ವೀರಗಾಸೆ ಕುಣಿತದೊಂದಿಗೆ ಮತದಾನ ಜಾಗೃತಿ
Team Udayavani, Apr 27, 2018, 5:24 PM IST
ಸಿರುಗುಪ್ಪ: ಸಿರುಗುಪ್ಪ ಕ್ಷೇತ್ರದಲ್ಲಿ ಮತದಾನ ಜಾಗೃತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ತಾಲೂಕು ಆಡಳಿತದ ವತಿಯಿಂದ ವೀರಗಾಸೆ ಕುಣಿತದ ಮೂಲಕ ಗಮನ ಸೆಳೆಯಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಹಶೀಲ್ದಾರ್ ಎಸ್.ಪದ್ಮಕುಮಾರಿ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತದಾನ ಜಾಗೃತಿಗಾಗಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆವರು, ಈಗಾಗಲೇ ಮತದಾನದ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ, ಪಂಜಿನ ಮೆರವಣಿಗೆ, ಜಾಗೃತಿ ಜಾಥಾ ಮೂಲಕ ಮತದಾನದ ಜಾಗೃತಿ ಮೂಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಗರದ ವಿವಿಧ ಮತಗಟ್ಟೆಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿರುವ ಪ್ರದೇಶಗಳಿಗೆ ತೆರಳಿ ಮತದಾನ ಜಾಗೃತಿ ಕಾರ್ಯ ಪ್ರತಿನಿತ್ಯ ನಿರಂತರವಾಗಿ ದಿನಕ್ಕೊಂದು ವಿಶೇಷ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗಳಿಗೆ ಇರುವ ಅಮೂಲ್ಯವಾದ ಮತದಾನದ ಹಕ್ಕಿನಿಂದ ವಂಚಿತರಾದರೆ ಅಭಿವೃದ್ಧಿಯ ದೃಷ್ಟಿಯಿಂದ ದೇಶಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.
ಸಂಡೂರು ತಾಲೂಕಿನ ತಾರಾನಗರ ಚಂದ್ರಶೇಖರಶಾಸ್ತ್ರಿ ತಂಡದಿಂದ ವೀರಾಗಸೆ ಕುಣಿತದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಸ್ವೀಪ್ ತಂಡದ ಅಧಿಕಾರಿ ಶಿವಪ್ಪ ಸುಬೇದಾರ್, ಸಿಡಿಪಿಒ ಉಷಾ, ಪೌರಾಯುಕ್ತ ಮರಿಲಿಂಗಪ್ಪ, ಶಿಕ್ಷಕ ವಿಜಯರಂಗಾರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.