ಸಿದ್ದರಾಮಯ್ಯ ಸೋಲಿಸುವುದೇ ನನ್ನ ಕರ್ತವ್ಯ


Team Udayavani, Apr 23, 2018, 3:47 PM IST

m2-sidd.jpg

ಮೈಸೂರು: ತಮ್ಮ ರಾಜಕೀಯ ಲಾಭಕ್ಕಾಗಿ ನನ್ನನ್ನು ಬಳಿಸಿಕೊಂಡು, ಸಾರ್ವಜನಿಕವಾಗಿ ಅಪಮಾನ ಮಾಡಿರುವ ಸಿದ್ದರಾಮಯ್ಯ ಅವರಿಗೆ ತಕ್ಕಪಾಠ ಕಲಿಸುವುದು ಅನಿವಾರ್ಯವಿದೆ. ಹೀಗಾಗಿ ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ನಿವೃತ್ತ ಪೊಲೀಸ್‌ ಅಧಿಕಾರಿ ಎಲ್‌.ರೇವಣ್ಣ ಸಿದ್ದಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2004ರಲ್ಲಿ ತಾವು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಿಂದ ಗೆದ್ದು ಆಯ್ಕೆಯಾದರು. ಆದರೆ ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ ಸೇರ್ಪಡೆಯಾದರು. ಈ ವೇಳೆ ಪಕ್ಷದ ಹಿರಿಯ ನಾಯಕರ ನಿರ್ಧಾರಕ್ಕೆ ಮನ್ನಣೆ ನೀಡಿ, ಪಕ್ಷದ ಶಿಸ್ತಿನ ಸಿಪಾಯಿಯಂತೆ ಸಿದ್ದರಾಮಯ್ಯ ಪರವಾಗಿ ಕೆಲಸ ಮಾಡಿದೆ.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರ ರಚನೆಯಾಗಿ ನಿಮಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆಂದು ಸಿದ್ದರಾಮಯ್ಯ ಹೇಳಿದ್ದರು. ಅದರಂತೆ 2008ರಲ್ಲಿ ವರುಣಾದಲ್ಲಿ ನಿಲ್ಲುವ ಆಸೆ ಹೊತ್ತಾಗ ಅವರೇ ವರುಣಾಕ್ಕೆ ಬಂದು ನಿಂತರು. ಆ ಮೂಲಕ ಸಿದ್ದರಾಮಯ್ಯ ತಾವು ಕೊಟ್ಟ ಮಾತನ್ನು ಮೀರಿ, ವಚನ ಭ್ರಷ್ಟರಾದರು ಎಂದರು.

ನಂತರ 2008ರಲ್ಲಿ ತಾವು ಅವರ ವಿರುದ್ಧ ಸ್ಪರ್ಧಿಸಿ 16 ಸಾವಿರ ಮತಗಳಿಂದ ಸೋತೆ. ಮತ್ತೆ 2013ರ ಚುನಾವಣೆ ವೇಳೆ ತಮ್ಮ ಮನೆಗೆ ಆಗಮಿಸಿದ ಅವರು ಈ ಚುನಾವಣೆಯಲ್ಲಿ ತಮ್ಮೊಂದಿಗೆ ಕೈಜೋಡಿಸಿ, ಮುಂದೆ ನಮ್ಮ ಸರ್ಕಾರ ಬಂದರೆ ನಿಮಗೆ ಮತ್ತು ನಿಮ್ಮ ಸಮಾಜಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸುತ್ತೇನೆಂದು ಭರವಸೆ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಹಿಂದಿನದನ್ನು ಮರೆತು ಅವರ ಪರವಾಗಿ ಕೆಲಸ ಮಾಡಿದ್ದರಿಂದ 38 ಸಾವಿರ ಮತಗಳಿಂದ ಜಯಗಳಿಸಿದ್ದರು ಎಂದರು.

ಸಾಕುಪ್ರಾಣಿಯಂತೆ ಮನವೊಲಿಕೆ: ತಮ್ಮ ವೈಯಕ್ತಿಕ ಲಾಭಕ್ಕಾಗಿ ನನ್ನನ್ನು ಬಳಸಿಕೊಂಡ ಸಿದ್ದರಾಮಯ್ಯ, ಕೃತಜ್ಞತೆ ಭಾವವಿಲ್ಲದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವ ಕೆಲಸ ಮಾಡಿದರು. ಇದೇ ರೀತಿ ಮೊನ್ನೆ ಸಹ ಮನೆಗೆ ಬಂದ ಅವರು, ಸಾಕುಪ್ರಾಣಿಗಳ ಮನವೊಲಿಸುವ ರೀತಿಯಲ್ಲಿ ಮಾತಾಡಿದರು. ಆಗಲೂ ಸಹ ಸುಮ್ಮನಾಗಿದ್ದೆ,

ಸುಸಂಸ್ಕೃತ ರಾಜಕಾರಣ ಮಾಡುವ ಯಾವುದೇ ಸಿಟ್ಟು ಮಾಡಿಕೊಳ್ಳುವುದು ಬೇಡವೆಂದು ಗೌರವದಿಂದ ನಡೆದುಕೊಂಡಿದ್ದೆ. ಆದರೆ ನಾಮಪತ್ರ ಸಲ್ಲಿಸುವಾಗ ಸೌಜನ್ಯಕ್ಕೂ ಆಹ್ವಾನಿಸಲಿಲ್ಲ, ನಾನಿದ್ದ ಹೋಟೆಲ್‌ನಲ್ಲಿ ಸಭೆ ನಡೆದರೂ ನನ್ನನ್ನು ಕರೆಯಲಿಲ್ಲ. ಇಂತಹ ಯಾವುದೇ ಸಂಭ್ರಮದಲ್ಲಿ ತಮಗೆ ಜಾಗವಿಲ್ಲ ಎಂದ ಮೇಲೆ ಏಕೆ ಇರಬೇಕೆಂದು ನಿರ್ಧರಿಸಿ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.

ತಕ್ಕಪಾಠ ಕಲಿಸಬೇಕು: ತಮಗೆ ಸಾರ್ವಜನಿಕವಾಗಿ ಅಪಮಾನ ಮಾಡಿದ್ದಲ್ಲದೆ, ವೀರಶೈವ ಸಮಾಜವನ್ನು ನಿರ್ನಾಮ ಮಾಡಲು ಹೊರಟಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವುದು ಅನಿವಾರ್ಯವಾಗಿದೆ. ತಮ್ಮ ಲಾಭಕ್ಕಾಗಿ ಒಂದು ಸಮುದಾಯವನ್ನು ರಾಜಕೀಯವಾಗಿ ತುಳಿಯುವ ಇಂತಹ ವ್ಯಕ್ತಿಗೆ ಹೊಡೆತ ಬಿದ್ದಾಗ ಗೊತ್ತಾಗಲಿದೆ. ಒಂದು ಸಮುದಾಯಕ್ಕೆ ನಾಲ್ಕು ಟಿಕೆಟ್‌ ಕೊಡುವ ಇವರು,

ಮತ್ತೂಂದು ಸಮಾಜಕ್ಕೆ ಒಂದಾದರೂ ಕೊಡಲಿಲ್ಲ. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎನ್ನುವ ಇವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ. ಇವರ ನೈಜತೆಯನ್ನು ಸಮಾಜದ ಮುಂದಿಡಲು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ. ಬೇರೆ ಪಕ್ಷದ ಆಹ್ವಾನವಿದ್ದರೂ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ, ಇವರನ್ನು ಎದುರಿಸುವ ಪ್ರಬಲ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಪೆಟ್ಟು ಬಿದ್ದಾಗ್ಲೆ ಗೊತ್ತಾಗೋದು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ 257 ಮತಗಳ ಅಂತರದಿಂದ ಗೆದ್ದಾಗ ನನ್ನ ಕೊಡುಗೆ ಇತ್ತು. ನಂತರ ಈ ಜಾತಿರಾಜಕಾರಣದ ಸಹವಾಸಬೇಡ ಎಂದು ವರುಣಾಕ್ಕೆ ಹೋದರು. ಈಗ ಮಗನಿಗೆ ಅನುಕೂಲ ಮಾಡಿಕೊಡಲು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಂದು ಸ್ಪರ್ಧೆ ಮಾಡಿದ್ದಾರೆ. ಈ ರೀತಿಯ ಕುತಂತ್ರ, ಸಮಾಜ ಒಡೆಯುವ ಇಂತಹ ಮನಸ್ಸಿನ ವ್ಯಕ್ತಿಗಳಿಗೆ, ಹೊಡೆತ ಬಿದ್ದಾಗಲೇ ಪೆಟ್ಟು ಗೊತ್ತಾಗಲಿದೆ. ಇದಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಾಠ ಕಲಿಸಬೇಕಿದೆ ಎಂದರು.

ಜಿ.ಟಿ.ದೇವೇಗೌಡರಿಗೆ ಬೆಂಬಲ: ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸುವ ಸಲುವಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ವರುಣಾ ಹಾಗೂ ಚಾಮುಂಡೇಶ್ವರಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದ್ದು, ಅದರಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರಿಗೆ ಬೆಂಬಲ ನೀಡುತ್ತೇನೆ. ಆದರೆ ಇದಕ್ಕಾಗಿ ಯಾವುದೇ ಪಕ್ಷದ ವೇದಿಕೆಯನ್ನು ಬಳಸಿಕೊಳ್ಳದೆ, ಪ್ರತ್ಯೇಕ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರಿಂದ ವೀರಶೈವ ಸಮಾಜಕ್ಕೆ ಏನು ಅನ್ಯಾಯವಾಗಿದೆ,

ನನ್ನನ್ನು ಯಾವ ರೀತಿ ತುಳಿದರು ಎಂಬುದನ್ನು ಜನರ ಮುಂದಿಡುತ್ತೇನೆ. ಇನ್ನು ವರುಣಾ ಕ್ಷೇತ್ರದಲ್ಲಿ ಇನ್ನೂ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಾಕಿ ಇದೆ, ಹೀಗಾಗಿ ಸೂಕ್ತ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಪರವಾಗಿ ನಿಲ್ಲುವ ಕುರಿತ ಪ್ರಶ್ನೆಯೊಂದಕ್ಕೆ ಪರೋಕ್ಷವಾಗಿ ಉತ್ತರಿಸಿದರು.

ವರುಣ ನಿಮ್ಮ ಆಸ್ತಿಯೇನು, ನಿಮ್ಮ ಮಗನಿಗೆ ಅನುಕೂಲ ಮಾಡಿಕೊಡಲು ಯಾರನ್ನು ಮೂಲೆಗುಂಪು ಮಾಡಿದ್ದೀರಾ ಎಂದು ಹತ್ತು ವರ್ಷದ ಹುಡುಗನನ್ನು ಕೇಳಿದರು ಹೇಳುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದರೆ, ವರುಣಾದಲ್ಲಿ ಅವರ ಪುತ್ರನ ವಿರುದ್ಧ ಕೆಲಸ ಮಾಡಬೇಕಲ್ಲವೇ? ಎರಡೂ ಒಂದೇ ಬಳ್ಳಿಯಂತೆ.
-ರೇವಣ್ಣ ಸಿದ್ದಯ್ಯ, ನಿವೃತ್ತ ಪೊಲೀಸ್‌ ಅಧಿಕಾರಿ.

ಟಾಪ್ ನ್ಯೂಸ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.