ಬಿಜೆಪಿ ಕಾರ್ಯಕರ್ತರ ಪಕ್ಷ: ಡಾ| ವೈ. ಭರತ್ ಶೆಟ್ಟಿ
Team Udayavani, Apr 26, 2018, 1:06 PM IST
ಸುರತ್ಕಲ್ : ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ನಾಯಕ ಎಂಬುದಕ್ಕಿಂತ ಕಾರ್ಯಕರ್ತ ಎಂಬವರಿಗೇ ಹೆಚ್ಚಿನ ಗೌರವವಿದೆ ಎಂದು ಡಾ| ಭರತ್ ಶೆಟ್ಟಿ ಅವರು ಹೇಳಿದರು. ಬಂಗ್ರಕೂಳೂರು ಕೋಡಿಕಲ್ ಪ್ರದೇಶದಲ್ಲಿ ಜರಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಶಿಸ್ತಿನ
ಕಾರ್ಯಕರ್ತರನ್ನು ಹೊಂದಿದ್ದು, ಪಕ್ಷ ನಿರ್ಧಾರ ಮಾಡಿದ ಅಭ್ಯರ್ಥಿಯ ಗೆಲುವಿಗೆ ಸದಾ ಕೊಡುಗೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಮುಕ್ತ ಆಡಳಿತಕ್ಕೆ ಬಿಜೆಪಿ ಒಂದೇ ಹೆಜ್ಜೆ ಹಿಂದಿದ್ದು ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೇರುವ ಮೂಲಕ ಅದನ್ನೂ ಮಾಡಲಿದೆ. ಮತದಾರರು ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ಅಧಿಕಾರಕ್ಕೇರಲು ಶಕ್ತಿ ತುಂಬಬೇಕು ಎಂದರು.
ಈ ಹಿಂದೆ ಯಡಿಯೂರಪ್ಪ ಸರಕಾರ ರೈತಪರ ಯೋಜನೆ ಜಾರಿಗೆ ತರುವ ಮೂಲಕ ಅವರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವಲ್ಲಿ ಶ್ರಮಿಸಿದ್ದರು. ನಗರ ಹಾಗೂ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಒದಗಿಸಿ ಮಹಾ ನಗರ ಪಾಲಿಕೆ, ಪಂಚಾಯತ್ ಪ್ರದೇಶಗಳಲ್ಲಿ ರಸ್ತೆ, ನೀರು ಸೌಲಭ್ಯ ಒದಗಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ ಎಂದರು. ಮುಖಂಡರಾದ ಕಾರ್ಪೊರೇಟರ್ ಹರೀಶ್ ಶೆಟ್ಟಿ , ಅಶೋಕ್ ಕೃಷ್ಣಾಪುರ, ಸುಧಾಕರ ಅಡ್ಯಾರ್, ಕಿರಣ್ ಕುಮಾರ್ ಮೊದಲಾದವರಿದ್ದರು.
ಗಣೇಶಪುರ ದೇಗುಲಕ್ಕೆ ಭೇಟಿ
ಶ್ರೀ ಗಣೇಶಪುರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ವೈ. ಭರತ್ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇರೇಬೈಲು ಶಿವಪ್ರಸಾದ ತಂತ್ರಿಗಳು ಗೌರವಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಸಮಿತಿ ಸದಸ್ಯ ನಿರಂಜನ ಭಟ್, ವಿಶ್ವ ಹಿಂದೂ ಪರಿಷತ್ ಪ್ರಮುಖ ಜಿತೇಂದ್ರ, ಗಣೇಶ ಹೊಸಬೆಟ್ಟು, ಸದಾಶಿವ ಐತಾಳ, ಲೋಕೇಶ ಬೊಳ್ಳಾಜೆ, ಬಾಲಕೃಷ್ಣ ಸುವರ್ಣ, ಹೊನ್ನಯ್ಯ ಕೋಟ್ಯಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.