ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
Team Udayavani, Apr 25, 2018, 11:40 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರಿದ ಮಾನಪ್ಪ ವಜ್ಜಲ್ ಹಾಗೂ ಡಾ.ಶಿವರಾಜ್ ಪಾಟೀಲ್ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ ಟಿ.ಎ ಶರವಣ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಕಾರ್ಯದರ್ಶಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಮಾಜಿ ಶಾಸಕರಾದ ಮಾನಪ್ಪ ವಜ್ಜಲ್, ಶಿವರಾಜ್ ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
2013ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಪಡೆದು ಶಾಸಕರಾಗಿ ಆರಿಸಿ ಬಂದ ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್ ಇದೇ ವರ್ಷ ಜನವರಿ 18ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಮತ್ತೂಂದು ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಆ ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮ ಉಲ್ಲಂ ಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಟಿ.ಎ.ಶರವಣ ಅರ್ಜಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.