ಶಾಲೆ ಸ್ಥಗಿತ: ಪಾಲಕರ ಧರಣಿ


Team Udayavani, Apr 18, 2018, 5:25 PM IST

18-April-27.jpg

ಜಮಖಂಡಿ: ತಾಲೂಕಿನ ರಬಕವಿ ಪಟ್ಟಣದ ಬಸವಾ ಫೌಂಡೇಶನ್‌ ಕನ್ನಡ ಪ್ರಾಥಮಿಕ ಶಾಲೆ ಸ್ಥಗಿತಗೊಳಿಸಿ, ಹೊಸದಾಗಿ ಆಂಗ್ಲ ಮಾಧ್ಯಮ ಆರಂಭಿಸಿರುವ ಹಿನ್ನೆಲೆಯಲ್ಲಿ ಆರ್‌ಟಿಇ ನಿಯಮದಡಿಯಲ್ಲಿ ಆಯ್ಕೆಗೊಂಡಿರುವ 77 ಮಕ್ಕಳು ಗತೀಯೇನು ಎಂದು ಪಾಲಕರು ಆರೋಪಿಸಿ ನಗರದ ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಸವರಾಜ ನಮ್ನಿ ಮಾತನಾಡಿ, ಕಳೆದ 10 ವರ್ಷಗಳಿಂದ ರಬಕವಿ ಪಟ್ಟಣದ ಬಸವಾ ಫೌಂಡೇಶನ್‌ ಸಂಸ್ಥೆ ಕನ್ನಡ ಪ್ರಾಥಮಿಕ ತರಗತಿಗಳನ್ನು ನಡೆಸುತ್ತಿದೆ. ಏಕಾಏಕಿಯಾಗಿ ಕನ್ನಡ ಪ್ರಾಥಮಿಕ ಶಾಲೆ ಸ್ಥಗಿತಗೊಳಿಸಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿದರೇ ಕಲಿಯುತ್ತಿರುವ ವಿದ್ಯಾರ್ಥಿಗಳು ಗತಿಯೇನು?. ಸಂಬಂಧಿಸಿದ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ರಬಕವಿ ಪಟ್ಟಣದ ಬಸವಾ ಫೌಂಡೇಶನ್‌ ಸಂಸ್ಥೆಯಲ್ಲಿ ಮಕ್ಕಳಿಗೆ ಶಿಕ್ಷಣ ಲಭಿಸಬೇಕು. ಸಂಸ್ಥೆಗಳು ಹಾಗೂ ಅಧಿಕಾರಿಗಳು ಮನಬಂದಂತೆ ವರ್ತಿಸಿದರೆ ಪಾಲಕರು ಹಾಗೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಕನ್ನಡ ಮಾಧ್ಯಮ ಶಾಲೆ ಸ್ಥಗಿತಗೊಳಿಸಿ ಆಂಗ್ಲ ಮಾಧ್ಯಮ ಶಾಲೆಗೆ ಅನುಮತಿ ನೀಡುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅ ಧಿಕಾರಿಗಳು ಮಕ್ಕಳ ಶಿಕ್ಷಣ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಶಿಕ್ಷಣ ನಿರ್ಲಕ್ಷ್ಯ ಹಾಗೂ ಖಾಸಗಿ ಸಂಸ್ಥೆಯ ಧೋರಣೆ ಖಂಡಿಸುತ್ತೇವೆ. ಶಾಲಾ ಮಕ್ಕಳಿಗೆ ನ್ಯಾಯ ಲಭಿಸದಿದ್ದಲ್ಲಿ ರಸ್ತೆಗಳಿಗೆ ಹೋರಾಟ ಮಾಡುವುದಾಗಿ ಹಿರಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಆಗಮಿಸಿದ ಬಿಇಒ ಪ್ರಮೀಳಾ ಜೋಶಿ ಮಾತನಾಡಿ, ರಬಕವಿ ಪಟ್ಟಣದ ಬಸವಾ ಫೌಂಡೇಶನ್‌ ಸಂಸ್ಥೆ ಹಾಗೂ ಡಿಡಿಪಿಐ ಚರ್ಚಿಸುತ್ತೇನೆ. ಮಕ್ಕಳಿಗೆ ಅನ್ಯಾಯವಾಗದ ರೀತಿಯಲ್ಲಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದರು. ಪ್ರತಿಭಟನಾಕಾರರು ಲಿಖಿತ ರೂಪದಲ್ಲಿ ನೀಡಲು ಪಟ್ಟು ಹಿಡಿದರು. ಪರಿಸ್ಥಿತಿ ವಿಕೋಪಕ್ಕೆ ತಿರಗುತ್ತಿರುವುದನ್ನು ಅರಿತ ಶಿಕ್ಷಣ ಇಲಾಖೆ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ಫೋನ್ ಮೂಲಕ ಮಾತುಕತೆ ನಡೆಸುವ ಮೂಲಕ ಮಂಗಳವಾರ ಸಮಸ್ಯೆ ಬಗೆಹರಿಸುವ ಭರವಸೆ ಲಭಿಸಿದಾಗಿ ಪ್ರತಿಭಟನೆ ವಾಪಸ್‌ ಪಡೆದರು.

ಮಹಾದೇವ ಜಮಖಂಡಿ, ರಾಮಚಂದ್ರ ಕಂಕಣವಾಡಿ, ರಾಜು ಬೋಪರೆ, ಸಂಜಯ ಹೊನಕಡಬಿ, ಸದಾಶಿವ ಕಳಸಾಲಗಿ, ಭರತ ಹಳಿಂಗಳಿ, ಅಶೋಕ ಕಾವಾಸೆ, ಶ್ರೀಶೈಲ ಮೂರತಲಿ, ಬಾನು ಮುಲ್ಲಾ, ಭಾರತಿ ಹೊನಕಡಬಿ, ಲಕ್ಷ್ಮೀ ಕಟಗಿ, ಶಾಂತಾ ಮೂರತಲಿ, ಮಕ್ಕಳು ಇದ್ದರು.

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.