ಭಾರತ, ಜರ್ಮನಿ ಸಂಬಂಧ ವೃದ್ಧಿ ಬಗ್ಗೆ ಚರ್ಚೆ: ಮೋದಿ
Team Udayavani, Apr 22, 2018, 6:00 AM IST
ಬರ್ಲಿನ್: ಶುಕ್ರವಾರ ಜರ್ಮನಿ ಪ್ರಧಾನಿ ಏಂಜೆಲಾ ಮರ್ಕೆಲ್ ಜತೆ ತಾವು ನಡೆಸಿದ ಮಾತುಕತೆ ವೇಳೆ, ಭಾರತ ಮತ್ತು ಜರ್ಮನಿ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಇತರ ಜಾಗತಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮ್ಮ ಹಾಗೂ ಮರ್ಕೆಲ್ ಭೇಟಿ ಅಮೋಘವಾಗಿತ್ತೆಂದು ಬಣ್ಣಿಸಿದ್ದಾರೆ.
ಯುನೈಟೆಡ್ ಕಿಂಗ್‌ಡಮ್ (ಯು.ಕೆ), ಸ್ವೀಡನ್ ಹಾಗೂ ಜರ್ಮನಿ ಪ್ರವಾಸಕ್ಕೆ ಮೋದಿ ತೆರಳಿದ್ದರು. ಈ ವೇಳೆ, ಯುಕೆಯಲ್ಲಿ ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಸಭೆಯಲ್ಲಿ (ಸಿಎಚ್‌ಒಜಿಎಂ) ಪಾಲ್ಗೊಂಡಿದ್ದರು. ಪ್ರವಾಸದ ಕೊನೆಯ ಹಂತದಲ್ಲಿ ಬರ್ಲಿನ್‌ಗೆ ಬಂದಿಳಿದಿದ್ದ ಅವರು, ಅಲ್ಲಿನ ಪ್ರಧಾನಿ ಏಂಜೆಲಾ ಮರ್ಕೆಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್, “”ಉಭಯ ನಾಯಕರ ಮಾತುಕತೆ ವೇಳೆ, ಭಾರತ ಹಾಗೂ ಜರ್ಮನಿ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಗೊಳಿಸುವ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.