ಮಂಗಳೂರು ದಕ್ಷಿಣ: ಜಿಲ್ಲಾ ಕೇಂದ್ರದ ಕ್ಷೇತ್ರ

Team Udayavani, Apr 22, 2018, 1:11 PM IST

22-April-11.jpg

ಮಂಗಳೂರು ದಕ್ಷಿಣ ಜಿಲ್ಲಾ ಕೇಂದ್ರವನ್ನು ಒಳಗೊಂಡಿರುವ ವಿಧಾನಸಭಾ ಕ್ಷೇತ್ರ. ವಾಣಿಜ್ಯ, ವ್ಯವಹಾರಗಳ ಕೇಂದ್ರವೂ ಆಗಿದೆ. ಸರಕಾರದ ಬಹುತೇಕ ಜಿಲ್ಲಾ ಕಚೇರಿಗಳು ಇಲ್ಲಿವೆ. ಆದುದರಿಂದ ಜಿಲ್ಲೆಯ ಇತರ ಕಡೆಗೆ ಹೋಲಿಸಿದರೆ ಒಂದಷ್ಟು ಹೆಚ್ಚು ಮೂಲಸೌಲಭ್ಯಗಳ ಆವಶ್ಯಕತೆ ಇರುತ್ತದೆ. ಬಹಳಷ್ಟು ನಿರೀಕ್ಷೆಗಳಿರುತ್ತವೆ. ಕಳೆದ ಕೆಲವು ಚುನಾವಣೆಗಳಲ್ಲಿ ನೀಡಿದ್ದ ಅನೇಕ ಭರವಸೆಗಳು ಇನ್ನೂ ಭರವಸೆಗಳಾಗಿಯೇ ಉಳಿದಿವೆ.

ಸುಸಜ್ಜಿತ ಕೇಂದ್ರ ಬಸ್‌ನಿಲ್ದಾಣ
1 ಮಂಗಳೂರಿನಲ್ಲಿ 2 ದಶಕಗಳಿಂದ ಕೇಂದ್ರ ಬಸ್‌ ನಿಲ್ದಾಣ ತಾತ್ಕಾಲಿಕ ನೆಲೆಯಲ್ಲೇ ಇದೆ. ಸುಸಜ್ಜಿತ ಕೇಂದ್ರ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಪಂಪ್‌ವೆಲ್‌ನಲ್ಲಿ ಜಾಗ ಸ್ವಾಧೀನಪಡಿಸಿದ್ದರೂ ಕೇವಲ ಪ್ರಸ್ತಾವನೆಯಲ್ಲೇ ಉಳಿದುಕೊಂಡಿದೆ.

ಸುಗಮ ಸಂಚಾರಕ್ಕೆ ಮಾಸ್ಟರ್‌ ಪ್ಲಾನ್‌
2 ಸಂಚಾರ ದಟ್ಟಣೆ ಮಂಗಳೂರು ನಗರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲೊಂದು. ಇದಕ್ಕೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾಸ್ಟರ್‌ ಪ್ಲಾನ್‌ ರೂಪಿಸಿ ಕಾರ್ಯಾನುಷ್ಠಾನಗೊಳಿಸಬೇಕು.

ಬಹುಅಂತಸ್ತು ಪಾರ್ಕಿಂಗ್‌ ವ್ಯವಸ್ಥೆ
3 ಪಾರ್ಕಿಂಗ್‌ ಸಮಸ್ಯೆ ಮಂಗಳೂರು ನಗರದಲ್ಲಿ ಸಂಚಾರ ಅಸ್ತವ್ಯಸ್ತಕ್ಕೆ ಕಾರಣವಾಗುತ್ತಿದೆ. ಬಹುಅಂತಸ್ತು ಪಾರ್ಕಿಂಗ್‌ ಯೋಜನೆ ರೂಪಿಸಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಮುಖ ಪ್ರದೇಶಗಳಲ್ಲಿ ಪಾರ್ಕಿಂಗ್‌ ತಾಣ ಗುರುತಿಸುವುದು ಅಗತ್ಯ.

ನಿರಂತರ ನೀರು
4 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 24×7 ನೀರು ವಿತರಣೆ ಮಾಡುವ ಪ್ರಸ್ತಾವ ಪಾಲಿಕೆಯಲ್ಲಿದ್ದರೂ ಜಾರಿಯಾಗಿಲ್ಲ. ನಿರಂತರ ನೀರು ಪೂರೈಕೆ ಯೋಜನೆ ತ್ವರಿತವಾಗಿ ಅನುಷ್ಠಾನವಾಗಬೇಕು.

ಸುಸಜ್ಜಿತ ರಂಗಮಂದಿರ
5 ಮಂಗಳೂರು ನಗರದ ಹಲವು ವರ್ಷಗಳ ಕನಸು ಆಗಿರುವ ಜಿಲ್ಲಾ ಸುಸಜ್ಜಿತ ರಂಗಮಂದಿರ ಯೋಜನೆ ಅನುಷ್ಠಾನ ಇನ್ನೂ ಆಗಿಲ್ಲ. ಕರಾವಳಿಯ ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡಲು ರಂಗಮಂದಿರ ನಿರ್ಮಾಣದಿಂದ ಸಾಧ್ಯ.

ಐಟಿ ಹಬ್‌ ಆಗಿ ಅಭಿವೃದ್ಧಿ
6 ಮಂಗಳೂರು ನಗರವನ್ನು ಕರ್ನಾಟಕದ ಎರಡನೇ ಐಟಿ ಹಬ್‌ ಆಗಿ ಅಭಿವೃದ್ಧಿ ಪಡಿಸುವ ಭರವಸೆ ಕಳೆದ 10 ವರ್ಷಗಳಿಂದ ಕೇಳಿಬರುತ್ತಿದೆ. ಆದರೆ ಆ ನಿಟ್ಟಿನಲ್ಲಿ ಹೇಳಿಕೊಳ್ಳುವಂತಹ ಪ್ರಗತಿ ಆಗಿರುವುದು ಕಂಡುಬರುತ್ತಿಲ್ಲ

ಸುಗಮ ಸಂಚಾರ
7 ಮಂಗಳೂರು ನಗರದಲ್ಲಿ ಸುಗಮ ಸಂಚಾರವೇ ದುಸ್ತರ ಎನ್ನುವ ಪರಿಸ್ಥಿತಿ ಇದೆ. ವಾಹನಗಳು ಮತ್ತು ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಪ್ರಮುಖ ಪ್ರದೇಶಗಳಲ್ಲಿ ಫ್ಲೈ ಓವರ್‌, ಅಂಡರ್‌ಪಾಸ್‌ ನಿರ್ಮಾಣ ಅಗತ್ಯವಿದೆ.

ಜಿಲ್ಲಾಸ್ಪತ್ರೆ ಉನ್ನತೀಕರಣ
8 ಲೇಡಿಗೋಶನ್‌ ಹಾಗೂ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಗಳಿಗೆ 8 ಜಿಲ್ಲೆಗಳಿಂದ ರೋಗಿಗಳು ಬರುತ್ತಾರೆ. ಆದರೆ ಅಲ್ಲಿ ಹಾಸಿಗೆಗಳ ಕೊರತೆಯಿಂದಾಗಿ ರೋಗಿಗಳಿಗೆ ಸಮರ್ಪಕ ಸೇವೆ ಸಾಧ್ಯವಾಗುತ್ತಿಲ್ಲ. ಅಲ್ಲಿ ಸೌಲಭ್ಯಗಳ ಹೆಚ್ಚಳವಾಗಬೇಕು.

ಸುಸಜ್ಜಿತ ಮಾರುಕಟ್ಟೆ
9 ಹಂಪನಕಟ್ಟೆ ಸಮೀಪದ ಕೇಂದ್ರ ಮಾರುಕಟ್ಟೆಯ ಅಭಿವೃದ್ಧಿ ಯೋಜನೆ ಕಾರ್ಯಗತವಾಗಬೇಕು. ನಗರದೊಳಗಿನ ಉಪಮಾರುಕಟ್ಟೆಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯವೂ ತ್ವರಿತವಾಗಿ ನಡೆಯಬೇಕು.

ಜಲ ಪ್ರವಾಸೋದ್ಯಮ
10 ಮಂಗಳೂರಿನಲ್ಲಿ ಜಲಪ್ರವಾಸೋದ್ಯಕ್ಕೆ ವಿಪುಲ ಅವಕಾಶಗಳಿವೆ. ಆದರೆ ಸರಿಯಾದ ಯೋಜನೆಯಿಲ್ಲ. ಅವಕಾಶಗಳ ಸದ್ಬಳಕೆಯಾಗುವ ನಿಟ್ಟಿನಲ್ಲಿ ಸರಿಯಾದ ನೀಲನಕಾಶೆ ಸಿದ್ಧಪಡಿಸಿ ಕಾರ್ಯಾನುಷ್ಠಾನಗೊಳಿಸಬೇಕು.

ಸಣ್ಣ ಕ್ರೀಡಾಂಗಣಗಳ ಅಭಿವೃದ್ಧಿ
11 ಮಂಗಳೂರು ನಗರ ಆಟದ ಮೈದಾನಗಳ ಕೊರತೆ ಎದುರಿಸುತ್ತಿದೆ. ನಗರವಾಸಿಗಳ ಕ್ರೀಡಾ ಸ್ಫೂರ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಆಯ್ದ ತಾಣಗಳಲ್ಲಿ ಸಣ್ಣ ಕ್ರೀಡಾಂಗಣಗಳು ನಿರ್ಮಾಣವಾಗಲಿ.

ಬಂಡವಾಳ ಆಕರ್ಷಣೆ
12 ಮಂಗಳೂರಿನಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. ಆದರೆ ಹೂಡಿಕೆದಾರರನ್ನು ಆಕರ್ಷಿಸುವ ಯತ್ನಗಳು ಸಾಲುತ್ತಿಲ್ಲ. ಹೂಡಿಕೆದಾರರನ್ನು ಸೆಳೆದು ಅವರು ಉದ್ದಿಮೆಗಳನ್ನು ಸ್ಥಾಪಿಸಲು ಮನ ಮಾಡುವಂತಹ ಯೋಜನೆ ರೂಪಿಸಬೇಕು

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.