ಪಾರದರ್ಶಕ ಚುನಾವಣೆಗೆ ಸೂಕ್ತ ಕ್ರಮ
Team Udayavani, Apr 19, 2018, 5:42 PM IST
ಹುಕ್ಕೇರಿ: ಚುನಾವಣೆ ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸಲು ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ಸಶಸ್ತ್ರ ಸೇನಾ ಬಲ, ಕೇಂದ್ರ ಮೀಸಲು ಪಡೆ ಎರಡು ಕ್ಷೇತ್ರಗಳಲ್ಲಿ ಕಾರ್ಯನಿರತವಾಗಿವೆ ಎಂದು ಚುನಾವಣಾಧಿಕಾರಿ ವಿ.ವಿ. ಕುಲಕರ್ಣಿ ಹೇಳಿದರು.
ತಹಶೀಲ್ದಾರ ಕಚೇರಿಯಲ್ಲಿ ಚುನಾವಣಾ ಸಿದ್ಧತೆಯ ಕುರಿತು ನಡೆದ ಸುದ್ಧಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಉಮೇದುವಾರಿಕೆ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಏ. 24ರವರೆಗೆ ನಾಮಪತ್ರ ಸಲ್ಲಿಸಬಹುದು. ಏ. 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ. 27ರಂದು ನಾಮಪತ್ರಗಳ ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ
ಎಂದರು. ಹುಕ್ಕೇರಿ ಮತಕ್ಷೇತ್ರದಲ್ಲಿ 220 ಮತಗಟ್ಟೆಗಳಿದ್ದು, ಈ ಪೈಕಿ 22 ಸೂಕ್ಷ್ಮ, 2 ಅತೀಸೂಕ್ಷ್ಮಮತಗಟ್ಟೆಗಳಿವೆ. ಕ್ಷೇತ್ರದಲ್ಲಿ ಒಟ್ಟು 1,90,910 ಮತದಾರರಿದ್ದಾರೆ. ಇನ್ನು ಯಮಕನಮರಡಿ ಕ್ಷೇತ್ರದಲ್ಲಿ 234 ಮತಗಟ್ಟೆಗಳಿದ್ದು, ಈ ಪೈಕಿ 22 ಸೂಕ್ಷ್ಮ ಮತಗಟ್ಟೆಗಳಿವೆ. ಒಟ್ಟು 1,84,454 ಮತದಾರರಿದ್ದಾರೆ.ಹುಕ್ಕೇರಿ ಮತಕ್ಷೇತ್ರ ವ್ಯಾಪ್ತಿಯ ಸಂಕೇಶ್ವರಲ್ಲಿ 2 ಹುಕ್ಕೇರಿಯಲ್ಲಿ 3, ಗುಡಸ ಗ್ರಾಮದಲ್ಲಿ 1 ಹಾಗೂ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಯಮಕನಮರಡಿ ಮತಗಟ್ಟೆಗಳನ್ನು ಪಿಂಕ್ ಮತಗಟ್ಟೆ ಎಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳೆಯರೇ
ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಮಹಿಳಾ ಸಿಬ್ಬಂದಿಗಳೇ ಕರ್ತವ್ಯ ನಿರ್ವಹಿಸುವ 7 ಪಿಂಕ್ ಮತಗಟ್ಟೆಗಳನ್ನು ಹುಕ್ಕೇರಿ ಹಾಗೂ ಯಮಕನಮರಡಿ ಕ್ಷೇತ್ರಗಳಲ್ಲಿ ಗುರುತಿಸಲಾಗಿದೆ. ಹುಕ್ಕೇರಿ ಹಾಗೂ ಯಮಕನಮರಡಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲ ಮತಗಟ್ಟೆಗಳಲ್ಲಿ ರ್‍ಯಾಂಪ್ ನಿರ್ಮಾಣ, ಶೌಚಾಲಯಗಳ ರಿಪೇರಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಕಾರಿಗಳಾದ ಜಿ.ಪದ್ಮಾವತಿ, ಅಶೋಕ ಗುರಾಣಿ, ಗ್ರೇಡ್ 1 ತಹಶೀಲದಾರ ಕೆ.ಕೆ.ಬೆಳವಿ, ಬಸವರಾಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.