ಋತು ಆಧಾರಿತ ಬೆಳೆಯಿಂದ ಕೃಷಿ ಲಾಭದಾಯಕ


Team Udayavani, Apr 23, 2018, 3:47 PM IST

Sudhanwa-3.jpg

ಭಾಲ್ಕಿ: ರೈತರು ಆರ್ಥಿಕ ಸಂಕಷ್ಟದಿಂದ ಪಾರಾಗಲು ಮತ್ತು ಕೃಷಿಯನ್ನು ಲಾಭದಾಯಕವಾಗಿ ಮಾಡಲು ಋತು ಆಧಾರಿತ ಬೆಳೆ ಬೆಳೆಯಬೇಕು ಎಂದು  ನೈಸರ್ಗಿಕ ಕೃಷಿಕ ಕವಿತಾ ಮಿಶ್ರಾ ಸಲಹೆ ನೀಡಿದರು. ಪಟ್ಟಣದ ಚನ್ನಬಸವಾಶ್ರಮದಲ್ಲಿ ಡಾ| ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ, ವಚನ ಜಾತ್ರೆ  ನಿಮಿತ್ತ ನಡೆದ ನೈಸರ್ಗಿಕ ಕೃಷಿ ಗೋಷ್ಠಿಯಲ್ಲಿ ಅವರು ತಮ್ಮ ಅನುಭವ ಹಂಚಿಕೊಂಡರು.

ರೈತ ಸಾಲದಲ್ಲಿಯೇ ಹುಟ್ಟಿ ಸಾಲದಲ್ಲಿಯೇ ಸಾಯುವಂತಹ ಸ್ಥಿತಿ  ನಿರ್ಮಾವಾಗಿದೆ. ರೈತ ಸ್ವಾಭಿಮಾನದ ಬದುಕು ನಡೆಸಲು ಹವಣಿಸುತ್ತಾನೆ. ಯಾರಿಗೂ ಮೋಸ ಮಾಡುವುದಿಲ್ಲ. ತುಂಬಾ ಕಷ್ಟ ಎದುರಾದರೆ ನೇಣಿಗೆ ಶರಣಾಗುತ್ತಾನೆ ಎಂದು ಕಳವಳ ವ್ಯಕ್ತಪಡಿಸಿದರು. ಏಕ ಬೆಳೆ ಪದ್ದತಿ ಕೈ ಬಿಟ್ಟು ಬಹು ಬೆಳೆ ಪದ್ಧತಿ ಅನುಸರಿಸಬೇಕು.

ಒಂದು ಬೆಳೆ ಕೈ ಕೊಟ್ಟರೆ  ಇನ್ನೊಂದು ಬೆಳೆ ಕೈ ಹಿಡಿಯುತ್ತದೆ. ಆಗ ಸ್ಥಿರ ಬದುಕು ನಡೆಸಲು ಸಾಧ್ಯವಾಗುತ್ತದೆ. ಅರಣ್ಯ ಬೆಳೆಗೆ ವಿಶೇಷ ಗಮನ ಕೊಡುವ ಅಗತ್ಯವಿಲ್ಲ. ಹಾಗಾಗಿ,  ತೋಟಗಾರಿಕೆ ಬೆಳೆಯಲ್ಲಿ ಅರಣ್ಯ ಕೃಷಿ ಮಾಡಬೇಕು. ದಾಳಿಂಬೆ, ಮಾವಿನ ಗಿಡ, ಪೇರಲ ಗಿಡ, ಬಾಳೆ, ನಿಂಬೆ, ಬೆಟ್ಟದ ನೆಲ್ಲಿಕಾಯಿ, ಕರಿಬೇವು, ಮೋಸಂಬಿ, ಬೆಳೆಯಬೇಕು.

ಸಾವಯವ ಕೃಷಿಯ ಮೂಲಕ ಮಣ್ಣಿನ ಆರೋಗ್ಯ ಕಾಪಾಡಿ ಉತ್ತಮ ಬೆಳೆ ಬೆಳೆದು ಮಾರುಕಟ್ಟೆಗೆ ಸೆಡ್ಡು ಹೊಡೆದು ನಿಲ್ಲಬೇಕು.  ಯಾರಿಗೂ ಕೈ ಒಡ್ಡಬಾರದು ಎಂದು ಸಲಹೆ ನೀಡಿದರು. ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ರೈತರು  ಆತ್ಮಸ್ಥೈರ್ಯ ಕುಗ್ಗಿಸಿಕೊಳ್ಳದೇ ಸಮಸ್ಯೆಗಳಿಂದ ಹೊರ ಬರಲು ವಿಭಿನ್ನವಾಗಿ ಯೋಚಿಸಬೇಕು.

ಅವಶ್ಯಕತೆ ಆವಿಷ್ಕಾರದ ತಾಯಿ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಗುರುಬಸವ ಪಟ್ಟದ್ದೇವರು, ಶಿವಕುಮಾರ ಸ್ವಾಮೀಜಿ, ಕೃಷಿ ಅ ಧಿಕಾರಿ ರವಿ ದೇಶಮುಖ, ಎಚ್‌.ಸಿ. ರುದ್ರಪ್ಪ, ಶಂಕರೆಪ್ಪ ಬೇವೂರ, ಬಸವರಾಜ ಬುಳ್ಳಾ, ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಶ್ರೀಕಾಂತ ಸ್ವಾಮಿ ಮಾತನಾಡಿದರು.

ಆನಂದ  ದೇವಪ್ಪ, ರೈತ ಸಂಘದ ಪ್ರಮುಖರಾದ ಮಲ್ಲಿಕಾರ್ಜುನ ಸ್ವಾಮಿ, ಸಿದ್ರಾಮಪ್ಪ ಅಣದೂರೆ, ಬಾಬುರಾವ್‌ ಜೋಳದಾಬಕಾ, ಶೇಷರಾವ್‌ ಕಣಜೆ ಮತ್ತು  ಪ್ರಗತಿಪರ ರೈತರು ಉಪಸ್ಥಿತರಿದ್ದರು. ನಾಗಯ್ಯ ಸ್ವಾಮಿ ಸ್ವಾಗತಿಸಿದರು. ಅಕ್ಷರಾ ಪಟೆ, ಪುಷ್ಪಾಂಜಲಿ ಮಹಾದೇವ ಪಟೆ° ವಚನ ನೃತ್ಯ ಪ್ರದರ್ಶಿಸಿದರು. ಆನಂದ ಕಲ್ಯಾಣೆ ನಿರೂಪಿಸಿದರು. ಮಲ್ಲಿಕಾರ್ಜುನ ಮಣಗೀರೆ ವಂದಿಸಿದರು. 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

bidarBidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Swabhimani Kalyan Parva in Basavakalyan on  Oct 19th and 20th

Bidar: ಅ.19, 20ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.