ಪ್ರಾಮಾಣಿಕ ಅಭಿವೃದ್ಧಿ  ಕೆಲಸದ ತೃಪ್ತಿ: ರಘುಪತಿ ಭಟ್‌


Team Udayavani, Apr 27, 2018, 7:20 AM IST

250418udsb10.jpg

ಉಡುಪಿ: ಉಡುಪಿ ಜನತೆ ಎರಡು ಬಾರಿ ನನಗೆ ಅವಕಾಶ ನೀಡಿದ್ದಾರೆ. ಆಗ ದಿ| ಡಾ| ವಿ.ಎಸ್‌. ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ವಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಮತ್ತೂಮ್ಮೆ ಜನತೆ ಅವಕಾಶ ನೀಡಿದರೆ ನನ್ನ ಮೇಲೆ ಜನತೆ ಇಟ್ಟ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಅಂಬಲಪಾಡಿಯಲ್ಲಿ ನಡೆದ ಅಂಬಲಪಾಡಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಸ್ಥಾನೀಯ ಸಮಿತಿಗಳ ಜಂಟಿ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಯದ ಸಂಕೇತ
ಪ್ರಧಾನಿ ನರೇಂದ್ರ ಮೋದಿ ಅವರು ಮೇ 1ರಂದು ಚುನಾವಣಾ ಪ್ರಚಾರಕ್ಕಾಗಿ ಉಡುಪಿಗೆ ಆಗಮಿಸಲಿದ್ದು ಇದು ನನ್ನ ಪಾಲಿನ ಸುಯೋಗ. ಈ ಹಿಂದೆ ನಾನು ಸ್ಪರ್ಧಿಸಿದ್ದ ಎರಡು ಚುನಾವಣೆಯ ಸಂದರ್ಭದಲ್ಲಿಯೂ ಮೋದಿ ಅವರು ಉಡುಪಿಗೆ ಆಗಮಿಸಿದ್ದು ಈ ಬಾರಿಯೂ ಅವರ ಆಗಮನ ಜಯದ ಸಂಕೇತವಾಗಿದೆ. ಎಂದರು.

ಗೆಲುವಿಗೆ ವರದಾನ
ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ಅಂದಿನ ಬಿಜೆಪಿ ರಾಜ್ಯ ಸರಕಾರದ ಸಾಧನೆಗಳು, ಕೇಂದ್ರ ಸರಕಾರದ ನೂತನ ಅಭಿವೃದ್ಧಿ ಯೋಜನೆಗಳು, ಪ್ರಸಕ್ತ ರಾಜ್ಯ ಸರಕಾರದ ಆಡಳಿತ ವೈಫ‌ಲ್ಯಗಳು ಬಿಜೆಪಿ ಗೆಲುವಿಗೆ ವರದಾನವಾಗಲಿದೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನಿಷ್ಠಾವಂತ ಕಾರ್ಯಕರ್ತ ಮಿತ್ರರು ಈ ವಿಚಾರಗಳನ್ನು ಮನೆ-ಮನೆಗೆ ತಲುಪಿಸಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಅಂತರದಿಂದ ಗೆಲುವನ್ನು ಸಾಧಿಸಲು ಶ್ರಮ ವಹಿಸಬೇಕು ಎಂದು ಅವರು ಕರೆ ನೀಡಿದರು.
ಅಂಬಲಪಾಡಿ ನಗರಾಧ್ಯಕ್ಷ ಹರೀಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.  ಅಧ್ಯಕ್ಷ  ದಿನಕರ ಬಾಬು, ಜಿಲ್ಲಾ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್‌ ಅಂಬಲಪಾಡಿ, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷ ಪ್ರಮೋದ್‌ ಸಾಲ್ಯಾನ್‌, ಉಪಾಧ್ಯಕ್ಷೆ ಉಷಾ ಕಿದಿಯೂರು, ಬಿಜೆಪಿ ಅಂಬಲಪಾಡಿ ಗ್ರಾಮಾಂತರ ಅಧ್ಯಕ್ಷ ರಾಮರಾಜ್‌ ಕಿದಿಯೂರು, ಪ್ರ.ಕಾರ್ಯದರ್ಶಿ ಗಿರೀಶ್‌ ಅಮೀನ್‌ ಕಿದಿಯೂರು, ಅಂಬಲಪಾಡಿ ನಗರ ಪ್ರ.ಕಾರ್ಯದರ್ಶಿ ರಮೇಶ್‌ ಉಪಾಧ್ಯಾಯ, ನಗರ ಯುವಮೋರ್ಚಾ ಅಧ್ಯಕ್ಷ ಮಿಥುನ್‌, ಉಡುಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷ ನವೀನ್‌ ಸುವರ್ಣ, ನಗರ ಮೀನುಗಾರ  ಪ್ರಕೋಷ್ಠ ಸಹ ಸಂಚಾಲಕ ಭುವನೇಂದ್ರ, ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಯೋಗೀಶ್‌ ಶೆಟ್ಟಿ, ಶಕುಂತಳಾ ಶೆಟ್ಟಿ, ಭಾರತಿ ಭಾಸ್ಕರ್‌, ಮಾಜಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಗ್ರಾ.ಪಂ. ಸದಸ್ಯರು, ಸ್ಥಾನೀಯ ಸಮಿತಿ, ವಾರ್ಡ್‌, ಬೂತ್‌ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.