ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣ : ಕಾವೇರಿಸೇನೆ ಆರೋಪ
Team Udayavani, Apr 26, 2018, 7:40 AM IST
ಮಡಿಕೇರಿ: ಮಡಿಕೇರಿ ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಲು ಇಲ್ಲಿನ ಅರಣ್ಯ ಪ್ರದೇಶವನ್ನು ಪ್ರಭಾವಿ ರಾಜಕಾರಣಿಯೊಬ್ಬರು ಸೇರಿದಂತೆ ಸುಮಾರು 68 ಕುಟುಂಬಗಳು ಅತಿಕ್ರಮಿಸಿಕೊಂಡಿರುವುದೇ ಕಾರಣ ಎಂದು ಆರೋಪಿಸಿರುವ ಕಾವೇರಿಸೇನೆ, ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಮಾಡಿಕೊಂಡ ಮನವಿಗೆ ಅರಣ್ಯ ಇಲಾಖೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿಸೇನೆಯ ಸಂಚಾಲಕ ಕೆ.ಎ.ರವಿಚಂಗಪ್ಪ ಅವರು, ಸಮಾಜಕ್ಕೆ ಮಾದರಿಯಾಗಬೇಕಾಗಿದ್ದ ಪ್ರಭಾವಿ ರಾಜಕಾರಣಿಯೊಬ್ಬರು ನಗರಸಭೆ ಹಾಗೂ ಮೂಡಾದ ಅನುಮತಿ ಇಲ್ಲದೆ ಅರಣ್ಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಮಡಿಕೇರಿ ಅರಣ್ಯ ಭವನದ ಬಳಿ ಪ್ರತೀವರ್ಷ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಅರಣ್ಯ ನಾಶವೇ ಕಾರಣವಾಗಿದೆ. ಮಡಿಕೇರಿ ಪಟ್ಟಣದ ಒತ್ತಿನಲ್ಲಿರುವ ಕರ್ಣಂಗೇರಿ ಗ್ರಾಮದ ಸ.ನಂ.289/1ರಲ್ಲಿ 54 ಎಕರೆ ಅರಣ್ಯ ಜಾಗವಿದ್ದು, ಇದನ್ನು ಮಡಿಕೇರಿ ಪೂರ್ವ ಅರಣ್ಯವೆಂದು ಕರೆಯಲಾಗುತ್ತಿದೆ. ಪ್ರಾಣಿಗಳು ಓಡಾಡಬೇಕಾಗಿರುವ ಈ ಅರಣ್ಯ ಜಾಗವನ್ನು ಸುಮಾರು 68 ಮಂದಿ ಒತ್ತುವರಿ ಮಾಡಿಕೊಂಡಿರುವುದಾಗಿ ಅರಣ್ಯ ಇಲಾಖೆಯ ದಾಖಲೆಗಳೇ ಹೇಳುತ್ತಿವೆ. ಒತ್ತುವರಿಯಾಗಿರುವ ಜಾಗದಲ್ಲಿ ಮನೆಗಳನ್ನು ನಿರ್ಮಿಸಲಾಗಿದ್ದರೂ, ಅರಣ್ಯ ಇಲಾಖೆ ಈ ಪ್ರಕರಣವನ್ನು ಕಂಡೂ ಕಾಣದಂತೆ ಮೌನಕ್ಕೆ ಶರಣಾಗಿದೆ ಎಂದು ರವಿಚಂಗಪ್ಪ ಆರೋಪಿಸಿದರು.
ಅರಣ್ಯವನ್ನು ಒತ್ತುವರಿ ಮಾಡಿಕೊಂಡಿರುವವರು ದಲಿತರು, ಮನೆ ಇಲ್ಲದವರು ಅಥವಾ ಬಡವರಲ್ಲ. ಬದಲಾಗಿ ಎಲ್ಲರೂ ಬಲಿಷ್ಠರೇ ಆಗಿದ್ದು, ಕೆಲವರು ರಾಜಕೀಯವಾಗಿ ರಾಜ್ಯ ಮಟ್ಟದಲ್ಲಿ ಪ್ರಭಾವ ಇರುವವರೂ ಇದ್ದಾರೆ. ಇಂತಹ ವ್ಯಕ್ತಿಗಳು ನಗರಸಭೆ, ಮೂಡಾ ಸೇರಿದಂತೆ ಸಂಬಂಧಿಸಿದ ಪ್ರಾಧಿಕಾರಗಳಿಂದ ಯಾವುದೇ ಅನುಮತಿಯನ್ನೂ ಪಡೆಯದೆ ಬƒಹತ್ ಬಂಗಲೆಗಳನ್ನು ನಿರ್ಮಿಸಿಕೊಂಡಿದ್ದಾರೆ. ತಾನು ಮಾಹಿತಿ ಹಕ್ಕಿನಡಿ ಸಂಗ್ರಹಿಸಿ ಮಾಹಿತಿಯ ಅನ್ವಯ ಪ್ರಭಾವಿ ರಾಜಕಾರಣಿಯೊಬ್ಬರು ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ, ಭೂ ಪರಿವರ್ತನೆಯನ್ನೂ ಮಾಡದೆ ಮನೆಯನ್ನು ನಿರ್ಮಿಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಸಂಬಂಧಿಸಿದ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರವಿಚಂಗಪ್ಪ ಆರೋಪಿಸಿದರು.
ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಸಂಬಂಧಿಸಿದ ಇತರ ಇಲಾಖೆಗಳು ಕಾರ್ಯಪ್ರವೃತ್ತರಾಗಿ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ ರವಿಚಂಗಪ್ಪ, ತಪ್ಪಿದಲ್ಲಿ ಅÉ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಹೊಸಬೀಡು ಶಶಿ, ಹಾಗೂ ದಿವಾಕರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.