ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು


Team Udayavani, Apr 22, 2018, 12:21 PM IST

chunavana.jpg

ಬೆಂಗಳೂರು: ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ. ಕೆ.ಜಿ.ಜಗದೀಶ್‌ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರೇಖಾ ಅವರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡು ಕಾಂಗ್ರೆಸ್‌ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಕಾನೂನು ಘಟಕದಿಂದ ಶನಿವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ವಿಧಾನಪರಿಷತ್‌ ಸದಸ್ಯ ರಮೇಶ್‌ ಬಾಬು ಹಾಗೂ ಜೆಡಿಎಸ್‌ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಇದೇ ವೇಳೆ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ಸಲ್ಲಿಸಲಾಯಿತು. ದೂರು ಸ್ವೀಕರಿಸಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುವುದಾಗಿ ಹೇಳಿದರು. 

ಇದಕ್ಕೂ ಮೊದಲು ಮಾತನಾಡಿದ ಎ.ಪಿ. ರಂಗನಾಥ್‌, ಪಾರದರ್ಶಕ ಮತ್ತು ಮುಕ್ತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವುದು ಆಯೋಗದ ಜವಾಬ್ದಾರಿ. ಆದರೆ, ಕೆಲ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಜೆಡಿಎಸ್‌ಗೆ ಕಿರುಕುಳ ನೀಡುತ್ತಿದ್ದಾರೆ.

ಜೆಡಿಎಸ್‌ ಕಾರ್ಯಕ್ರಗಳು ಮತ್ತು ಪ್ರಚಾರ ಸಭೆಗಳಿಗೆ ಅಡ್ಡಿಪಡಿಸಲಾಗುತ್ತಿದೆ. ಅಷ್ಟೇ ಅಲ್ಲ, ಖುದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯರ ಹೆಲಿಕಾಪ್ಟರ್‌ ಬಳಕೆಗೆ ಅನುಮತಿ ನೀಡಲು ಇನ್ನಿಲ್ಲದ ತಗಾದೆ ತೆಗೆಯಲಾಗುತ್ತಿದೆ.

ಆದರೆ, ಕಾಂಗ್ರೆಸ್‌ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ವಿಧಾನ ಪರಿಷತ್‌ ಸದಸ್ಯ ರಮೇಶ್‌ ಬಾಬು ಮಾತನಾಡಿ, ಚುನಾವಣಾ ವಿಷಯಗಳಲ್ಲಿ ಜೆಡಿಎಸ್‌ ಪಕ್ಷ ಕಾನೂನು ಪ್ರಕಾರವೇ ನಡೆದುಕೊಳ್ಳುತ್ತಿದೆ.

ಆದರೂ ಅಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ 15 ಮಂದಿ ಹೋದರೂ ಯಾರೊಬ್ಬರೂ ಕೇಳುವುದಿಲ್ಲ. ಇದು ಕಾನೂನಿನ ಉಲ್ಲಂಘನೆ. ಇದೇ ಧೋರಣೆ ಮುಂದುವರಿದರೆ ರಾಜ್ಯದ ಎಲ್ಲ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ ಎದರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.