ಬಾಲಕಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ
Team Udayavani, Apr 23, 2018, 4:19 PM IST
ಕಂಪ್ಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಶನಿವಾರ ರಾತ್ರಿ ಮುಸ್ಲಿಂ ಸಮಾಜದ ಧರ್ಮಗುರುಗಳು, ಮುಖಂಡರು ಮೊಂಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ಬೀದಿಯಲ್ಲಿ ಮೊಂಬತ್ತಿಗಳನ್ನು ಹಿಡಿದು ಅತ್ಯಾಚಾರ, ಕೊಲೆ ಆರೋಪಿಗಳ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಾಲಕಿ ಕುಟುಂಬಕ್ಕೆ ರಕ್ಷಣೆ, ಪರಿಹಾರ ಮತ್ತು ಆರೋಪಿಗಳಿಗೆ
ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್ ಬಿ. ರವೀಂದ್ರಕುಮಾರ್‌ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಹೀನಕೃತ್ಯವಾಗಿದೆ. ಅತ್ಯಾಚಾರಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದರ ಮೂಲಕ ಸಮಾಜದಲ್ಲಿ ಅತ್ಯಾಚಾರಿಗಳಿಗೆ ರಕ್ಷಣೆ ಇಲ್ಲ ಎನ್ನುವ ಸಂದೇಶವನ್ನು
ಸರ್ಕಾರಗಳು ಸಾರಬೇಕಾಗಿದೆ. ಬಾಲಕಿ ಕುಟುಂಬಕ್ಕೆ 3 ಕೋಟಿ ರೂ. ಪರಿಹಾರ ನೀಡುವಂತೆ ಆಗ್ರಹಿಸಿದರು.
ಮುಸ್ಲಿಂ ಧರ್ಮಗುರುಗಳಾದ ಸೈಯದ್ ಮೆಹಮೂದ್ ಖಾದ್ರಿ, ಸೈಯದ್ ಖಾಜಾ ಮೊಹಿನುದ್ದೀನ್ ಖಾದ್ರಿ, ಸೈಯದ್ ನೂರ ಅಹ್ಮದ್ ಖಾದ್ರಿ, ಮುಖಂಡರಾದ ಎಂ. ವಲೀಆಹ್ಮದ್, ಅಬ್ದುಲ್ ವಾಹೀದ್, ಮಹಮೂದ್, ಸೈಯದ್ ಉಸ್ಮಾನ್, ಟಿ. ಜಾಫರ್, ಲಡ್ಡು ಹೊನ್ನೂರವಲಿ, ಬಿ.ಜಾಫರ್, ಯಾಳ್ಪಿ ಅಬ್ದುಲ್ ಮುನಾಫ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.