ಕಾಂಗ್ರೆಸ್‌ಗೆ ಮೂರನೇ ಸ್ಥಾನ ಖಚಿತ
Team Udayavani, Apr 24, 2018, 6:45 AM IST
ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.
ಮೈಸೂರಲ್ಲಿ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 113 ಸ್ಥಾನ ಗೆಲ್ಲುವುದಕ್ಕಾಗಿ ತಾವು ಕೆಲಸ ಮಾಡುತ್ತಿದ್ದು, ರಾಜ್ಯದ ಜನತೆ ನನ್ನ ಶ್ರಮವನ್ನು ಗುರುತಿಸಿದ್ದಾರೆ. ಆದರೆ ಚುನಾವಣಾ ಪೂರ್ವ ಸಮೀಕ್ಷೆ ವರದಿಗಳು ಗೊಂದಲದಿಂದ ಕೂಡಿವೆ. ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಿಲ್ಲ. ಹೀಗಾಗಿ ರಾಜ್ಯಾದ್ಯಂತ ಸುತ್ತಾಡಿ ಜನರ ಅಭಿಪ್ರಾಯ ಕೇಳುತ್ತಿದ್ದೇನೆ. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮೂಲ ಕಾಂಗ್ರೆಸ್ಸಿಗರಿಲ್ಲ: ಮೂಲ ಕಾಂಗ್ರೆಸ್ಸಿಗರೆಲ್ಲರೂ ಸಿದ್ದರಾಮಯ್ಯ ಅವರಿಂದ ದೂರಾಗಿದ್ದು, ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಏಕಾಂಗಿಯಾಗಿದ್ದಾರೆ.ಸದ್ಯಕ್ಕೆ ಅವರ ಜತೆಯಲ್ಲಿರುವವರು ವಲಸಿಗರು ಮಾತ್ರ. ಈ ವಲಸಿಗರು ತಾವು ಗೆಲ್ಲುವ ವಿಶ್ವಾಸದಲ್ಲಿದ್ದಾರೆಂದು ಟೀಕಿಸಿದರು.ವರುಣಾ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ನಮ್ಮ ತಂತ್ರಗಾರಿಕೆಯಾಗಿದ್ದು, ಈ ಹಿಂದೆ ವೀರಶೈವ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಆದರೆ ಬಿಜೆಪಿ ಇದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ನಮ್ಮ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ.
ಪ್ರಜ್ವಲ್ ಪಕ್ಷಕ್ಕೆ ರಾಜಕೀಯ ಶಕ್ತಿ: ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷಕ್ಕೆ ರಾಜಕೀಯ ಶಕ್ತಿ. ಆದರೆ ಚುನಾವಣೆಗೆ ಮುನ್ನ ಸಾರ್ವಜನಿಕವಾಗಿ ನೀಡಿದ ಮಾತಿಗೆ ಬದಟಛಿರಾಗಿ ಕುಟುಂಬದಿಂದ ಇಬ್ಬರೇ ಸ್ಪರ್ಧೆ ಮಾಡುತ್ತಿದ್ದೇವೆ. ನಮ್ಮ ಪಕ್ಷದ ಪರ ಯಾವ ಸ್ಟಾರ್‌ಗಳೂ ಪ್ರಚಾರಕ್ಕೆ ಬರುವುದಿಲ್ಲ, ಓವೈಸಿ ಕೆಲವು ಕಡೆ ಪ್ರಚಾರಕ್ಕೆ ಬರಲಿದ್ದು, ಅಗತ್ಯವಿದ್ದಲ್ಲಿ ತೆಲಂಗಾಣ ಸಿಎಂ ಬರುವುದಾಗಿ ತಿಳಿಸಿದ್ದಾರೆ. ಏ.25ರಿಂದ ಮಾಯಾವತಿ ಮೈಸೂರು ಸೇರಿ ರಾಜ್ಯದ ಕೆಲವೆಡೆಗಳಲ್ಲಿ ಪ್ರಚಾರ ಮಾಡಲಿದ್ದಾರೆಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.