ತ್ಯಾಜ್ಯ ವಿಲೇವಾರಿಗೆ ತೆಂಕ ಮಿಜಾರು ಗ್ರಾ.ಪಂ.ನ ವಿಶಿಷ್ಟ ಕ್ರಮ
Team Udayavani, Apr 22, 2018, 11:36 AM IST
ತೆಂಕ ಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ವಿಶಿಷ್ಟ ಕ್ರಮ ಅನುಸರಿಸಲಾಗುತ್ತಿದೆ. ಗ್ರಾ.ಪಂ. ಮಟ್ಟ ದಲ್ಲಿ ಮೊದಲ ಬಾರಿಗೆ ಮನೆಮನೆಯಿಂದ ತ್ಯಾಜ್ಯ ಸಂಗ್ರಹ ಮಾಡುವ ಕಾರ್ಯವನ್ನು ಮೂಡಬಿದಿರೆ ಹೋಬಳಿ ವ್ಯಾಪ್ತಿಯಲ್ಲಿರುವ ತೆಂಕ ಮಿಜಾರು ಗ್ರಾ.ಪಂ. ನಡೆಸಿದ್ದಲ್ಲದೆ ಪೂಮವರ ಪದವಿನಲ್ಲಿ ತ್ಯಾಜ್ಯ ಘಟಕ ನಿರ್ಮಾಣ ಮಾಡಿದ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಲ್ಲಿನ ಮೈಟ್ ಎಂಜಿನಿಯರಿಂಗ್ ಕಾಲೇಜಿನಿಂದ ಬೊಳ್ಳೆಚ್ಚಾರು ಚೆಕ್‌ಪೋಸ್ಟ್ ಗಡಿತನಕ ಸುಮಾರು 541 ಮನೆಗಳು, 85 ಅಂಗಡಿಗಳು ಮತ್ತು 10ಕ್ಕಿಂತ ಅಧಿಕ ಹೊಟೇಲ್‌ಗಳ ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ಪ್ರತಿ ದಿನ ಪಂಚಾಯತ್ ಸಿಬಂದಿ ಸಂಗ್ರಹಿಸುತ್ತಾರೆ.
ಕಳೆದ ಮಾ. 26ರಿಂದ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಇದಕ್ಕಾಗಿ ಪ್ರತಿ ಮನೆಯಿಂದ 60, ಅಂಗಡಿಯಿಂದ 80, ಹೊಟೇಲ್‌ನಿಂದ 100 ರೂ. ಅನ್ನು ತಿಂಗಳಿಗೆ ವಸೂಲಿ ಮಾಡಲಾಗುತ್ತಿದೆ. ಗ್ರಾ.ಪಂ. ವತಿಯಿಂದ ಸಂಗ್ರಹಿಸಿದ ತ್ಯಾಜ್ಯವನ್ನು ಸಂಸ್ಕರಣೆ ಘಟಕಕ್ಕೆ ಕೊಂಡೊಯ್ದು ಹಸಿ ತ್ಯಾಜ್ಯವನ್ನು ಗೊಬ್ಬರವನ್ನಾಗಿ ಪರಿವರ್ತಿಸಲಾಗುತ್ತದೆ. ಒಣ ತ್ಯಾಜ್ಯದಲ್ಲಿ ಪ್ಪಾಸ್ಟಿಕ್, ಶೂ, ಬೆಲ್ಟ್, ಬಾಟಲಿ, ಚಪ್ಪಲ್, ರಟ್ಟುಗಳು ಸೇರಿವೆ. ಬಾಟಲಿ, ರಟ್ಟುಗಳನ್ನು ಗುಜಿರಿ ಅಂಗಡಿಗೆ ನೀಡಲಾಗುತ್ತದೆ. ತ್ಯಾಜ್ಯ ಘಟಕದ ಬೇರೆ ಕೋಣೆಯಲ್ಲಿ ಪ್ಲಾಸ್ಟಿಕ್ ತೊಟ್ಟೆಯನ್ನು ಶುಚಿಗೊಳಿಸಿ ಸಂಗ್ರಹಿಸಿ ಇಡಲಾಗಿದೆ. ಒಂದು ತಿಂಗಳೊಳಗೆ 3 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿದೆ. ಇದನ್ನು ಜಿ.ಪಂ.ಗೆ ನೀಡಲಾಗುವುದು ಎಂದು ಪಿಡಿಒ ಸಾಯೀಶ್ ಚೌಟ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.