ನೀರು ಕೊಡದಿದ್ದರೆ ಮತದಾನ ಬಹಿಷ್ಕಾರ
Team Udayavani, Apr 27, 2018, 12:36 PM IST
ನಂಜನಗೂಡು: ಒಂದು ವರ್ಷದ ಹಿಂದೆ ಉಪ ಚುನಾವಣೆ ವೇಳೆ ಭೂಮಿಪೂಜೆ ನೆರವೇರಿಸಿದ ರಸ್ತೆ, ಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಮುರ್ಪಕ ಕುಡಿವ ನೀರು ಪೂರೈಸದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮಸ್ಥರು ಖಾಲಿ ಕೊಡ ಹಿಡಿದು ರಸ್ತೆ ತಡೆ ಮಾಡಿ ಎಚ್ಚರಿಕೆ ನೀಡಿದರು.
ಗ್ರಾಮದಲ್ಲಿನ ರಸ್ತೆ, ಚರಂಡಿ ಕಾಮಗಾರಿ ನಿರ್ಮಾಣಕ್ಕೆ ಕಳೆದ ವರ್ಷವೇ ಗುದ್ದಲಿಪೂಜೆ ನೆರವೇರಿಸಲಾಯಿತು. ಆದರೆ, ಇಂದಿಗೂ ಕಾಮಗಾರಿ ಆರಂಭಗೊಳ್ಳುವ ಯಾವುದೇ ಮುನ್ಸೂಚನೆ ಕಾಣುತ್ತಿಲ್ಲ. ಅದು ಉಪಚುನಾವಣೆಯ ಗಿಮಿಕ್ ಆಗಿದ್ದೂ ಈಗ ಮತ್ತೆ ಚುನಾವಣೆ ಬಂದಿದೆ. ಈಗಲಾದರೂ ಕಾಮಗಾರಿ ಪ್ರಾರಂಭಿಸದಿದ್ದರೆ ನಮ್ಮ ಮತ ಯಾರಿಗೂ ಹಾಕದೆ ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಚುನಾವಣಾಧಿಕಾರಿಗಳಿಗೆ ಲಿಖೀತ ಪತ್ರ ಬರೆದು ಅವರ ಗಮನ ಸೆಳೆಯಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಸ್ಮಶಾನ ಜಾಗ ಗುರುತಿಸುವಂತೆ ಬೇಡಿಕೆ ಇಟ್ಟರೂ ಪ್ರಯೋಜನವಾಗಿಲ್ಲ. ಕನಕ ಭವನ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ.
ಈ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ ಚುಣಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರೆಲ್ಲರೂ ಒಕ್ಕೊರಲಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದರು. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟಸ್ವಾಮಿ, ಮಾದೇಗೌಡ, ಮಲ್ಲೇಗೌಡ, ಸುಂದರಮ್ಮ, ಕೆಂಪಮ್ಮ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.