12 ವರ್ಷದೊಳಗಿನ ಹುಡುಗಿಯರ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ: ವಿಧೇಯಕ
Team Udayavani, Apr 21, 2018, 3:34 PM IST
ಹೊಸದಿಲ್ಲಿ : ಹನ್ನೆರಡು ವರ್ಷ ಪ್ರಾಯದ ಒಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
16 ವರ್ಷ ಪ್ರಾಯದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಈಗಿರುವ ಕನಿಷ್ಠ 10 ವರ್ಷ ಜೈಲು ಶಿಕ್ಷೆಯನ್ನು 20 ವರ್ಷಗಳಿಗೆ ಏರಿಸಲಾಗಿದ್ದು ಇದನ್ನು ಜೀವಾವಧಿಗೆ ವಿಸ್ತರಿಸಲಾಗುವುದು.
12 ವರ್ಷದೊಳಗಿನ ಹುಡುಗಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಕನಿಷ್ಠ 20 ವರ್ಷಗಳ ಜೈಲು ಶಿಕ್ಷೆಯಾಗಲಿದೆ.
ಅತ್ಯಾಚಾರ ಪ್ರಕರಣಗಳ ತ್ವರಿತ ನ್ಯಾಯ ತೀರ್ಮಾನಕ್ಕಾಗಿ ಸಚಿವ ಸಂಪುಟ ಹಲವು ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.
ಕೇಂದ್ರ ಸಚಿವ ಸಂಪುಟ ಅನುಮೋದಿಸಿರುವ ಈ ವಿಧೇಯಕವನ್ನು ಈಗಿನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗುವುದು.
ಈಗ ಜಾರಿಯಲ್ಲಿರುವ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯಿದೆಯಡಿ (ಪೋಕ್ಸೋ) ಮಕ್ಕಳ ಮೇಲೆ ಅತ್ಯಾಚಾರ ಅಪರಾಧ ಎಸಗುವವರಿಗೆ ಕನಿಷ್ಠ 7 ವರ್ಷ ಮತ್ತು ಗರಿಷ್ಠ ಜೀವಾವಧಿ ಜೈಲು ಶಿಕ್ಷೆ ಇದೆ.
ಕಥುವಾ ಮತ್ತು ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣಕ್ಕೆ ವ್ಯಕ್ತವಾದ ರಾಷ್ಟ್ರಾದ್ಯಂತದ ಆಕ್ರೋಶ ಮತ್ತು ಮಕ್ಕಳ ಅತ್ಯಾಚಾರಿಗಳಿಗೆ ಮರಣ ದಂಡನೆಯ ಶಿಕ್ಷೆ ನೀಡಬೇಕೆಂಬ ಆಗ್ರಹ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಅತ್ಯುಗ್ರ ವಿಧೇಯಕವನ್ನು ಪಾಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.