ರಘುಗೆ ಕ್ಷೇತ್ರಾಭಿವೃದ್ಧಿಯ ಶ್ರೀರಕ್ಷೆ
Team Udayavani, Apr 24, 2018, 3:46 PM IST
ಬೆಂಗಳೂರು: ಸರ್.ಸಿ.ವಿ.ರಾಮನ್ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ರಘು ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಅಪಾರ ಬೆಂಬಲಿಗರೊಡನೆ ಪಾದಯಾತ್ರೆ ನಡೆಸಿದ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದರು.
ಪಾದಯಾತ್ರೆ ಹಾಗೂ ರೋಡ್ ಶೋ ವೇಳೆ ಕ್ಷೇತ್ರದ ಮಹಿಳೆಯರು ಆರತಿ ಎತ್ತಿ ಶುಭಕೋರಿದರು. ನಾಮಪತ್ರ ಸಲ್ಲಿಕೆ ನಂತರ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ಗಳಲ್ಲಿ ಮತಯಾಚಿಸಿದರು. ಹತ್ತು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ತಿಳಿಸಿದ ಆವರು ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಕೋರಿದರು.
ಈ ವೇಳೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಜನತೆಯ ನಿರೀಕ್ಷೆಗಳನ್ನು ಹತ್ತು ವರ್ಷಗಳಲ್ಲಿ ಈಡೇರಿಸಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕ ಸಾಧಿಸಿ ಜನತೆಯ ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ನಾನು ಮಾಡಿರುವ ಕಾರ್ಯಗಳೇ ನನಗೆ ಶ್ರೀರಕ್ಷೆ. ನಮ್ಮ ಸರ್ಕಾರ ಇಲ್ಲದಿದ್ದರೂ ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೂ ಸೇರಿ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ. ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.