![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 21, 2018, 7:20 AM IST
ಬೆಂಗಳೂರು: ರಾಜ್ಯದ ಸರಕಾರಿ ಮಹಿಳಾ ಪದವಿ ಕಾಲೇಜುಗಳನ್ನು ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಂಯೋಜನೆಗೆ ಒಳಪಡಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ಕಾಲೇಜುಗಳ ಪ್ರಾಂಶುಪಾಲರುಗಳಿಗೆ 3 ತಿಂಗಳುಗಳ ಕಾಲಾವಕಾಶ ನೀಡಲಾಗಿದೆ.
ಅಕ್ಕಮಹಾದೇವಿ ವಿ.ವಿ. ಕುಲಪತಿ ಪ್ರೊ| ಸಬಿಹಾ ಭೂಮೀಗೌಡ ನೇತೃತ್ವದಲ್ಲಿ ಶುಕ್ರವಾರ ನಗರದ ಜ್ಞಾನಜೋತಿ ಸಭಾಂಗಣದಲ್ಲಿ ರಾಜ್ಯದ 26 ಸರಕಾರಿ ಮಹಿಳಾ ಕಾಲೇಜುಗಳ ಪ್ರಾಂಶುಪಾಲರು, ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.
ಹೀಗಾಗಿ ಸಭೆಯಲ್ಲಿ ಮಹಿಳಾ ವಿವಿಯ ನಿಯಮ, ಸರಕಾರದ ಅಧಿಸೂಚನೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಮಾಹಿತಿ ನೀಡಲಾ ಗಿದೆ. ಈ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಪ್ರಾಂಶುಪಾಲರು 3 ತಿಂಗಳುಗಳ ಕಾಲಾವಕಾಶ ಕೋರಿದ್ದಾರೆ. ಹಾಗೆಯೇ ಈ ವಿಷಯವನ್ನು ವಿವಿಯ ಸಿಂಡಿಕೇಟ್ ಮುಂದಿಟ್ಟು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ.
ರಾಜ್ಯದ 26 ಪದವಿ ಕಾಲೇಜುಗಳು ಬೇರೆ ಬೇರೆ ವಿಶ್ವವಿದ್ಯಾಲಯಗಳ ಅಧೀನದಲ್ಲಿವೆ. ಎಲ್ಲವನ್ನೂ ಏಕಕಾಲದಲ್ಲಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಂಯೋಜನೆಗೆ ತರುವ ಕೆಲಸ ಆಗಬೇಕಿದ್ದು, ಈ ಸಂಬಂಧ ಪ್ರಾಂಶುಪಾಲರುಗಳಿಗೆ ಮಾಹಿತಿ ನೀಡಿದ್ದೇವೆ. ಅನಂತರ ಇನ್ನೊಂದು ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಕ್ಕಮಹಾದೇವಿ ವಿವಿ ಕುಲಪತಿ ಪ್ರೊ| ಸಬಿಹಾ ಭೂಮೀಗೌಡ ಮಾಹಿತಿ ನೀಡಿದ್ದಾರೆ.3 ತಿಂಗಳ ಕಾಲಾವಕಾಶ
You seem to have an Ad Blocker on.
To continue reading, please turn it off or whitelist Udayavani.