ಶಾಂತಿಯುತ ಮತದಾನಕ್ಕೆ ಸೈನಿಕರು ಪೊಲೀಸರಿಂದ ಪಥ ಸಂಚಲನ
Team Udayavani, Apr 22, 2018, 3:29 PM IST
ವಾಡಿ: ಜಿಲ್ಲೆಯಲ್ಲಿಯೇ ಅತಿ ಸೂಕ್ಷ್ಮ ವಲಯ ಎಂದು ಗುರುತಿಸಲಾಗಿರುವ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸೈನಿಕರು ಶನಿವಾರ ಸಂಜೆ ಪಟ್ಟಣದಲ್ಲಿ ಪಥಸಂಚಲನ ನಡೆಸಿದರು.
ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥಸಂಚಲನದಲ್ಲಿ ನೂರಾರು ಜನ ಎಸ್‌ಎಸ್‌ಬಿ ಸೈನಿಕರು ಹಾಗೂ ಸ್ಥಳೀಯ ವಿವಿಧ ಠಾಣೆಗಳ ಪೊಲೀಸ್ ಸಿಬ್ಬಂದಿ, ಪಟ್ಟಣದ ಬಸವೇಶ್ವರ ವೃತ್ತದ ಮಾರ್ಗವಾಗಿ, ಅಂಬೇಡ್ಕರ್ ವೃತ್ತ, ರೈಲು ನಿಲ್ದಾಣ, ಮೌಲಾನಾ ಅಬ್ದುಲಕಲಾಂ ಆಜಾದ್ ವೃತ್ತ, ಇಂದಿರಾ ಕಾಲೋನಿ, ಶಿವಾಜಿ ಚೌಕ್, ಕಾಮ್ರೇಡ್ ಶ್ರೀನಿವಾಸಗುಡಿ ವೃತ್ತದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಚುನಾವಣಾ ಮತದಾನದ ಭದ್ರತೆಯ ಜಾಗೃತಿ ಮೂಡಿಸಿದರು.
ಚುನಾವಣೆ ಸಂದರ್ಭದಲ್ಲಿ ಸದಾ ಗದ್ದಲ, ಗಲಾಟೆ ಹಾಗೂ ಘರ್ಷಣೆಗಳ ಮೂಲಕ ಜಿಲ್ಲೆಯ ಗಮನ ಸೆಳೆಯುತ್ತಿರುವ ಚಿತ್ತಾಪುರ ಮೀಸಲು ಮತಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣ ಅತ್ಯಂತ ಸೂಕ್ಷ್ಮ ವಲಯ ಎಂದು ಈಗಾಗಲೇ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಪಟ್ಟಣದಲ್ಲಿನ ಒಟ್ಟು 36 ಮತದಾನ ಕೇಂದ್ರಗಳಿಗೂ ಬಿಗಿ ಬಂದೋಬಸ್ತ್ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳ ನಿಗರಾಣಿ ಇಡಲಾಗಿದೆ. ಮತಗಟ್ಟೆಗಳ ಸುತ್ತಲೂ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬೀಡು ಬಿಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಡಿವೈಎಸ್‌ಪಿ ಕೆ.ಬಸವರಾಜ, ಸಿಪಿಐ ಮಹಾಂತೇಶ ಪಾಟೀಲ, ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ ಎನ್.ಭಾವಗಿ, ಚಿತ್ತಾಪುರ ಪಿಎಸ್‌ಐ ನಟರಾಜ ಲಾಡೆ, ಶಹಾಬಾದ ಪಿಎಸ್‌ಐ ಆನಂದರಾವ, ಮಾಡಬೂಳ ಠಾಣೆಯ ಹುಸೇನ ಬಾಷಾ ಪಥಸಂಚಲನದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.