ನಾಯಕ ಸಮುದಾಯ ಪ್ರಗತಿಗೆ ಒತ್ತು
Team Udayavani, Apr 25, 2018, 12:42 PM IST
ತಿ.ನರಸೀಪುರ: ಪರಿವಾರ ಮತ್ತು ತಳವಾರ ಉಪ ಜಾತಿಗಳನ್ನು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸೇರ್ಪಡೆಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಸಾಮಾಜಿಕ ಪ್ರಗತಿಗೆ ಒತ್ತು ನೀಡಿರುವುದರಿಂದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಮಸ್ತ ನಾಯಕ ಸಮುದಾಯ ಬಿಜೆಪಿ ಬೆಂಬಲಿಸಬೇಕೆಂದು ಸಂಸದ ಶ್ರೀರಾಮುಲು ಹೇಳಿದರು.
ಪಟ್ಟಣದಲ್ಲಿ ನಡೆದ ನಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿ, ಸಮುದಾಯ ಬಿಜೆಪಿ ಬೆಂಬಲಿಸಿ ರಾಜ್ಯದಲ್ಲಿ ಅಧಿಕಾರವನ್ನು ನೀಡಿದರೆ ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಶೇ.7.5 ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸಮುದಾಯವನ್ನು ನಿರ್ಲಕ್ಷಿಸಿರುವುದರಿಂದ ಜನ ಜಾಗೃತರಾಗಿ ಯಡಿಯೂರಪ್ಪನೇತೃತ್ವದ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.
ಬಿಜೆಪಿ ಅಭ್ಯರ್ಥಿ ಶಂಕರ್ ಮಾತನಾಡಿ, ತಾಲೂಕಿನ ಸಮಸ್ತ ನಾಯಕ ಸಮುದಾಯದ ಪರವಾಗಿ ಕೆಲಸವನ್ನು ಮಾಡಲು ಪಕ್ಷದ ಅಭ್ಯರ್ಥಿಯಾಗಿದ್ದೇನೆ. ಸಮಗ್ರ ಪರಿವಾರ ಮೂಲಕ ಕೇಂದ್ರ ಸರ್ಕಾರ ಹಲವು ವರ್ಷಗಳ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಆಮಿಷಕ್ಕೆ ಒಳಗಾಗದೆ ಬಿಜೆಪಿ ಬೆಂಬಲಿಸಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಎಸ್ಟಿ ಅಧ್ಯಕ್ಷ ಮೂಗೂರು ಕುಮಾರ ಹಾಗೂ ಎಸ್ಸಿ ಅಧ್ಯಕ್ಷ ವಿ.ವೆಂಕಟೇಶ್ ಶ್ರೀರಾಮುಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಕ್ಷೇತ್ರಾಧ್ಯಕ್ಷ ಎಚ್.ಎಂ.ಪರಶಿವಮೂರ್ತಿ, ನಾಯಕ ಸಮುದಾಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.