ಕೆ.ಆರ್.ನಗರ: ರವಿಶಂಕರ್ ನಾಮಪತ್ರ
Team Udayavani, Apr 22, 2018, 12:50 PM IST
ಕೆ.ಆರ್.ನಗರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಶುಕ್ರವಾರ ಮಧ್ಯಾಹ್ನ ಅಪಾರ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ರೇಷ್ಮಾ ಹಾನಗಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಪಟ್ಟಣದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ತೆರಳಿ, ಪಕ್ಷದ ಮುಖಂಡರಾದ ಅಚ್ಯುತಾನಂದ, ಸಿ.ಪಿ.ರಮೇಶ್, ಎಂ.ಟಿ.ಕುಮಾರ್, ಪತ್ನಿ ಸುನೀತಾ ಅವರೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.
ಬಳಿಕ ಮಾತನಾಡಿದ ರವಿಶಂಕರ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನತೆ ಪರಾಮರ್ಶಿಸಿ ಜನತೆ ಬೆಂಬಲ ನೀಡುವ ನಂಬಿಕೆ ಇದೆ. 5 ವರ್ಷಗಳ ಅವಧಿಯಲ್ಲಿ ಹಗರಣ ರಹಿತ ಮತ್ತು ಭ್ರಷ್ಟಾಚಾರವಿಲ್ಲದ, ಎಲ್ಲಾ ವರ್ಗದ ಜನತೆಗೂ ಅನುಕೂಲವಾಗುವ ಜನಪರ ಆಡಳಿತ ನೀಡಿದೆ. ಮತ್ತೂಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನನ್ನನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯೆ ನಾಗರತ್ನ, ಮಾಜಿ ಸದಸ್ಯ ರಾಜಯ್ಯ, ರಾಮೇಗೌಡ, ಮಾರ್ಚಹಳ್ಳಿ ಶಿವರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹದೇವ್, ಉದಯಶಂಕರ್, ತಾಪಂ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಸದಸ್ಯರಾದ ಜಯರಾಮೇಗೌಡ, ಚಂದ್ರಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಇತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.