲ್ಲಾ ಎಂಬಾತನೆ ಸಿಕ್ಕಿಬಿದ್ದಿದ್ದಾನೆ. ಮಂಗಳವಾರ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಈತನನ್ನು ಪೊಲೀಸರು ಹಿಡಿದು ವಿಚಾರಿಸಿದಾಗ, ಗೋಕುಲ ರಸ್ತೆ ಪೊಲೀಸ್ ಠಾಣೆ ಸಮೀಪದ ಮಿನರ್ವಾ ಬಾರ್ ಬಳಿ ವೀರೇಶ ಸುತಗಟ್ಟಿ ಅವರು ಇಟ್ಟಿದ್ದ ರಾಯಲ್ ಎನ್‌ಫೀಲ್ಡ್, ಹಳೇಹುಬ್ಬಳ್ಳಿ ಏಕತಾ ಕಾಲೋನಿಯಲ್ಲಿ ಮಂಜುನಾಥ ಸರಳಾ ಹಾಗೂ ರೆಹಮತನಗರದ ಹುಸೇನ ಮುಜಾವರ ಅವರ ಮನೆ ಕೀಲಿ ಮುರಿದು 36 ಗ್ರಾಂ ಚಿನ್ನಾಭರಣ, 170ಗ್ರಾಂ ಬೆಳ್ಳಿ ಸಾಮಗ್ರಿ, ಒಂದು ಟಿವಿ ಹಾಗೂ ಕಲಘಟಗಿಯಲ್ಲಿ ಬೈಕ್ ಕಳುವು ಮಾಡಿದ್ದಾಗಿ ಒಪ್ಪಿಕೊಂಡಿದ್ದ.
ನಂತರ ಠಾಣಾಧಿಕಾರಿ ಮಲ್ಲಯ್ಯ ಮಠಪತಿ, ಪಿಎಸ್‌ಐ ಎಸ್.ಎಚ್. ಹೊಸಮನಿ ಹಾಗೂ ಸಿಬ್ಬಂದಿಯು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಂಧಿತನಿಂದ ಕಳುವು ಮಾಡಿದ್ದ ಅಂದಾಜು 3,25,400 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ಕೈಗೊಂಡ ತಂಡಕ್ಕೆ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.