ಪ್ರಾಧ್ಯಾಪಕರು ವಿದ್ಯಾರ್ಥಿಗಳನ್ನು ಮೆಚ್ಚಿಸಬೇಕು
Team Udayavani, Apr 20, 2018, 4:49 PM IST
ಧಾರವಾಡ: ವಿದ್ಯಾಥಿಗಳನ್ನು ಮೆಚ್ಚುವ ಗುಣ ಧರ್ಮವನ್ನು ಪ್ರಾಧ್ಯಾಪಕರು ಬೆಳಸಿಕೊಂಡಾಗ ಮಾತ್ರ ಅವರಲ್ಲಿನ ಪ್ರತಿಭೆ ಹೊರಬರುತ್ತದೆ ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು.
ಕರ್ನಾಟಕ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಮೊಹರೆ ಹಣಮಂತರಾಯ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು
ಪ್ರೀತಿಯಿಂದ ಕಾಣಬೇಕು. ಹಾಗೆಯೇ ವಿದ್ಯಾರ್ಥಿಗಳು ಗುರುಗಳಿಗೆ ಗೌರವ ತರುವ ನಿಟ್ಟಿನಲ್ಲಿ ಬರೆಯಲು, ಬದುಕಲು
ಕಲಿಯಬೇಕು ಎಂದರು.
ಕನ್ನಡ ಪತ್ರಿಕೋದ್ಯಮದಲ್ಲಿ ಮೊಹರೆ ಹಣಮಂತರಾಯ ಅವರಂತಹ ಪತ್ರಿಕಾ ಸಂಪಾದಕರು ಮತ್ತೆ ಕ್ಷೇತ್ರದಲ್ಲಿ
ಕಾಣಿಸಿಕೊಳ್ಳಲೇ ಇಲ್ಲ. ಅವರ ಆದರ್ಶಗಳು ಇಂದು ಎಲ್ಲರಿಗೂ ಮಾದರಿಯಾಗಿವೆ. ದೊಡ್ಡ ಪತ್ರಿಕೆಯ ಸಂಪಾದಕರಾಗಿ ಹಲವಾರು ದಶಕಗಳ ಕಾಲ ಸೇವೆ ಸಲ್ಲಿಸಿದರೂ ಅವರು ಒಂದು ಮನೆ ಕೂಡ ಕಟ್ಟಿಕೊಳ್ಳಲಿಲ್ಲ. ಪತ್ರಕರ್ತರು ಹಣದ ದಾಸರಾಗಿ ಕೆಲಸ ಮಾಡಬೇಡಿ, ಹಣದ ದಾಸರಾಗದೇ ಗುಣದ ದಾಸರಾಗಿ. ಇದ್ದಷ್ಟು ದಿನ ಮನುಷ್ಯ ಸಮಾಜಕ್ಕೆ ಪ್ರಯೋಜನಕಾರಿ ವ್ಯಕ್ತಿಯಾಗಿ ಬದುಕಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಸಚಿವ ಪ್ರೊ| ಮಲ್ಲಿಕಾರ್ಜುನ ಪಾಟೀಲ ಮಾತನಾಡಿದರು. ಡಾ| ಪಾಟೀಲ ಪುಟ್ಟಪ್ಪ ಅವರನ್ನು ಸನ್ಮಾನಿಸಲಾಯಿತು. ವಿಭಾಗದ ಮುಖ್ಯಸ್ಥ ಡಾ| ಜೆ.ಎಂ. ಚಂದುನವರ ಸ್ವಾಗತಿಸಿದರು. ಭೀಮರಾಯ ದೇಸಾಯಿ ನಿರೂಪಿಸಿದರು. ಕಾವ್ಯಾ ಭಟ್ಟ ಸ್ವಾಗತಿಸಿದರು. ಡಾ| ನಾಗರಾಜ ಹಳ್ಳಿಯವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.