ಸ್ವೀಪ್ ಸಮಿತಿಯಿಂದ ಸಂತೆಯಲ್ಲಿ ಜಾಗೃತಿ
Team Udayavani, Apr 26, 2018, 5:31 PM IST
ಕಲಬುರಗಿ: ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಸಂತೆ ಪ್ರದೇಶಗಳಲ್ಲಿ ಕಡ್ಡಾಯ ಮತದಾನ ಹಾಗೂ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಗರದ ಕಣ್ಣಿ ತರಕಾರಿ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ತಂಡವು ಕರಪತ್ರಗಳನ್ನು ಹಂಚುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು.
ಮೇ 12ರಂದು ವಿಧಾನಸಭೆ ಚುನಾವಣೆಯ ಮತದಾನ ನಡೆಯಲಿದ್ದು, ಮನೆಯಲ್ಲಿ ಯಾರೂ ಕೂಡದೇ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸಬೇಕು. ಮುಂದಿನ 5 ವರ್ಷಗಳ ಸುಭದ್ರ ಸರ್ಕಾರಕ್ಕಾಗಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂವಿಧಾನ ಮತದಾನವೆಂಬ ಶಸ್ತ್ರವನ್ನು ನೀಡಿದ್ದು, ಇದನ್ನು ತುಂಬಾ ಸಮರ್ಥವಾಗಿ ಬಳಸಿಕೊಳ್ಳಬೇಕು. ಮತದಾನಕ್ಕಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡಬೇಕು. ಮತದಾನ ಎಲ್ಲರ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಬಸ್ ನಿಲ್ದಾಣದಲ್ಲಿ ಬಸ್ಸುಗಳಲ್ಲಿ ಹಾಗೂ ಪ್ಲಾಟ್‌ಫಾರ್‌ಂ ನಲ್ಲಿ ಕುಳಿತಿರುವ ಪ್ರಯಾಣಿಕರಿಗೆ ಸಹ ಮತದಾನದ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹ್ಮದ್ ಯುಸೂಫ್ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.