ಆದಿವಾಸಿಗಳಿಂದ ಮತದಾನ ಬಹಿಷ್ಕರಿಸುವ ಎಚ್ಚರಿಕೆ


Team Udayavani, Apr 20, 2018, 12:48 PM IST

m5-adivasi.jpg

ಹುಣಸೂರು: ಕಾಡಿನಿಂದ ನಾಡಿಗೆ ಕರೆತಂದವರು ಸೌಲಭ್ಯ ನೀಡುವಲ್ಲಿ ವಿಫ‌ಲರಾಗಿದ್ದಾರೆಂದು ಆರೋಪಿಸಿ, ಹೆಬ್ಬಳ್ಳ ಗಿರಿಜನ ಪುನರ್ವಸತಿ ಕೇಂದ್ರದ 340ಕ್ಕೂ ಹೆಚ್ಚು ಆದಿವಾಸಿಗಳು ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು. ಹುಣಸೂರು ತಾಲೂಕು ಹೆಬ್ಬಳ್ಳ ಗಿರಿಜನ ಪುನರ್ವಸತಿ ಕೇಂದ್ರದ ಚಂದ್ರ ಅಧ್ಯಕ್ಷತೆಯಲ್ಲಿ ಆದಿವಾಸಿಗಳು ಗುರುವಾರ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದರು. 

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಗೋಣಿಗದ್ದೆ, ಕೊಡಗಿನ ಕೊಳಂಗೇರಿ, ಚೇಣಿಹಡ್ಲು, ಆಯರಹೊಸಳ್ಳಿ ಹಾಡಿಗಳು, ಎಚ್‌.ಡಿ.ಕೋಟೆ ತಾಲೂಕಿನ ಮಚ್ಚಾರು ಮತ್ತು ಕೆರೆ ಹಾಡಿಗಳಿಂದ 2013 ಹಾಗೂ 2014ರಲ್ಲಿ ಹಂತಹಂತವಾಗಿ ಈ ಕೇಂದ್ರಕ್ಕೆ ಆಗಮಿಸಿ ಒಟ್ಟು 130 ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದೇವೆ. ಕುಟುಂಬಕ್ಕೊಂದು ಮನೆ ಮತ್ತು ತಲಾ ಮೂರು ಎಕರೆ ಭೂಮಿ ನೀಡಿರುವುದು ಬಿಟ್ಟರೆ, ಮತ್ಯಾವ ಸೌಲಭ್ಯಗಳನ್ನು ಕಲ್ಪಿಸಿಲ್ಲ ಎಂದು ದೂರಿದರು. 

ಕಂದಾಯ ಗ್ರಾಮವಾಗಿಲ್ಲ: ಇಲ್ಲಿ ಪುನರ್ವಸತಿಗೊಂಡು ನಾಲ್ಕು ವರ್ಷಗಳು ಕಳೆದರೂ ಇದುವರೆಗೂ ಕೇಂದ್ರವನ್ನು ಕಂದಾಯ ಗ್ರಾಮವಾಗಿಸಿಲ್ಲ, ಇದರಿಂದಾಗಿ ಗ್ರಾಮ ಪಂಚಾಯ್ತಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ಸೇರಿದಂತೆ ಸವಲತ್ತುಗಳು ಪಡೆಯಲಾಗುತ್ತಿಲ್ಲ. ಮನವಿ ಮಾಡಿದರೂ ಅಧಿಕಾರಿಗಳಾರೂ ಕ್ಯಾರೆ ಅನ್ನುತ್ತಿಲ್ಲವೆಂದು ಆರೋಪಿಸಿದರು. 

ಭೂಮಿಗೂ ಹಕ್ಕುಪತ್ರವಿಲ್ಲ: ಪುನರ್ವಸತಿ ಯೋಜನೆಯ ಪ್ಯಾಕೇಜ್‌ನಡಿ ತಲಾ 3 ಎಕರೆ ಭೂಮಿ ವಿತರಿಸಲಾಗಿದೆ. ಆದರೆ ನೀಡಿರುವ ಭೂ ಒಡೆತನ ಪತ್ರಕ್ಕೆ ಯಾವುದೇ ಸಾಲ ಸೌಲಭ್ಯ-ಸವಲತ್ತುಗಳು ಸಿಗುತ್ತಿಲ್ಲ, ಒಂದೇ ಒಂದು ಬೋರ್‌ವೆಲ್‌ ಕೊರೆಸಿ ಪಂಪ್‌ಸೆಟ್‌ ಅಳವಡಿಸಿಲ್ಲ. ಇನ್ನು ಭೂಮಿ ಅಲ್ಲಲ್ಲಿ ಒತ್ತುವರಿಯಾಗಿದೆ, ದನಕರುಗಳಿಗೆ ಗೋಮಾಳ ನಿಗದಿಪಡಿಸಿಲ್ಲ, ಅಳತೆ ಮಾಡಿಸಿ ಕಂದಕ ಹಾಗೂ ಸುತ್ತ ಬೇಲಿ ನಿರ್ಮಿಸದೆ ಅಕ್ಕಪಕ್ಕದ ಹಳ್ಳಿಗಳ ಜಾನುವಾರುಗಳಿಗೆ ಇಲ್ಲಿನ ಭೂಮಿ ಮೇವಿನ ತಾಣವಾಗಿದೆ. ಕೆರೆ-ಕಟ್ಟೆಯೂ ಇಲ್ಲಿಲ್ಲ ಎಂದು ಅಳಲು ತೋಡಿಕೊಂಡರು.

ನೀರಿನ ಸಮಸ್ಯೆ: ಈ ಪುನರ್ವಸತಿಗೊಂಡಿರುವ ಆದಿವಾಸಿಗಳ ಪ್ಯಾಕೇಜ್‌ ಹಣದಲ್ಲೇ ಉಡುವೆಪುರ ಬಳಿಯಿಂದ ಕೇಂದ್ರಕ್ಕೆ ಓವರ್‌ ಹೆಡ್‌ ಟ್ಯಾಂಕ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಇದು 130 ಕುಟುಂಬಗಳಿಗೆ ಸಾಲುತ್ತಿಲ್ಲ, ಅಕ್ಕಪಕ್ಕ ಕೆರೆ-ಕಟ್ಟೆ ಇದ್ದರೂ ನೀರಿಲ್ಲ, ಜಾನುವಾರು ದಾಹ ತೀರಿಸಲು ಪರದಾಡುವಂತಾಗಿದೆ.

ಭರಪೂರ ಭರವಸೆ: ಕೇಂದ್ರದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ, ಅರಣ್ಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾಡಳಿತ, ಜನಪ್ರತಿನಿಧಿಗಳು ಪ್ರತಿಬಾರಿ ಮನವಿ ಮಾಡಿದಾಗಲೂ ಭರಪೂರ ಭರವಸೆ ನೀಡುತ್ತಾರೆ. ಆದರೆ ಯಾವುದೇ ಕೆಲಸ ಮಾತ್ರ ಮಾಡಿಕೊಟ್ಟಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡುವುದಾಗಿ ಎಚ್ಚರಿಸಿದರು. 

ಕೇಂದ್ರದಲ್ಲಿ 40ಕ್ಕೂ ಹೆಚ್ಚು ಮಕ್ಕಳಿದ್ದು, ಅಂಗನವಾಡಿ ಕಟ್ಟಡ ನಿರ್ಮಿಸಿಲ್ಲ. ಸಮುದಾಯದ ಯಾವುದೇ ಚಟುವಟಿಕೆ ನಡೆಸಲು ಭವನವಿಲ್ಲದೆ ಮರದ ಕೆಳಗೆ ಸಭೆ ನಡೆಯುತ್ತಿದೆ. ನಿರ್ಮಿಸಿರುವ ಮನೆಗಳು ಕಳಪೆಯಾಗಿ ಸೋರುತ್ತಿವೆ. ನೆಲಹಾಸು ಬಿರುಕು ಬಿಟ್ಟಿದೆ
-ಕಮಲಾ, ಆದಿವಾಸಿ

ಟಾಪ್ ನ್ಯೂಸ್

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.