ಮಹಿಳಾ ದೌರ್ಜನ್ಯ ಪ್ರಕರಣ: ಕಳಂಕಿತರನ್ನು ತಿರಸ್ಕರಿಸೋಣ 


Team Udayavani, Apr 21, 2018, 7:32 PM IST

4.jpg

ಮಹಿಳಾ ದೌರ್ಜನ್ಯದ ಕೇಸು ಹೊತ್ತುಕೊಂಡಿರುವ 48 ಮಂದಿ ರಾಜಕಾರಣಿಗಳು ನಮ್ಮ ಶಾಸನಸಭೆಗಳಲ್ಲಿದ್ದಾರೆ ಎಂದಿದೆ ಅಸೋಸಿಯೇಶನ್‌ ಆಫ್ ಡೆಮಾಕ್ರಟಿಕ್‌ ರಿಫಾಮ್ಸ್‌ (ಎಡಿಆರ್‌) ಎಂಬ ಸಂಸ್ಥೆಯ ವರದಿ. ಕಠುವಾ ಮತ್ತು ಉನ್ನಾವ್‌ ಅತ್ಯಾಚಾರ ಪ್ರಕರಣಗಳು ತೀವ್ರ ಚರ್ಚೆಯಲ್ಲಿರುವ ಸಂದರ್ಭದಲ್ಲಿಯೇ ಎಡಿಆರ್‌ ಈ ವರದಿಯನ್ನು ಬಹಿರಂಗಪಡಿಸಿ ಜನಪ್ರತಿನಿಧಿಗಳ ಕೇಸುಗಳತ್ತ ಗಮನ ಸೆಳೆದಿದೆ. ಉನ್ನಾವ್‌ ಪ್ರಕರಣದಲ್ಲಿ ಓರ್ವ ಶಾಸಕರೇ ಆರೋಪಿ ಸ್ಥಾನದಲ್ಲಿದ್ದಾರೆ. ಕಠುವಾದಲ್ಲಿ ಬಾಲಕಿಯ ಮೇಲೆ ನಡೆದ ಬರ್ಬರ ಅತ್ಯಾಚಾರವನ್ನು ಇಬ್ಬರು ಶಾಸಕರು ಬಹಿರಂಗವಾಗಿ ಬೆಂಬಲಿಸಿ ವಿವಾದಕ್ಕೀಡಾಗಿದ್ದಾರೆ. 

45 ಶಾಸಕರು ಮತ್ತು 3 ಸಂಸದರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಕೇಸ್‌ ದಾಖಲಾಗಿದೆ. ಇದರಲ್ಲಿ ಅತ್ಯಾಚಾರ ಆರೋಪ ಹೊತ್ತುಕೊಂಡಿರುವವರೂ ಇದ್ದಾರೆ ಎನ್ನುವುದು ಕಳವಳಕಾರಿಯಾದ ವಿಚಾರ. ಎಡಿಆರ್‌ ಸಂಸದರು ಮತ್ತು ಶಾಸಕರು ನಾಮಪತ್ರ ಸಲ್ಲಿಸುವಾಗ ನೀಡಿದ ಅಫಿಡವಿತ್‌ಗಳನ್ನು ಪರಿಶೀಲಿಸಿ ಈ ಅಂಕಿಅಂಶಗಳನ್ನು ಕಲೆಹಾಕಿದೆ. ಆದರೆ ಇದು ನೀರಿನ ಮೇಲೆ ಕಾಣಿಸುವ ಮಂಜುಪರ್ವತದ ತುದಿ ಮಾತ್ರ. ಇನ್ನಷ್ಟು ಆಳವಾಗಿ ಅಧ್ಯಯನ ನಡೆಸಿದರೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಲೂಬಹುದು. ಎಷ್ಟೋ ಪ್ರಕರಣಗಳನ್ನು ಆಮಿಷವೊಡ್ಡಿಯೋ ಅಥವಾ ಬೆದರಿಸಿಯೋ ಮುಚ್ಚಿ ಹಾಕಲಾಗುತ್ತದೆ. ಕೆಲವೊಮ್ಮೆ ದೌರ್ಜನ್ಯಕ್ಕೊಳಗಾದವರೇ ಭವಿಷ್ಯದ ಪರಿಣಾಮಕ್ಕೆ ಅಂಜಿ ದೂರು ದಾಖಲಿಸದಿರುವ ಸಾಧ್ಯತೆಯೂ ಇರುತ್ತದೆ. 

ರಾಜಕೀಯದ ಅಪರಾಧೀಕರಣವನ್ನು ತಡೆಯಬೇಕೆಂಬ ಕೂಗು ಇಂದು ನಿನ್ನೆಯದಲ್ಲ. ಚುನಾವಣಾ ಆಯೋಗ ಮತ್ತು ನ್ಯಾಯಾಲಯ ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಗಳು ಕೈಗೊಂಡಿದ್ದರೂ ಅಪರಾಧಿ ಹಿನ್ನೆಲೆಯುಳ್ಳವರು ರಾಜಕೀಯಕ್ಕೆ ಪ್ರವೇಶಿಸುವುದು ಕಡಿಮೆಯಾಗುವ ಬದಲು ಹೆಚ್ಚಾಗುತ್ತಿದೆ. ಪ್ರಸ್ತುತ ಕರ್ನಾಟಕದ ಚುನಾವಣೆಯನ್ನೇ ತೆಗೆದುಕೊಂಡರೂ ಕ್ರಿಮಿನಲ್‌ ಕೇಸ್‌ ದಾಖಲಾಗಿರುವ ಹಾಗೂ ಮಹಿಳಾ ದೌರ್ಜನ್ಯ ಎಸಗಿದ ಹಲವು ಮಂದಿಗೆ ಟಿಕೆಟ್‌ ಹಂಚಿಕೆಯಾಗಿದೆ.

ರಾಜಕೀಯ ಪಕ್ಷಗಳಿಗೆ ಈಗ ಅಭ್ಯರ್ಥಿಯ ಸಚ್ಚಾರಿತ್ರ್ಯವಾಗಲಿ, ನೈತಿಕತೆಯಾಗಲಿ ಮುಖ್ಯವಲ್ಲ. ಗೆಲ್ಲುವ ಸಾಮರ್ಥ್ಯ ಮತ್ತು ಸಂಪನ್ಮೂಲವೇ ಚುನಾವಣೆಗೆ ಸ್ಪರ್ಧಿಸುವ ಮಾನದಂಡವಾಗಿರುವುದರಿಂದ ಕಳಂಕಿತರು, ಅಪರಾಧಿಗಳು ಯಾವುದೇ ಮುಜುಗರವಿಲ್ಲದೆ ಆಯ್ಕೆಯಾಗಿ ಶಾಸನಸಭೆಗಳಿಗೆ ಹೋಗುತ್ತಾರೆ. ಗಂಭೀರ ಸ್ವರೂಪದ ಆರೋಪಗಳನ್ನು ಹೊತ್ತಿರುವವರು ಚುನಾವಣೆಗೆ ಸ್ಪರ್ಧಿಸುವುದನ್ನು ನಿಷೇಧಿಸಬೇಕೆಂಬ ಬೇಡಿಕೆಯಿದ್ದರೂ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಐದು ವರ್ಷಗಳಲ್ಲಿ ಮಾನ್ಯತೆ ಹೊಂದಿರುವ ಪಕ್ಷಗಳೇ ಅತ್ಯಾಚಾರದ ಆರೋಪವಿದ್ದ 26 ಮಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಿವೆ. ಅತ್ಯಾಚಾರ ಆರೋಪ ಹೊತ್ತಿದ್ದ 14 ಮಂದಿ ಪಕ್ಷೇತರರಾಗಿ ಲೋಕಸಭೆಗೆ ಸ್ಪರ್ಧಿಸಿದ್ದಾರೆ ಎನ್ನುವುದು ಪ್ರಜಾತಂತ್ರದ ದುರಂತ. 

1765 ಸಂಸದರು ಮತ್ತು ಶಾಸಕರ ವಿರುದ್ಧ 3816 ಕ್ರಿಮಿನಲ್‌ ಕೇಸ್‌ಗಳಿವೆ ಎಂದು ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿತ್‌ನಲ್ಲಿ ತಿಳಿಸಿತ್ತು. ಸಂಸತ್ತನ್ನು ಪ್ರಜಾತಂತ್ರದ ದೇಗುಲ ಎನ್ನುತ್ತಾರೆ. ಆದರೆ ಈ ದೇಗುಲದಲ್ಲಿ ಇಷ್ಟೊಂದು ಸಂಖ್ಯೆಯ ಕಳಂಕಿತರಿರುವುದು ಆರೋಗ್ಯಕರ ಬೆಳವಣಿಗೆಯಂತೂ ಅಲ್ಲ. ಸಂಸತ್ತು ಈ ರೀತಿ ಅಪವಿತ್ರಗೊಳ್ಳಲು ಒಂದು ರೀತಿಯಲ್ಲಿ ನಾವೂ ಕಾರಣರಾಗುತ್ತೇವೆ. ಕ್ರಿಮಿನಲ್‌ ಕೇಸ್‌ ಇದೆ ಎಂದು ಗೊತ್ತಿದ್ದರೂ ಅಂತಹ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ಬೆಂಬಲಿಸುವ ನಮ್ಮ ಹೊಣೆಗೇಡಿತನವೂ ಇದಕ್ಕೆ ಸಮಾನ ಹೊಣೆ. 

ಜನಪ್ರತಿನಿಧಿಗಳ ವಿರುದ್ಧ ಇರುವ ಕ್ರಿಮಿನಲ್‌ ಕೇಸುಗಳು ಒಂದು ವರ್ಷದೊಳಗೆ ಇತ್ಯರ್ಥವಾಗಬೇಕೆಂದು ಸರ್ವೋಚ್ಚ ನ್ಯಾಯಾಲಯವೇ ಹೇಳಿದೆ. ಇದಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸರಕಾರಕ್ಕೆ ಸೂಚಿಸಿದೆ. ತ್ವರಿತ ವಿಚಾರಣೆಗಾಗಿ 12 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಸರಕಾರ ಭರವಸೆ ನೀಡಿದ್ದರೂ ಈ ನಿಟ್ಟಿನಲ್ಲಿ ಮುಂದಡಿಯಿಟ್ಟಿರುವುದು ಕಾಣಿಸದು. ವ್ಯವಸ್ಥೆಯಲ್ಲಿರುವ ಈ ಚಲ್ತಾ ಹೈ ಧೋರಣೆಯೇ ರಾಜಕೀಯ ಪಕ್ಷಗಳಿಗೆ ಶ್ರೀರಕ್ಷೆಯಾಗುತ್ತಿರುವುದು ಸತ್ಯ. ಹೀಗಾಗಿ ಕಳಂಕಿತರು, ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರು ಶಾಸನಸಭೆಗಳಿಗೆ ಹೋಗಬಾರದೆಂದಿದ್ದರೆ ಅಂಥವರಿಗೆ ಮತ ಹಾಕಬಾರದೆನ್ನುವ ಪ್ರಜ್ಞಾವಂತಿಕೆ ನಮ್ಮಲ್ಲಿ ಮೂಡಬೇಕು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.