ನವಯುಗ ಟೋಲ್ಗೆ ಭದ್ರತೆ ನೀಡುವಂತೆ ಹೈ ಸೂಚನೆ
Team Udayavani, Apr 24, 2018, 3:46 PM IST
ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ ರಸ್ತೆಯ ನವಯುಗ ಟೋಲ್ಗೆ ಪೊಲೀಸ್ ಭದ್ರತೆ ನೀಡುವಂತೆ ನಗರ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಟೋಲ್ ದರ ಹೆಚ್ಚಳದಿಂದ ವಾಹನ ಚಾಲಕರು ಅಸಹಕಾರ ತೋರುತ್ತಿದ್ದಾರೆ. ಹೀಗಾಗಿ ಸೂಕ್ತ ಭದ್ರತೆ ನೀಡುವಂತೆ ನಗರ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ನವಯುಗ ಟೋಲ್ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾ. ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಟೋಲ್ ಸಿಬ್ಬಂದಿ ಯಾವುದೇ ಗಲಾಟೆಗಳಿಲ್ಲದೆ ಶುಲ್ಕ ಸಂಗ್ರಹಿಸಲು ಅಗತ್ಯವಿರುವಷ್ಟು ಭದ್ರತೆ ನೀಡುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಇತ್ತೀಚೆಗೆ ಟೋಲ್ ದರ ಹೆಚ್ಚಳದಿಂದ ವಾಹನ ಚಾಲಕರು ತೀವ್ರ ಅಸಮಧಾನ ತೋರುತ್ತಿದ್ದು, ಆಗಾಗ್ಗೆ ಸಿಬ್ಬಂದಿ ಜೊತೆ ಗಲಾಟೆಗಳಾಗುತ್ತಿವೆ. ಹೀಗಾಗಿ ಸೂಕ್ತ ಭದ್ರತೆ ನೀಡುವಂತೆ ಚಿಕ್ಕಜಾಲ ಠಾಣೆ ಪೊಲೀಸರಿಗೆ ಮನವಿ ಮಾಡಲಾಗಿತ್ತು.
ಆದರೆ, ಚುನಾವಣಾ ಭದ್ರತೆಗೆ ಸಾಕಷ್ಟು ಸಿಬ್ಬಂದಿ ನಿಯೋಜನೆಗೊಂಡಿರುವುದರಿಂದ ಅಗತ್ಯ ಸಿಬ್ಬಂದಿ ಸದ್ಯಕ್ಕೆ ಭದ್ರತೆಗೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಪರಿಣಾಮ ವಾಹನ ಚಾಲಕರ ಅಸಹಕಾರದಿಂದ ಪ್ರತಿದಿನ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಹೀಗಾಗಿ ಕೂಡಲೇ ಪೊಲೀಸ್ ಭದ್ರತೆ ಕಲ್ಪಿಸಲು ಆದೇಶಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.