ಮತ ಕೇಳೋಕೆ ಬಂದವರಿಗೆ ಗೌರವ ನೀಡಿ
Team Udayavani, Apr 25, 2018, 12:42 PM IST
ತಿ.ನರಸೀಪುರ: ಯಡಿಯೂರಪ್ಪಹಾಗೂ ಕುಮಾರಸ್ವಾಮಿ ಬಡವರ ಮೇಲೆ ಸವಾರಿ ಮಾಡಲು ಬಡವರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ, ಅಧಿಕಾರದಿಂದ ಕೆಳಗಿಳಿಸಲು ರಾಜಕೀಯ ದಾಳಿ ನಡೆಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ತಾಲೂಕಿನ ವಾಟಾಳು ಗ್ರಾಮದಲ್ಲಿ ವಿವಿಧ ಸಮುದಾಯಗಳ ಬೀದಿಗಳಲ್ಲಿ ಪಾದಯಾತ್ರೆ ಮಾಡಿ ಮತಯಾಚಿಸಿದ ಅವರು, ರೈತಪರ ಧ್ವನಿಯಾಗಿ, ಎಲ್ಲಾ ವರ್ಗಗಳಿಗೂ ನ್ಯಾಯ ಕಲ್ಪಿಸಿರುವ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದರೆ ಬಡವರ ಮೇಲೆ ಸವಾರಿ ಮಾಡಬಹುದೆಂಬ ಉದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ಚುನಾವಣೆಯಲ್ಲಿ ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಅಧಿಕಾರಕ್ಕೆ ಬರುವುದಿಲ್ಲ. ಸರ್ಕಾರವೇ ಅಧಿಕಾರಕ್ಕೆ ಬಾರದ ಮೇಲೆ ಕ್ಷೇತ್ರದಲ್ಲಿ ಅವೆರಡು ಪಕ್ಷಗಳ ಅಭ್ಯರ್ಥಿಗೆ ಮತ ಹಾಕಿದರೆ ಅಭಿವೃದ್ಧಿಯನ್ನಾಗಲಿ, ಜನರ ಕೆಲಸವನ್ನಾಗಲಿ ಮಾಡಲು ಸಾಧ್ಯವಿಲ್ಲ. ಮತ ಕೇಳ್ಳೋಕೆ ಬರುವ ಅವರನ್ನು ಗೌರವಯುತವಾಗಿ ಕಾಣಬೇಕು. ಆದರೆ ರಾಜಕೀಯವಾಗಿ ಬೆಂಬಲಿಸಬಾರದೆಂದು ಮಹದೇವಪ್ಪಕರೆ ನೀಡಿದರು.
ಮತಯಾಚನೆಗೂ ಮೊದಲು ವಾಟಾಳು ಗ್ರಾಮದಲ್ಲಿರುವ ಸೂರ್ಯಸಿಂಹಾಸನ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಯುವ ಮುಖಂಡ ಸುನೀಲ್ ಬೋಸ್, ಜಿಪಂ ಸದಸ್ಯ ಮಂಜುನಾಥ್, ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಬಸವರಾಜು, ಕೆಪಿಸಿಸಿ ಉಪಾಧ್ಯಕ್ಷ ಹೊನ್ನನಾಯಕ, ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಫರೀದ್, ಸಂಚಾಲಕ ಮನ್ಸೂರ್ ಆಲಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಶಿವಮೂರ್ತಿ, ಮಾಜಿ ಅಧ್ಯಕ್ಷ ಕೆ.ವಜ್ರೆàಗೌಡ, ತಾಪಂ ಸದಸ್ಯ ಉಮೇಶ, ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಪುರಸಭೆ ಅಧ್ಯಕ್ಷ ಉಮೇಶ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.