ರಾ.ಹೆದ್ದಾರಿ: ಬೇಕಾದ್ದಲ್ಲಿ ಬಸ್‌ ನಿಲ್ದಾಣ ಇಲ್ಲ!

Team Udayavani, Apr 21, 2018, 10:42 AM IST

21-April-4.jpg

ಮಹಾನಗರ: ಸಾಮಾನ್ಯವಾಗಿ ನಗರದ ಹಲವೆಡೆ ಸಾರ್ವಜನಿಕರು ಸರಿಯಾದ ಬಸ್‌ ತಂಗುದಾಣವಿಲ್ಲದೆ ಪರದಾಡುತ್ತಿರಬೇಕಾದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜನರಿಗೆ ಅನುಕೂಲವಾಗದ ಕಡೆ ಬಸ್‌ ನಿಲ್ದಾಣ ನಿರ್ಮಿಸಿ ದುಡ್ಡು ಪೋಲು ಮಾಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಪಾದುವಾ ಕಾಲೇಜಿನ ಮುಂಭಾಗದಲ್ಲಿ ಈಗಾಗಲೇ ಬಸ್‌ ನಿಲ್ದಾಣವಿದೆ. ಇಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಬಸ್‌ಗಾಗಿ ಕಾಯುತ್ತಾರೆ. ಇಲ್ಲಿಂದ 150 ಮೀಟರ್‌ ದೂರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ಬಸ್‌ ನಿಲ್ದಾಣವನ್ನು ನಿರ್ಮಿಸಿದೆ. ಇಲ್ಲಿ ಯಾವುದೇ ಬಸ್‌ ನಿಲ್ಲುವುದು ಇಲ್ಲ. ಜನರು ಕಾಯುವುದೂ ಇಲ್ಲ. ಬಸ್‌ ನಿಲ್ದಾಣಕ್ಕಾಗಿ ಸಾವಿರಾರು ರೂಪಾಯಿಗಳನ್ನು ಪ್ರಾಧಿಕಾರ ಖರ್ಚು ಮಾಡಿದೆ.

ಈ ಬಸ್‌ ನಿಲ್ದಾಣ ಭಿಕ್ಷುಕರಿಗೆ ಆಶ್ರಯ ನೀಡುವ ತಾಣವಾಗಿ ಬದಲಾಗಿದೆ. ಸಮೀಪದಲ್ಲೇ ಸುಸಜ್ಜಿತ ಬಸ್‌ ನಿಲ್ದಾಣ ಇದ್ದರೂ ಅದರ ಪಕ್ಕದಲ್ಲಿ ಹೊಸ ನಿಲ್ದಾಣ ಮಾಡುವ ಆವಶ್ಯಕತೆ ಏನು ಎಂಬುದು ಸಾರ್ವಜನಿಕರ ಪ್ರಶ್ನೆ.

ಬಸ್‌ ನಿಲ್ದಾಣ ಇಲ್ಲ
ರಾ.ಹೆ. ಯ ಜಪ್ಪಿನಮೊಗರು, ಎಕ್ಕೂರು, ಪಂಪ್‌ವೆಲ್‌ಗ‌ಳಲ್ಲಿ ದಿನಕ್ಕೆ ನೂರಾರು ಜನರು ಉರಿ ಬಿಸಿಲಲ್ಲೇ ಬಸ್‌ಗಾಗಿ ಕಾಯುವ ಸ್ಥಿತಿ ಎದುರಾಗಿದೆ. ಇಂತಹ ಸ್ಥಳಗಳಲ್ಲಿ ಬಸ್‌ ನಿಲ್ದಾಣಗಳನ್ನು ಮಾಡುವುದನ್ನು ಬಿಟ್ಟು ಅನಗತ್ಯ ಜಾಗಗಳಲ್ಲಿ ನಿಲ್ದಾಣಗಳನ್ನು ಮಾಡಿ ಪ್ರಾಧಿಕಾರ ಹಣ ಪೋಲು ಮಾಡುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಎಕ್ಕೂರಿನ ಒಂದು ಭಾಗದಲ್ಲಿ ಬಸ್‌ ನಿಲ್ದಾಣವಿದೆ, ಆದರೆ ನಗರದಿಂದ ತೊಕ್ಕೊಟು ಭಾಗಕ್ಕೆ ತೆರಳಬೇಕಾದ ಭಾಗದಲ್ಲಿ ಬಸ್‌ ನಿಲ್ದಾಣವಿಲ್ಲ. ಅತಿ ಹೆಚ್ಚು ಜನಸಂದಣಿ ಇರುವ ಜಪ್ಪಿನಮೊಗರಿನಲ್ಲಿ ಬಸ್‌ಗಳು ನಿಂತರೂ ಜನರು ನಿಲ್ಲಲ್ಲು ತಂಗುದಾಣವಿಲ್ಲ.

ಪಂಪ್‌ವೆಲ್‌ನಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣಕ್ಕೆ ಬೇಡಿಕೆ
ಪಂಪ್‌ವೆಲ್‌ನಲ್ಲಿ ಫ್ಲೈಓವರ್‌ ಕೆಲಸ ಆರಂಭವಾಗಿ ಹಲವು ವರ್ಷಗಳೇ ಕಳೆದಿವೆ. ಇದರಿಂದ ಆ ಭಾಗದಲ್ಲಿ ಟ್ರಾಫಿಕ್‌ ಸಮಸ್ಯೆ, ಬ್ಲಾಕ್‌ ಸರ್ವೇ ಸಾಮಾನ್ಯ. ಇದರೊಂದಿಗೆ ಬಿಸಿಲಿನಲ್ಲಿ ಬಸ್‌ಗಾಗಿ ಕಾಯುವ ಸ್ಥಿತಿ ಸಾರ್ವಜನಿಕರದ್ದು. ಫೈವರ್‌ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಬಸ್‌ ನಿಲ್ದಾಣ ನಿರ್ಮಾಣ ಅಸಾಧ್ಯ ಆದರೆ ತಾತ್ಕಾಲಿಕ ಬಸ್‌ ನಿಲ್ದಾಣಗಳನ್ನು ನಿರ್ಮಿಸುವ ಬಗ್ಗೆ ಹೆದ್ದಾರಿ ಪ್ರಾಧಿಕಾರ ಆಸಕ್ತಿ ತೋರುತ್ತಿಲ್ಲ. ಇನ್ನೂ ಎರಡು ತಿಂಗಳ ಒಳಗಾಗಿ ಮಳೆಗಾಲವೂ ಆರಂಭವಾಗಲಿದ್ದು, ಆಗ ಜನರು ಒದ್ದೆಯಾಗಿ ಬಸ್‌ಗೆ ಕಾಯಬೇಕಾಗುತ್ತದೆ. ಈ ಭಾಗದಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣಗಳನ್ನು ಮಾಡುವ ಬಗ್ಗೆ ಬೇಡಿಕೆಗಳು ಕೇಳಿಬರುತ್ತಿವೆ. 

ಇಲ್ಲಿ ಬಸ್‌ ನಿಲ್ದಾಣ ಅಗತ್ಯ
.ಜಪ್ಪಿನಮೊಗರು
.ಎಕ್ಕೂರು (ಒಂದು ಬದಿ)
.ಪಂಪ್‌ವೆಲ್ 

ಬಸ್‌ ನಿಲ್ದಾಣ ತೆರವಿಗೆ ಪಾಲಿಕೆಗೆ ಸೂಚನೆ
ಟ್ರಾಫಿಕ್‌ ಹಾಗೂ ಇನ್ನಿತರ ಸಮಸ್ಯೆಗಳಿರುವುದರಿಂದ ಪಾದುವಾ ಕಾಲೇಜು ಬಳಿ ಕಾರ್ಯಾಚರಿಸುತ್ತಿರುವ ಬಸ್‌
ನಿಲ್ದಾಣವನ್ನು ತೆರವು ಮಾಡಲು ಪಾಲಿಕೆಗೆ ಸೂಚಿಸಲಾಗಿದೆ. ಆ ಬಸ್‌ ನಿಲ್ದಾಣದ ಸಮೀಪ ಪ್ರಾಧಿಕಾರದ ವತಿಯಿಂದ ಮಾಡಲಾದ ಬಸ್‌ ನಿಲ್ದಾಣ ಶೀಘ್ರವೇ ಕಾರ್ಯಾಚರಿಸಲಿದೆ. ಇನ್ನೂ ಎಕ್ಕೂರು, ಜಪ್ಪಿನ ಮೊಗರು ಹೆದ್ದಾರಿ ಗುತ್ತಿಗೆಯನ್ನು ನವಯುಗ ಕನ್ಸ್‌ಟ್ರಕ್ಷನ್‌ಗೆ ನೀಡಲಾಗಿದ್ದು, ಆ ಬಗ್ಗೆ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ.
– ಸ್ಯಾಮ್‌ಸನ್‌
ವಿಜಯ್‌ ಕುಮಾರ್‌
ಹೆದ್ದಾರಿ ಪ್ರಾಧಿಕಾರದ
ಯೋಜನ ನಿರ್ದೇಶಕ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.