ಅನಾಥ ಹುಡುಗನ ಸಾಧನೆಯ ಕಥೆ


Team Udayavani, Apr 20, 2018, 6:15 AM IST

Parthasarathy.jpg

“ಪಾರ್ಥಸಾರಥಿ’ ಎಂಬ ಚಿತ್ರವೊಂದು ಸದ್ದಿಲ್ಲದೇ ತಯಾರಾಗಿದೆ. ಈ ಚಿತ್ರವನ್ನು ರಾಬರ್ಟ್‌ ನವರಾಜ್‌ ನಿರ್ದೇಶಿಸಿದ್ದಾರೆ. ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಮೂವತ್ತು ವರ್ಷಗಳಿಂದ ಗೋವಾದಲ್ಲಿ ನೆಲೆಸಿರುವ ರಾಬರ್ಟ್‌ ಸಿನಿಮಾ ಮೇಲಿನ ಪ್ರೀತಿಯಿಂದ “ಪಾರ್ಥಸಾರಥಿ’ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. 

ಸಂಗೀತ ನಿರ್ದೇಶಕ ವಿ.ಮನೋಹರ್‌ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಚುತ್ರದಲ್ಲಿ ರೇಣುಕ್‌ ಕುಮಾರ್‌ ನಾಯಕರಾಗಿ ನಟಿಸಿದಾರೆ. ನಾಯಕರಾಗಿ ಇವರಿಗೆ “ಪಾರ್ಥಸಾರಥಿ’ ಮೊದಲ ಚಿತ್ರ. ಈ ಹಿಂದೆ ಆಲಿಯಾ ಭಟ್‌ ಅವರೊಂದಿಗೆ ಹಿಂದಿ ಸಿನಿಮಾವೊಂದರಲ್ಲಿ ನಟಿಸಿದ ಅನುಭವವಿದೆ.  

ಅನಾಥನಾಗಿ ಬೆಳೆದು ಜನರ ಪ್ರೀತಿಯಿಂದ ಮುಂದೆ  ಪ್ರಾಮಾಣಿಕ ಐಪಿಎಸ್‌ ಆಧಿಕಾರಿಯಾಗುವ ಪಾತ್ರ ಅವರದಂತೆ. ನಟನೆ, ನೃತ್ಯದ ತರಬೇತಿ ಪಡೆದಿದ್ದಾಗಿ ಹೇಳಿಕೊಂಡರು ರೇಣುಕ್‌ ಕುಮಾರ್‌. ಅಕ್ಷತಾ ಈ ಚಿತ್ರದ ನಾಯಕಿ. ಈಗಾಗಲೇ ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಅಕ್ಷತಾ ಇಲ್ಲಿ ಪತ್ರಕರ್ತೆಯಾಗಿ ನಟಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿನ ವರದಿ ಮಾಡುವ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳನ್ನು ಹೇಗೆ ನಿಭಾಹಿಸುತ್ತಾಳೆ ಎಂಬ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಾಬರ್ಟ್‌, “ಗೋವಾ ಕನ್ನಡಿಗರು  ಸೇರಿಕೊಂಡು  ನಿರ್ಮಾಣ ಮಾಡಿದ  ಮೊದಲ ಕನ್ನಡ ಚಿತ್ರವಿದು ಎನ್ನಬಹುದು. ಇದು ಅನಾಥ ಹುಡುಗನ ಸಾಧನೆಯ ಕಥೆಯನ್ನು ಹೊಂದಿದೆ. ಅನಾಥ ಹುಡುಗರ ಬಗ್ಗೆ ಅಸಡ್ಡೆ ತೋರದೇ  ಪ್ರೀತಿಯನ್ನು ತೋರಿಸಿದರೆ ಅವರು ಕೂಡಾ ಸಹ ಬುದ್ದಿವಂತರಾಗಿ ಸಾಧನೆ ಮಾಡುತ್ತಾರೆ. ಆ ತರಹದ ಹುಡುಗರ ಸ್ಫೂರ್ತಿಯಿಂದ ಈ ಚಿತ್ರ ಮಾಡಲಾಗಿದೆ. ಚಿತ್ರದಲ್ಲಿ ಪೊಲೀಸ್‌ ಇಲಾಖೆಯ ಕತೆ ಇದ್ದರೂ ಆಕ್ಷನ್‌ಗಿಂತ ಭಾವನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆ’ ಎಂದು ಹೇಳಿದರು.

ಮೈಸೂರು, ಬೆಂಗಳೂರು, ಉತ್ತರ ಕನ್ನಡ, ಮಂಗಳೂರು, ಗೋವಾ, ಗುಜರಾತ್‌, ರಾಜಸ್ಥಾನ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಮುಂದಿನ ತಿಂಗಳು ಚಿತ್ರ ಬಿಡುಗಡೆ ಮಾಡುವ ಆಲೋಚನೆ ನಿರ್ದೇಶಕರಿಗಿದೆ. ಚಿತ್ರಕ್ಕೆ  ಹರ್ಷವರ್ಧನ್‌-ಎನ್‌. ರಾಘವೇಂದ್ರ ಅವರ ಸಂಭಾಷಣೆ, ವಿಕ್ಟರ್‌ ಲೋಗಿದಾಸನ್‌ ಸಂಗೀತ, ನೀಲೇಶ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.